ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಸದ್ಯ ಮಾರಾಟಕ್ಕಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಡಿಸೈನ್‌ನಡಿಯಲ್ಲಿ ಅಭಿವೃದ್ಧಿಗೊಳಿಸುತ್ತಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಟಾಟಾ ಸಂಸ್ಥೆಯು ಸದ್ಯ ಹೊಸ ಕಾರು ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳಿಂದ ಜೆಎಲ್ಆರ್(ಜಾಗ್ವಾರ್, ಲ್ಯಾಂಡ್ ರೋವರ್ ಮತ್ತು ರೇಂಜ್ ರೋವರ್) ಸಂಸ್ಥೆಯೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಕಾರುಗಳ ಡಿಸೈನ್ ಮತ್ತು ಎಂಜಿನ್ ದಕ್ಷತೆಯನ್ನು ಹೆಚ್ಚಿಸುವ ಸಂಬಂಧ ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿರುವುದು ಕಾರುಗಳ ವಿನ್ಯಾಸಕ್ಕೆ ಹೊಸ ಮೆರಗು ತಂದಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಜೊತೆಗೆ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗಳಿಗೆ ಅನುಗುಣವಾಗಿ ಹೊಸ ಕಾರುಗಳ ಎಂಜಿನ್ ಅನ್ನು ಉನ್ನತಿಕರಿಸಲಾಗುತ್ತಿದ್ದು, ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆ ಮೂಲಕ ಹೊಸ ಎಂಜಿನ್ ದಕ್ಷತೆಯನ್ನು ಪರೀಕ್ಷೆ ಮಾಡಲಾಗುತ್ತಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ಹಾಗೆಯೇ ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ಕ್ಕೆ ಬಿಎಸ್-6 ವಾಹನಗಳು ರಸ್ತೆಗಿಳಿಯುತ್ತಿವೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕಾರು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್‌ನೊಂದಿಗೆ ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿವೆ. ಇದು ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಸಾಕಷ್ಟು ಸಹಕಾರಿಯಾಗಲಿದ್ದು, ಹೊಸ ಎಂಜಿನ್‌ಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ಸೌಲಭ್ಯವನ್ನು ಅಳವಡಿಸಲಾಗುತ್ತಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಬಿಎಸ್-6 ಎಂಜಿನ್‌ಗಳು ಸಾಮಾನ್ಯ ಮಾದರಿಯ ಎಂಜಿನ್‌ಗಳಿಂತಲೂ ತುಸು ದುಬಾರಿಯಾಗಿದ್ದರೂ ಸಹ ಮಾಲಿನ್ಯ ತಡೆಯುವುದರ ಜೊತೆಗೆ ಎಂಜಿನ್ ದಕ್ಷತೆ ಹೆಚ್ಚಲು ಸಹಕರಿಸುವುದಲ್ಲದೇ ಮೈಲೇಜ್ ಪ್ರಮಾಣದಲ್ಲಿ ಶೇ. 10ರಷ್ಟು ಹೆಚ್ಚಳವಾಗುವ ಬಗ್ಗೆ ಭರವಸೆ ನೀಡಲಾಗಿದೆ.

MOST READ: ಕಾರ್ ರೀಪೆರಿಗೆ 3 ಲಕ್ಷ ಕೇಳಿದ್ದ ಡೀಲರ್ಸ್ ಅಸಲಿಯತ್ತು ಬಯಲಾಗಿದ್ದು ಲೋಕಲ್ ಗ್ಯಾರೇಜ್‌ನಲ್ಲಿ..!

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಒಟ್ಟಿನಲ್ಲಿ ಟಾಟಾ ಸಂಸ್ಥೆಯು ಗುಣಮಟ್ಟದ ಕಾರು ಉತ್ಪನ್ನಗಳೊಂದಿಗೆ ಇದೀಗ ಪರಿಸರಕ್ಕೆ ಪೂರಕವಾದ ಬಿಎಸ್-6 ಎಂಜಿನ್ ಮಾದರಿಯ ವಾಹನಗಳ ಅಭಿವೃದ್ಧಿಗೂ ಕೈಹಾಕಿದ್ದು, ತನ್ನ ಪ್ರತಿಸ್ಪರ್ಧಿ ಕಾರು ಉತ್ಪಾದನಾ ಸಂಸ್ಥೆಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ಇದಲ್ಲದೇ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರುಗಳನ್ನು ಕೂಡಾ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಮರುಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಸ್ಪಾಟ್ ಟೆಸ್ಟಿಂಗ್ ವೇಳೆ ಹೊಸ ನೆಕ್ಸಾನ್ ಕಾರು ಸ್ಪೋರ್ಟಿ ಲುಕ್ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ಸುಳಿವು ನೀಡಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್

ನೆಕ್ಸಾನ್ ಈಗಾಗಲೇ 5 ಸ್ಟಾರ್ ಸೆಫ್ಟಿ ಫೀಚರ್ಸ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಫೇಸ್‌ಲಿಫ್ಟ್ ಆವೃತ್ತಿ ಬಂದಲ್ಲಿ ಮತ್ತಷ್ಟು ಸದ್ದು ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೆಯೇ ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಗಳಲ್ಲೂ ತುಸು ದುಬಾರಿಯಾಗಿರಲಿವೆ.

Most Read Articles

Kannada
English summary
Tata Nexon Facelift Spotted Testing. Read in Kannada.
Story first published: Saturday, May 11, 2019, 11:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X