ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರು ಆವೃತ್ತಿಯಾದ ನೆಕ್ಸಾನ್ ಇವಿ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಇದೇ ತಿಂಗಳು 17ಕ್ಕೆ ಮುಂಬೈನಲ್ಲಿ ಅನಾವರಣಗೊಳಿಸಲು ನಿರ್ಧರಿಸಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗಾಗಿ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಟಾಟಾ ಸಂಸ್ಥೆಯು ಹಿಮಾಲಯದ ಕಡಿದಾದ ಹಾದಿಗಳಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಈಗಾಗಲೇ ವಿವಿಧ ಹಂತದ ಟೆಸ್ಟ್ ಡ್ರೈವ್ ಪೂರ್ಣಗೊಳಿಸಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಲಿದೆ. ಕೈಗೆಟುಕುವ ಬೆಲೆಯಲ್ಲಿ ಖರೀದಿ ಲಭ್ಯವಾಗಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬ್ಯಾಟರಿ ವೈಶಿಷ್ಟ್ಯತೆಯೊಂದಿಗೆ ಸಾಮಾನ್ಯ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯಲ್ಲೇ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

17ರಂದು ಅನಾವರಣಗೊಳ್ಳಲಿರುವ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು 2020ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ನೆಕ್ಸಾನ್ ಇವಿ ಕಾರು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿವೆ ಎನ್ನಲಾಗಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ನೆಕ್ಸಾನ್ ಇವಿ ಬಿಡುಗಡೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಹೊಸ ಕಾರಿನ ಬೆಲೆ ಮಾಹಿತಿ ಬಗ್ಗೆಯು ಅಂದಾಜು ದರಗಳನ್ನು ಪ್ರಕಟಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎಂದಿದೆ. ಇನ್ನು ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

MOST READ: ಗಸ್ತು ನಿರ್ವಹಣೆಗಾಗಿ ಮತ್ತೊಂದು ಅತ್ಯಾಧುನಿಕ ಕಾರು ಖರೀದಿಸಲಿದ್ದಾರೆ ದುಬೈ ಪೊಲೀಸರು..!

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಇದರೊಂದಿಗೆ ಸದ್ಯ ಮಾರುಕಟ್ಟೆಯಲ್ಲಿರುವ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಆವೃತ್ತಿ ಕೂಡಾ ಬಿಎಸ್-6 ಎಂಜಿನ್ ಆಯ್ಕೆಯೊಂದಿಗೆ ಉನ್ನತೀಕರಿಸಲಾಗಿದೆ.

MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?

ಇದೇ ತಿಂಗಳು 17ರಂದು ಅನಾವರಣಗೊಳ್ಳಲಿದೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಎಂಜಿನ್ ಹೊರತಾಗಿ ನೆಕ್ಸಾನ್ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನ ಬೆಲೆಯಲ್ಲಿ ಪ್ರಸ್ತುತ ಮಾರುಕಟ್ಟೆಗಿಂತ ರೂ.30 ಸಾವಿರದಿಂದ ರೂ.1.20 ಲಕ್ಷದ ತನಕ ದುಬಾರಿ ಬೆಲೆ ಪಡೆಯಲಿದೆ.

Most Read Articles

Kannada
English summary
Tata Motors will unviel of its first electric SUV based on the Nexon in India on December 17, 2019.
Story first published: Monday, December 2, 2019, 12:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X