ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ನೆಕ್ಸಾನ್ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸದ್ಯ ಮಾರಾಟಕ್ಕಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಡಿಸೈನ್‌ನಡಿಯಲ್ಲಿ ಅಭಿವೃದ್ಧಿಗೊಳಿಸುತ್ತಿರುವುದು ರೋಡ್ ಟೆಸ್ಟಿಂಗ್‌ನಲ್ಲಿ ಬಹಿರಂಗವಾಗಿದೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಟಾಟಾ ಸಂಸ್ಥೆಯು ಸದ್ಯ ಹೊಸ ಕಾರುಗಳ ಅಭಿವೃದ್ಧಿಗಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಕಳೆದ ಜನವರಿಯಲ್ಲಿ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ನೆಕ್ಸಾನ್, ಆಲ್‌ಟ್ರೊಜ್, ಬಝರ್ಡ್ ಮತ್ತು ಹಾರ್ನ್‌ಬಿಲ್ ಕಾರುಗಳು ಸಹ ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗುತ್ತಿದೆ. ರೋಡ್ ಟೆಸ್ಟಿಂಗ್ ವೇಳೆ ಈ ಕುರಿತು ಕೆಲವು ಮಾಹಿತಿಗಳು ಲಭ್ಯವಾಗಿದ್ದು, ಸ್ಪೋರ್ಟಿ ಲುಕ್ ಜೊತೆಗೆ ಬಲಿಷ್ಠವಾದ ಬಾಡಿ ಕಿಟ್ ಪಡೆದುಕೊಂಡಿವೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಇದರೊಂದಿಗೆ ಫೇಸ್‌ಲಿಫ್ಟ್ ನೆಕ್ಸಾನ್ ಕಾರಿನಲ್ಲಿ ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಎಲೆಕ್ಟ್ರಾನಿಕ್ ಸನ್‌ರೂಫ್, ಹೊಸ ವಿನ್ಯಾಸದ ಸ್ಪೋರ್ಟಿ ಬಂಪರ್, ಹೊಸದಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್, ವಿವಿಧ ಮಾಹಿತಿಗಳನ್ನು ಒಂದೇ ಸೂರಿನಡಿ ಒದಗಿಸಬಲ್ಲ ಹೊಸ ಇನ್‌ಸ್ಟ್ರುಮೆಂಟ್ ಕನ್‌ಸೋಲ್ ಸೇರಿದಂತೆ ಕೆಲವು ಮಹತ್ವದ ಬದಲಾವಣೆಗಳನ್ನು ಒದಗಿಸುವ ಸಾಧ್ಯತೆಗಳಿವೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಮತ್ತೊಂದು ಮಹತ್ವದ ಬದಲಾವಣೆ ಅಂದ್ರೆ, ಟಾಟಾ ಸಂಸ್ಥೆಯು 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ನೆಕ್ಸಾನ್ ಫೇಸ್‌ಲಿಫ್ಟ್ ಆವೃತ್ತಿಯ ಎಂಜಿನ್ ಅನ್ನು ಉನ್ನತಿಕರಿಸಿದ್ದು, ಪರ್ಫಾಮೆನ್ಸ್ ಮತ್ತು ಕಾರಿನ ಇಂಧನ ದಕ್ಷತೆಯಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ.

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ನಂತೆ, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ರ ಏಪ್ರಿಲ್ 1ರಿಂದ ಬಿಎಸ್-6 ವಾಹನಗಳು ರಸ್ತೆಗಿಳಿಯುತ್ತಿವೆ.

MOST READ: ಅಪಘಾತದ ವೇಳೆ ಏರ್‌ಬ್ಯಾಗ್ ಇದ್ರು ಫ್ಲಾಪ್- ಟೊಯೊಟಾ ವಿರುದ್ಧ ಕಾರು ಮಾಲೀಕನ ಆಕ್ರೋಶ..!

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.

MOST READ: ಪ್ರಪಾತಕ್ಕೆ ಬೀಳುತ್ತಿದ್ದ ಟಾಟಾ ನೆಕ್ಸಾನ್ ಕಾರು ಜಸ್ಟ್ ಮಿಸ್

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ಇದರಿಂದ ಟಾಟಾ ಮೋಟಾರ್ಸ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ಕಾರು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿವೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಿಡುಗಡೆಗೆ ಸಜ್ಜಾದ 2020ರ ಟಾಟಾ ನೆಕ್ಸಾನ್‌ ಕಾರಿನ ವಿಶೇಷತೆ ಏನು ಗೊತ್ತಾ?

ನೆಕ್ಸಾನ್ ಕೂಡಾ ಈಗಾಗಲೇ 5 ಸ್ಟಾರ್ ಸೆಫ್ಟಿ ಫೀಚರ್ಸ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಫೇಸ್‌ಲಿಫ್ಟ್ ಆವೃತ್ತಿ ಬಂದಲ್ಲಿ ಮತ್ತಷ್ಟು ಸದ್ದು ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೆಯೇ ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಗಳಲ್ಲೂ ತುಸು ದುಬಾರಿಯಾಗಿರಲಿವೆ.

Most Read Articles

Kannada
English summary
2020 Tata Nexon Facelift: Top Five Expected Features And Upgrades.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X