Just In
Don't Miss!
- News
ಆಟಿಕೆ ಬಂದೂಕು ತೋರಿಸಿ ಮುಖ್ಯಮಂತ್ರಿ ಅಣ್ಣನನ್ನೇ ಅಪಹರಿಸಿದ ಐನಾತಿಗಳು
- Finance
ಫಾಸ್ಟ್ಟ್ಯಾಗ್ ಡೆಡ್ಲೈನ್ಗೆ ಸ್ವಲ್ಪ ವಿನಾಯಿತಿ
- Sports
ವಿಶ್ವ ಟಿ20ಯಲ್ಲಿ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಆಡಲಿದ್ದಾರೆ: ಡ್ವೇನ್ ಬ್ರಾವೊ
- Technology
ಲಿಂಕ್ಸ್ ಗಳನ್ನು ಕ್ಯೂಆರ್ ಕೋಡ್ ಬಳಸಿ ಹಂಚಿಕೊಳ್ಳುವುದು ಹೇಗೆ?
- Lifestyle
ಮನೆ ನವೀಕರಣ ಮಾಡುತ್ತಿದ್ದೀರಾ? ತಪ್ಪದೇ ಲೇಖನ ಓದಿ
- Movies
ಜಯಲಲಿತಾ ಸಿನಿಮಾ ಬಳಿಕ ಮತ್ತೊಬ್ಬ ಸಿಎಂ ಬಯೋಪಿಕ್ ಸಾಧ್ಯತೆ
- Education
KSP: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ನೆಕ್ಸಾನ್ ಎಲೆಕ್ಟ್ರಿಕ್ ಜೊತೆಗೆ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯನ್ನು ಸಹ ಪ್ರದರ್ಶನಗೊಳಿಸಲಿದೆ ಟಾಟಾ
ಟಾಟಾ ಸಂಸ್ಥೆಯು ತನ್ನ ಜನಪ್ರಿಯ ನೆಕ್ಸಾನ್ ಕಾರಿನ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಮುಂಬರುವ ತಿಂಗಳು ಡಿಸೆಂಬರ್ 16ರಂದು ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್, ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಸಹ ಅನಾವರಣಗೊಳಿಸಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗಾಗಿ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಟಾಟಾ ಸಂಸ್ಥೆಯು ಹಿಮಾಲಯದ ಕಡಿದಾದ ಹಾದಿಗಳಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ಟೆಸ್ಟ್ ಡ್ರೈವ್ ಕೈಗೊಂಡಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಲಿದೆ. ಕೈಗೆಟುಕುವ ಬೆಲೆಯಲ್ಲಿ ಖರೀದಿ ಲಭ್ಯವಾಗಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬ್ಯಾಟರಿ ವೈಶಿಷ್ಟ್ಯತೆಯೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯುವ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಡಿಸೆಂಬರ್ 16ರಂದು ಅನಾವರಣಗೊಳ್ಳಲಿರುವ ಹೊಸ ಕಾರುಗಳು 2020ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿದೆ.

ಟಾಟಾ ನೆಕ್ಸಾನ್ ಇವಿ ಕಾರು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿವೆ ಎನ್ನಲಾಗಿದೆ.

ನೆಕ್ಸಾನ್ ಇವಿ ಬಿಡುಗಡೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಹೊಸ ಕಾರಿನ ಬೆಲೆ ಮಾಹಿತಿ ಬಗ್ಗೆಯು ಅಂದಾಜು ದರಗಳನ್ನು ಪ್ರಕಟಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎಂದಿದೆ. ಇನ್ನು ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಇದರೊಂದಿಗೆ ಸದ್ಯ ಮಾರುಕಟ್ಟೆಯಲ್ಲಿರುವ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಆವೃತ್ತಿ ಕೂಡಾ ಬಿಎಸ್-6 ಎಂಜಿನ್ ಆಯ್ಕೆಯೊಂದಿಗೆ ಉನ್ನತೀಕರಿಸಲಾಗಿದೆ.

ಎಂಜಿನ್ ಹೊರತಾಗಿ ನೆಕ್ಸಾನ್ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನ ಬೆಲೆಯಲ್ಲಿ ಪ್ರಸ್ತುತ ಮಾರುಕಟ್ಟೆಗಿಂತ ರೂ.30 ಸಾವಿರದಿಂದ ರೂ.1.20 ಲಕ್ಷದ ತನಕ ದುಬಾರಿ ಬೆಲೆ ಪಡೆಯಲಿದೆ.