Just In
- 15 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 59 min ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 1 hr ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆ ಮಾಹಿತಿ ಬಹಿರಂಗ
ಟಾಟಾ ಸಂಸ್ಥೆಯು ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಫೇಸ್ಲಿಫ್ಟ್ ಆವೃತ್ತಿಯನ್ನು ಇದೇ ವರ್ಷಾತ್ಯಂಕ್ಕೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಈ ಮಧ್ಯೆ ನೆಕ್ಸಾನ್ ಆವೃತ್ತಿಯ ಎಲೆಕ್ಟ್ರಿಕ್ ಮಾದರಿಯ ಬಿಡುಗಡೆಯ ಮಾಹಿತಿಯನ್ನು ಸಹ ಹಂಚಿಕೊಂಡಿದೆ.
ಟಾಟಾ ಸಂಸ್ಥೆಯು ಸದ್ಯ ಎಲೆಕ್ಟ್ರಿಕ್ ಕಾರುಗಳ ಬ್ಯಾಟರಿ ಬಾಳಿಕೆ ಮತ್ತು ಅತ್ಯುತ್ತಮ ಪರ್ಫಾಮೆನ್ಸ್ ಉದ್ದೇಶಕ್ಕಾಗಿ ಜಿಪ್ಟ್ರಾನ್ ತಂತ್ರಜ್ಞಾನ ಅಭಿವೃದ್ದಿಗೊಳಿಸುವ ಮೂಲಕ ಅತ್ಯುತ್ತಮ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್ಪೋದಲ್ಲಿ ವಿವಿಧ ಮಾದರಿಯ ಮೂರು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಪ್ರದರ್ಶನಗೊಳಿಸಲು ಉದ್ದೇಶಸಿಲಾಗಿದೆ.
ಟಾಟಾ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಗೋರ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, 2020ರ ಮಾರ್ಚ್ ಅಂತ್ಯಕ್ಕೆ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್ಟ್ರೋಜ್ ಎಲೆಕ್ಟ್ರಿಕ್ ಕಾರನ್ನು ರಸ್ತೆಗಿಳಿಸಲಿದೆ.
2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಜೊತೆಗೆ ಧೀರ್ಘಬಾಳಿಕೆ ಬ್ಯಾಟರಿ ಪ್ರೇರಿತ ಹೊಸ ಟಿಗೋರ್ ಇವಿ ಕೂಡಾ ಪ್ರದರ್ಶನಗೊಳ್ಳಲಿದ್ದು, ಇದರಲ್ಲಿ ನೆಕ್ಸಾನ್ ಇವಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.
ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಕುರಿತಂತೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಟಾಟಾ ಸಂಸ್ಥೆಯು 2018-19ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ(2019ರ ಜನವರಿಯಿಂದ ಮಾರ್ಚ್) ಬಿಡುಗಡೆ ಪಕ್ಕಾ ಎಂದಿದೆ. ಇದರ ಜೊತೆಯಲ್ಲಿ ಹೊಸ ಕಾರಿನ ಬೆಲೆ ಮತ್ತು ಮೈಲೇಜ್ ಮಾಹಿತಿಯನ್ನು ಸಹ ಹಂಚಿಕೊಂಡಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿ,ಸುವ ತವಕದಲ್ಲಿದೆ.
ಪ್ರತಿ ಚಾರ್ಜ್ಗೆ 300ಕಿ.ಮೀ ಮೈಲೇಜ್
ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ ನೆಕ್ಸಾನ್ ಇವಿ ಕಾರು ಜಿಪ್ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಪ್ರತಿ ಚಾರ್ಜ್ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ.
ಕಾರಿನ ಬೆಲೆ(ಅಂದಾಜು ದರ)
ನೆಕ್ಸಾನ್ ಇವಿ ಬಿಡುಗಡೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಹೊಸ ಕಾರಿನ ಬೆಲೆ ಮಾಹಿತಿ ಬಗ್ಗೆಯು ಅಂದಾಜು ದರಗಳನ್ನು ಪ್ರಕಟಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎಂದಿದೆ.
