Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಿಮಾಲಯದ ಕಡಿದಾದ ಹಾದಿಗಳಲ್ಲಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮೊದಲ ಸವಾರಿ ಯಶಸ್ವಿ..!
ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಪರೀಕ್ಷೆಗಾಗಿ ಹಿಮಾಲಯದ ಕಡಿದಾದ ಹಾದಿಗಳಲ್ಲಿ ಟೆಸ್ಟ್ ಡ್ರೈವ್ ಕೈಗೊಳ್ಳಲಾಗಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಟೆಸ್ಟ್ ಡ್ರೈವ್‌ಗಾಗಿ ಬಾಲಿವುಡ್ ಫಿಟ್‌ನೆಸ್ ಐಕಾನ್ ಮಿಲಿಂದ್ ಸೋಮನ್ ಜೊಡಿ ಕೂಡಾ ಭಾಗಿಯಾಗಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಟಾಟಾ ಸಂಸ್ಥೆಯು ಸದ್ಯ ಎಲೆಕ್ಟ್ರಿಕ್ ಕಾರುಗಳ ಬ್ಯಾಟರಿ ಬಾಳಿಕೆ ಮತ್ತು ಅತ್ಯುತ್ತಮ ಪರ್ಫಾಮೆನ್ಸ್ ಉದ್ದೇಶಕ್ಕಾಗಿ ಜಿಪ್‌ಟ್ರಾನ್ ತಂತ್ರಜ್ಞಾನ ಅಭಿವೃದ್ದಿಗೊಳಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ನೆಕ್ಸಾನ್ ಇವಿ ಸೇರಿ ವಿವಿಧ ಮಾದರಿಯ ಮೂರು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಪ್ರದರ್ಶನಗೊಳಿಸಲು ಉದ್ದೇಶಸಿಲಾಗಿದೆ.

ಟಾಟಾ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಗೋರ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, 2020ರ ಮಾರ್ಚ್ ಅಂತ್ಯಕ್ಕೆ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್‌ಟ್ರೋಜ್ ಎಲೆಕ್ಟ್ರಿಕ್ ಕಾರನ್ನು ರಸ್ತೆಗಿಳಿಸಲಿದೆ. 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್‌ಟ್ರೋಜ್ ಎಲೆಕ್ಟ್ರಿಕ್ ಕಾರಿನ ಜೊತೆಗೆ ಧೀರ್ಘಬಾಳಿಕೆ ಬ್ಯಾಟರಿ ಪ್ರೇರಿತ ಹೊಸ ಟಿಗೋರ್ ಇವಿ ಕೂಡಾ ಪ್ರದರ್ಶನಗೊಳ್ಳಲಿದ್ದು, ಇದರಲ್ಲಿ ನೆಕ್ಸಾನ್ ಇವಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಕುರಿತಂತೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಟಾಟಾ ಸಂಸ್ಥೆಯು 2018-19ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ(2019ರ ಜನವರಿಯಿಂದ ಮಾರ್ಚ್) ಬಿಡುಗಡೆ ಪಕ್ಕಾ ಎಂದಿದೆ. ಇದರ ಜೊತೆಯಲ್ಲಿ ಹೊಸ ಕಾರಿನ ಬೆಲೆ ಮತ್ತು ಮೈಲೇಜ್ ಮಾಹಿತಿಯನ್ನು ಸಹ ಹಂಚಿಕೊಂಡಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿ,ಸುವ ತವಕದಲ್ಲಿದೆ.

ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್
ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ ನೆಕ್ಸಾನ್ ಇವಿ ಕಾರು ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ.
ಕಾರಿನ ಬೆಲೆ(ಅಂದಾಜು ದರ)
ನೆಕ್ಸಾನ್ ಇವಿ ಬಿಡುಗಡೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಹೊಸ ಕಾರಿನ ಬೆಲೆ ಮಾಹಿತಿ ಬಗ್ಗೆಯು ಅಂದಾಜು ದರಗಳನ್ನು ಪ್ರಕಟಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎಂದಿದೆ.
ಅಂದರೆ ಸಾಮಾನ್ಯ ನೆಕ್ಸಾನ್ ಕಾರಿಗಿಂತಲೂ ರೂ. 5 ಲಕ್ಷದಿಂದ ರೂ.6 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭವಿಷ್ಯದ ವಾಹನ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಸುಳಿವು ನೀಡಿದ್ದು, ಬಿಡುಗಡೆಯ ಸಂಬಂಧ ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೂ ಈಗಾಗಲೇ ಚಾಲನೆ ನೀಡಲಾಗಿದೆ.

ಇನ್ನು ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಎಂಜಿನಿಯರ್ ತಂಡದೊಂದಿಗೆ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಿರುವ ಟಾಟಾ ಸಂಸ್ಥೆಯು, ಹೊಸ ಇವಿ ಡ್ರೈವ್ ತಂತ್ರಜ್ಞಾನದ ಸಾಧಕ-ಬಾಧಕಗಳ ಕುರಿತಾಗಿ ಪರೀಕ್ಷಿಸಲು ಸುಮಾರು 10 ಲಕ್ಷ ಕಿ.ಮಿ ವಿಶ್ವಪರ್ಯಟನೆ ಕೈಗೊಂಡಿತ್ತು.

ಪರೀಕ್ಷಾರ್ಥ ಚಾಲನೆ ವೇಳೆ ಹೊಸ ತಂತ್ರಜ್ಞಾನದ ನ್ಯೂನತೆಗಳನ್ನು ಸರಿಪಡಿಸುತ್ತಲೇ ಅಂತಿಮ ಹಂತದ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದು, ಟಾಟಾ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್‌ಟ್ರಾನ್ ತಂತ್ರಜ್ಞಾನವು ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡುವುದಾಗಿ ಭರವಸೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಟಾಟಾ ಸಂಸ್ಥೆಯೇ ಅಧಿಕೃತವಾಗಿ ಜಿಪ್‌ಟ್ರಾನ್ ತಂತ್ರಜ್ಞಾನ ವಿಶೇಷತೆಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್‌ಟ್ರಾನ್ ತಂತ್ರಜ್ಞಾನವು ಹೃದಯವಿದ್ದಂತೆ ಎಂದು ಬಣ್ಣಿಸಿದೆ.

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹವಲು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

8 ವರ್ಷಗಳ ವಾರಂಟಿ..!
ಇದು ನಿಮಗೆ ಅಚ್ಚರಿಯಾದರೂ ನಿಜ. ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಈ ಮೂಲಕ ಆಟೋ ಉದ್ಯಮದಲ್ಲಿ ಇದುವರೆಗೆ ಅಭಿವೃದ್ದಿಪಡಿಸಲಾಗದ ಸುಧಾರಿತ ಮಾದರಿಯ ಇವಿ ಪವರ್‌ಟ್ರೈನ್ ತಂತ್ರಜ್ಞಾನವನ್ನು ಟಾಟಾ ಅಭಿವೃದ್ದಿಪಡಿಸುವಲ್ಲಿ ಯಶಸ್ವಿಯಾಗಿದ್ದು, ಭವಿಷ್ಯದ ಟಾಟಾ ಎಲೆಕ್ಟ್ರಿಕ್ ಕಾರುಗಳಲ್ಲಿ ಈ ಹೊಸ ತಂತ್ರಜ್ಞಾನವು ಬಳಕೆಯಾಗಲಿದೆ.