ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಮೋಟಾರ್ಸ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಇದೇ ತಿಂಗಳು 19ಕ್ಕೆ ಅನಾವರಣಗೊಳ್ಳಲಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬರಲಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆಗಾಗಿ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಕಾರು ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದೆ. ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬ್ಯಾಟರಿ ವೈಶಿಷ್ಟ್ಯತೆಯೊಂದಿಗೆ ಸಾಮಾನ್ಯ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯಲ್ಲೇ ಹೊರ ವಿನ್ಯಾಸವನ್ನು ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಸದ್ಯಕ್ಕೆ ಅನಾವರಣಗೊಳ್ಳಲಿರುವ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು 2020ರ ಜನವರಿ ಅಥವಾ ಫೆಬ್ರುವರಿ ಅಂತ್ಯದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ನೆಕ್ಸಾನ್ ಇವಿಯಲ್ಲಿ 28.8kWh ಬ್ಯಾಟರಿ ಪ್ಯಾಕ್ ಹೊಂದಿದ್ದು, 95kW ಮೋಟಾರ್ ಜೋಡಣೆ ಮಾಡಲಿದೆ. ಈ ಮೂಲಕ ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಸಾಮಾನ್ಯ ನೆಕ್ಸಾನ್ ಕಾರಿನಲ್ಲಿ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗಾಗಿ ಎರವಲು ಪಡೆದುಕೊಳ್ಳಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎನ್ನಲಾಗಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಇದು ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಲಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಈ ಮೂಲಕ ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗಲಿರುವ ನೆಕ್ಸಾನ್ ಇವಿ ಕಾರು ಹ್ಯುಂಡೈ ಕೊನಾ ಮತ್ತು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರುಗಳಿಗೆ ಪೈಪೋಟಿ ನೀಡಲಿದ್ದು, 2020ರ ಫೆಬ್ರುವರಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಸಾರ್ವಜನಿಕವಾಗಿ ಪ್ರದರ್ಶನಗೊಳ್ಳಲಿದೆ.

Source: ACI

Most Read Articles

Kannada
English summary
Here are some key details surfaced in online about upcoming Tata Nexon electric car.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X