ಅಂದರೆ ಸಾಮಾನ್ಯ ನೆಕ್ಸಾನ್ ಕಾರಿಗಿಂತಲೂ ರೂ. 5 ಲಕ್ಷದಿಂದ ರೂ.6 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭವಿಷ್ಯದ ವಾಹನ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಸುಳಿವು ನೀಡಿದ್ದು, ಬಿಡುಗಡೆಯ ಸಂಬಂಧ ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೂ ಈಗಾಗಲೇ ಚಾಲನೆ ನೀಡಲಾಗಿದೆ.
MOST READ: ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!
ಇನ್ನು ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.
MOST READ: ರೂ. 5 ಲಕ್ಷದೊಳಗೆ ದೊರೆಯುವ ಟಾಪ್ ಕಾರ್ಗಳು
ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಎಂಜಿನಿಯರ್ ತಂಡದೊಂದಿಗೆ ಜಿಪ್ಟ್ರಾನ್ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಿರುವ ಟಾಟಾ ಸಂಸ್ಥೆಯು, ಹೊಸ ಇವಿ ಡ್ರೈವ್ ತಂತ್ರಜ್ಞಾನದ ಸಾಧಕ-ಬಾಧಕಗಳ ಕುರಿತಾಗಿ ಪರೀಕ್ಷಿಸಲು ಸುಮಾರು 10 ಲಕ್ಷ ಕಿ.ಮಿ ವಿಶ್ವಪರ್ಯಟನೆ ಕೈಗೊಂಡಿತ್ತು.
ಪರೀಕ್ಷಾರ್ಥ ಚಾಲನೆ ವೇಳೆ ಹೊಸ ತಂತ್ರಜ್ಞಾನದ ನ್ಯೂನತೆಗಳನ್ನು ಸರಿಪಡಿಸುತ್ತಲೇ ಅಂತಿಮ ಹಂತದ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದು, ಟಾಟಾ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್ಟ್ರಾನ್ ತಂತ್ರಜ್ಞಾನವು ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡುವುದಾಗಿ ಭರವಸೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಟಾಟಾ ಸಂಸ್ಥೆಯೇ ಅಧಿಕೃತವಾಗಿ ಜಿಪ್ಟ್ರಾನ್ ತಂತ್ರಜ್ಞಾನ ವಿಶೇಷತೆಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್ಟ್ರಾನ್ ತಂತ್ರಜ್ಞಾನವು ಹೃದಯವಿದ್ದಂತೆ ಎಂದು ಬಣ್ಣಿಸಿದೆ.
ಜಿಪ್ಟ್ರಾನ್ ಪವರ್ಟ್ರೈನ್ ತಂತ್ರಜ್ಞಾನವು ಹವಲು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್ಟ್ರೈನ್ನಲ್ಲಿ ಅಳವಡಿಸಲಾಗಿದೆ.
ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.
8 ವರ್ಷಗಳ ವಾರಂಟಿ..!
ಇದು ನಿಮಗೆ ಅಚ್ಚರಿಯಾದರೂ ನಿಜ. ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್ಟ್ರೈನ್ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.
ಈ ಮೂಲಕ ಆಟೋ ಉದ್ಯಮದಲ್ಲಿ ಇದುವರೆಗೆ ಅಭಿವೃದ್ದಿಪಡಿಸಲಾಗದ ಸುಧಾರಿತ ಮಾದರಿಯ ಇವಿ ಪವರ್ಟ್ರೈನ್ ತಂತ್ರಜ್ಞಾನವನ್ನು ಟಾಟಾ ಅಭಿವೃದ್ದಿಪಡಿಸುವಲ್ಲಿ ಯಶಸ್ವಿಯಾಗಿದ್ದು, ಭವಿಷ್ಯದ ಟಾಟಾ ಎಲೆಕ್ಟ್ರಿಕ್ ಕಾರುಗಳಲ್ಲಿ ಈ ಹೊಸ ತಂತ್ರಜ್ಞಾನವು ಬಳಕೆಯಾಗಲಿದೆ.