ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಟಾಟಾ ಸಂಸ್ಥೆಯು ಸದ್ಯ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್, ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳನ್ನು ಅನಾವರಣಗೊಳಿಸಿ ಬಿಡುಗಡೆಯಾಗಿ ಸಿದ್ದತೆ ನಡೆಸುತ್ತಿದ್ದು, ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು 2020ರ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯ ಸುಳಿವು ನೀಡಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಟಾಟಾ ಸಂಸ್ಥೆಯು ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಚ್ಚ ಹೊಸ ಕಾರು ಮಾದರಿಗಳಾದ ಆಲ್‌ಟ್ರೊಜ್, ನೆಕ್ಸಾನ್ ಎಲೆಕ್ಟ್ರಿಕ್, ಗ್ರಾವಿಟಾಸ್ ಜೊತೆಗೆ ಬಿಎಸ್-6 ಕಾರುಗಳಾದ ನೆಕ್ಸಾನ್, ಹ್ಯಾರಿಯರ್, ಟಿಗೋರ್, ಟಿಯಾಗೋ ಮತ್ತು ಹೆಕ್ಸಾ ಕಾರುಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳಿಂತಲೂ ಹೊಸ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗೊಳಿಸಲು ಸಜ್ಜಾಗುತ್ತಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಹೊಸ ಕಾರುಗಳ ಉತ್ಪಾದನೆಗಾಗಿ ಟಾಟಾ ಸಂಸ್ಥೆಯು ಒಮೆಗಾ ಮತ್ತು ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, 2020ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಮತ್ತು ಫೇಸ್‌ಲಿಫ್ಟ್ ಕಾರುಗಳು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ರಸ್ತೆಗಿಳಿಯಲಿವೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಬಿಡುಗಡೆಗಾಗಿ ಹೊಸ ಕಾರುಗಳು ಸದ್ಯ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯವನ್ನ ಉನ್ನತೀಕರಿಸಲಾಗಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಟಾಟಾ ಸಂಸ್ಥೆಯು ಮುಂಬರುವ ಫೆಬ್ರುವರಿ ಅಂತ್ಯದವರೆಗೂ ಮಾತ್ರವೇ ಬಿಎಸ್-4 ಕಾರುಗಳನ್ನು ಮಾರಾಟ ಮಾಡಲಿದ್ದು, ತದನಂತರವಷ್ಟೇ ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿ ಹೊಂದಿರುವ ಹ್ಯಾರಿಯರ್, ನೆಕ್ಸಾನ್, ಹೆಕ್ಸಾ, ಟಿಗೋರ್ ಮತ್ತು ಟಿಯಾಗೋ ಕಾರುಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.

ಅದಕ್ಕೂ ಮುನ್ನ ಆಲ್‌ಟ್ರೊಜ್ ಕಾರನ್ನು 2020ರ ಆರಂಭದಲ್ಲಿ ಬಿಡುಗಡೆ ನಿರ್ಧರಿಸಿರುವ ಟಾಟಾ ಸಂಸ್ಥೆಯ ತದನಂತರ 7 ಸೀಟರ್ ಎಸ್‌ಯುವಿ ಮಾದರಿಯಾದ ಗ್ರಾವಿಟಾಸ್ ಕಾರನ್ನು ಕೂಡಾ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಮೇ ಅಥವಾ ಜೂನ್ ಅವಧಿಯಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಹೀಗಾಗಿ ಮೊದಲ ಹಂತವಾಗಿ 2020ರ ಜನವರಿಯಲ್ಲಿ ಆಲ್‌ಟ್ರೋಜ್ ಕಾರು ಬಿಡುಗಡೆಯಾಗಲಿದ್ದರೆ ಫೆಬ್ರುವರಿ ಅಥವಾ ಮಾರ್ಚ್ ಅಂತ್ಯಕ್ಕೆ ಬಿಎಸ್-6 ಕಾರುಗಳು ಮತ್ತು ತದನಂತರವಷ್ಟೇ ಜೂನ್ ಆರಂಭದಲ್ಲಿ 7 ಸೀಟರ್ ಗ್ರಾವಿಟಾಸ್ ಎಸ್‌ಯುವಿ ಕಾರು ಖರೀದಿಗೆ ಲಭ್ಯವಾಗಲಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಕಾರು ಫೇಸ್‌ಲಿಫ್ಟ್ ಆವೃತ್ತಿಯಲ್ಲೂ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿನ್ ಆಯ್ಕೆಗಳನ್ನೇ ಉನ್ನತೀಕರಿಸಲಾಗಿದೆ.

MOST READ: ಗಂಡನಿಗೆ ಸರ್‍‍ಪ್ರೈಸ್ ಗಿಫ್ಟ್ ನೀಡಿದ ಹೆಂಡತಿ..!

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಅದರ ಹೊರತಾಗಿ ಹೊಸ ನೆಕ್ಸಾನ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನ ಬೆಲೆಯು ಪ್ರಸ್ತುತ ಮಾರುಕಟ್ಟೆಗಿಂತಲೂ ರೂ.30 ಸಾವಿರದಿಂದ(ಪೆಟ್ರೋಲ್) ರೂ.1.20 ಲಕ್ಷದ(ಡೀಸೆಲ್ ವರ್ಷನ್) ತನಕ ದುಬಾರಿ ಬೆಲೆ ಪಡೆಯಲಿದೆ.

MOST READ: ಅರ್ಜಿ ಸಲ್ಲಿಸಿದ ದಿನವೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್ ಟೆಸ್ಟ್..!

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಇನ್ನು ಟಾಟಾ ಸಂಸ್ಥೆಯು ನೆಕ್ಸಾನ್ ಫೇಸ್‌ಲಿಫ್ಟ್ ಜೊತೆಗೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸಹ ಅಭಿವೃದ್ದಿಗೊಳಿಸಿ ಬಿಡುಗಡೆಗಾಗಿ ಸಿದ್ದಪಡಿಸಿದ್ದು, ಹೊಸ ಕಾರು ಅತ್ಯುತ್ತಮ ಬ್ಯಾಟರಿ ಸೌಲಭ್ಯದೊಂದಿಗೆ 300ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿದೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ..!

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಇದರೊಂದಿಗೆ ನೆಕ್ಸಾನ್ ಎಲೆಕ್ಟ್ರಿಕ್ ಕೂಡಾ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ಬಳಿಕವಷ್ಟೇ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಪ್ರತಿ ಚಾರ್ಜ್‌ಗೆ 300 ಕಿ.ಮೀ ಮೈಲೇಜ್ ನೀಡಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source: Rushlane

Most Read Articles

Kannada
English summary
Tata Nexon Facelift BS6 spied testing new details. Read more in Kannada.
Story first published: Monday, December 23, 2019, 16:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X