Just In
Don't Miss!
- News
ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು
- Movies
ಅಪ್ಪ-ಅಮ್ಮನ ಆತ್ಮಹತ್ಯೆ ಬಗ್ಗೆ ರಘು ಗೌಡ ಮಾತು
- Sports
ಐಪಿಎಲ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ವೇಗಿ ಡೇಲ್ ಸ್ಟೇನ್
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಯ್ದ ನಗರಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್
ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದ್ದು, 2020ರ ಜನವರಿ ಮಧ್ಯಂತರದಲ್ಲಿ ಖರೀದಿಗೆ ಲಭ್ಯವಾಗಲಿದೆ. ಬಿಡುಗಡೆಯ ನಂತರ ದೇಶದ ಕೆಲವೇ ನಗರಗಳಲ್ಲಿ ಹೊಸ ಎಲೆಕ್ಟ್ರಿಕ್ ಕಾರು ಖರೀದಿಗೆ ಲಭ್ಯವಿರಲಿದ್ದು, ಚಾರ್ಜಿಂಗ್ ಸೌಲಭ್ಯಗಳು ಹೆಚ್ಚಿದಂತೆ ಕಾರು ಮಾರಾಟ ಜಾಲವನ್ನು ವಿಸ್ತರಣೆ ಮಾಡಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಆಸಕ್ತಿ ಇದ್ದರೂ ಸಹ ದೂರದ ಪ್ರಯಾಣದ ವೇಳೆ ಚಾರ್ಜಿಂಗ್ ಸೌಲಭ್ಯಗಳ ಕೊರತೆಯಿಂದಾಗಿ ಬಹುತೇಕ ಕಾರು ಖರೀದಿದಾರರು ಎಲೆಕ್ಟ್ರಿಕ್ ಕಾರು ಖರೀದಿ ಹಿಂದೇಟು ಹಾಕುತ್ತಿದ್ದು, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಫೇಮ್ 2 ಯೋಜನೆಯಿಂದಾಗಿ ನಿಧಾನವಾಗಿ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಮೆಟ್ರೊ ನಗರಗಳಲ್ಲಿ ಮಾತ್ರವೇ ನೆಕ್ಸಾನ್ ಇವಿ ಕಾರು ಮಾರಾಟ ಮಾಡಲು ನಿರ್ಧರಿಸಿರುವ ಟಾಟಾ ಸಂಸ್ಥೆಯು ತದನಂತರವಾಗಿ ಎಲೆಕ್ಟ್ರಿಕ್ ಕಾರುಗಳ ಮಾರಾಟ ಜಾಲವನ್ನು ವಿಸ್ತರಿಸಲಿದೆ.

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗಾಗಿ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯಿಂದಾಗಿ ಗ್ರಾಹಕರ ನೆಚ್ಚಿನ ಕಾರು ಮಾದರಿಯಾಗಲಿದೆ.

ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬ್ಯಾಟರಿ ವೈಶಿಷ್ಟ್ಯತೆಯೊಂದಿಗೆ ಸಾಮಾನ್ಯ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯಲ್ಲೇ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನದಿಂದಾಗಿ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿರುವ ಟಾಟಾ ನೆಕ್ಸಾನ್ ಇವಿ ಕಾರು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿವೆ ಎನ್ನಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎಂದಿದೆ.

ಇನ್ನು ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಇದರೊಂದಿಗೆ ಸದ್ಯ ಮಾರುಕಟ್ಟೆಯಲ್ಲಿರುವ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಆವೃತ್ತಿ ಕೂಡಾ ಬಿಎಸ್-6 ಎಂಜಿನ್ ಆಯ್ಕೆಯೊಂದಿಗೆ ಉನ್ನತೀಕರಿಸಲಾಗಿದೆ.

ಎಂಜಿನ್ ಹೊರತಾಗಿ ನೆಕ್ಸಾನ್ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನ ಬೆಲೆಯಲ್ಲಿ ಪ್ರಸ್ತುತ ಮಾರುಕಟ್ಟೆಗಿಂತ ರೂ.30 ಸಾವಿರದಿಂದ ರೂ.1.20 ಲಕ್ಷದ ತನಕ ದುಬಾರಿ ಬೆಲೆ ಪಡೆಯಲಿದೆ.