ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಲಿದೆ ಟಾಟಾ ಟಿಯಾಗೋ ಇವಿ
ಟಾಟಾ ಮೋಟಾರ್ಸ್ ಸಂಸ್ಥೆಯು ಭವಿಷ್ಯ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿಗಾಗಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಟಿಯಾಗೋ ಕಾರಿನ ಎಲೆಕ್ಟ್ರಿಕ್ ವರ್ಷನ್ ಅನ್ನು ಸಹ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

2020ರ ಹೊತ್ತಿಗೆ ದೇಶಾದ್ಯಂತ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗಾಗಿ ಎದರು ನೋಡುತ್ತಿದ್ದು, ಮಾರುತಿ ಸುಜುಕಿ ಸಂಸ್ಥೆಯು ವ್ಯಾಗನ್ ಆರ್ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆಗೆ ಸಜ್ಜಾದ ಬೆನ್ನಲ್ಲೇ ಟಾಟಾ ಸಂಸ್ಥೆಯು ಸಹ ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಟಾಟಾ ಸಂಸ್ಥೆಯು ಈಗಾಗಲೇ ಟಿಗೋರ್ ಎಲೆಕ್ಟ್ರಿಕ್ ಮತ್ತು ಟಿಯಾಗೋ ಎಲೆಕ್ಟ್ರಿಕ್ ಕಾರುಗಳನ್ನು ನಿರ್ಮಾಣ ಮಾಡಿ ಪ್ರದರ್ಶನ ಮಾಡಿದ್ದು, ಹೊಸ ಕಾರನ್ನು ಅಧಿಕೃತವಾಗಿ ಮಾರುಕಟ್ಟೆಗೆ ಪರಿಚಯಿಸುವುದೊಂದೆ ಬಾಕಿಯಿದೆ.

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಟಾಟಾ ಸಂಸ್ಥೆಯು ಅಭಿವೃದ್ಧಿಗೊಂಡಿರುವ ಹೊಸ ಕಾರನ್ನು ಈಗಲೇ ಬಿಡುಗಡೆ ಮಾಡುವಷ್ಟು ಪೂರ್ಣ ತಯಾರಿ ಇದ್ದರೂ ಸಹ ಹೊಸ ಕಾರು ಬಿಡುಗಡೆಗೆ ವಿಳಂಬ ಮಾಡುತ್ತಿದೆ. ಯಾಕೆಂದ್ರೆ ಕಾರನ್ನು ಬಿಡುಗಡೆ ಮಾಡಿದರೂ ಅಗತ್ಯ ಚಾರ್ಜಿಂಗ್ ಸ್ಟೆಷನ್ ಇಲ್ಲದಿರುವುದೇ ಬಿಡುಗಡೆಗೆ ವಿಳಂಬವಾಗುತ್ತಿದೆ.

ಹೀಗಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಬೆಂಬಲಿಸುವ ಸಂಬಂಧ ದೇಶದ ಪ್ರಮುಖ ನಗರಗಳಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಬೃಹತ್ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಈ ಯೋಜನೆಗೆ ಆಟೋ ಉತ್ಪಾದನಾ ಸಂಸ್ಥೆಗಳು ಕೈಜೋಡಿಸಿವೆ.

2020ರ ಹೊತ್ತಿಗೆ ದೇಶಾದ್ಯಂತ 10 ಸಾವಿರಕ್ಕೂ ಹೆಚ್ಚು ಚಾರ್ಜಿಂಗ್ ಸ್ಟೆಷನ್‌ಗಳು ಕಾರ್ಯನಿರ್ವಹಣೆ ಮಾಡಲಿದ್ದು, ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೇ ಖಾಸಗಿ ಸಂಸ್ಥೆಗಳು ಸಹ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರೋತ್ಸಾಹ ಧನ ನೀಡುತ್ತಿವೆ.

ಈ ಬಗ್ಗೆ ಮಾತನಾಡಿರುವ ಟಾಟಾ ಸಿಇಒ ಗುಂಟೆರ್ ಬುಟ್ಸ್ಚೆಕ್ ಅವರು ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಪೂರಕವಾಗಿ ಭಾರತದಲ್ಲಿ ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳು ಬೇಕಿದ್ದು, 2020ರ ವೇಳೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಪೂರಕವಾದ ಸೌಲಭ್ಯಗಳನ್ನು ನಿರೀಕ್ಷೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಹೀಗಾಗಿ ಟಾಟಾ ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರುಗಳು 2020ರ ಆರಂಭದಲ್ಲಿ ಬಿಡುಗಡೆಯಾಗುವುದು ನಿಶ್ಚಿತವಾಗಿದ್ದು, ಮತ್ತೊಂದು ಎಲೆಕ್ಟ್ರಿಕ್ ಕಾರು ಮಾದರಿಯಾದ ಟಿಗೋರ್ ಎಲೆಕ್ಟ್ರಿಕ್ ಕಾರನ್ನು ಸಹ ಈಗಾಗಲೇ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ವಿತರಣೆ ಮಾಡುತ್ತಿರುವುದು ಉತ್ತಮ ಬೇಡಿಕೆ ಗಿಟ್ಟಿಸಿಕೊಳ್ಳುತ್ತಿದೆ.

ಇನ್ನು ಬಿಡುಗಡೆಯಾಗಲಿರುವ ಟಿಯಾಗೋ ಎಲೆಕ್ಟ್ರಿಕ್ ಕಾರು 85kWh ಬ್ಯಾಟರಿ ಸೌಲಭ್ಯ ಹೊಂದಿರಲಿದ್ದು, ಪ್ರತಿ ಚಾರ್ಜ್‌ಗೆ 135ಕಿ.ಮಿ ಮೈಲೇಜ್ ಸಾಮರ್ಥ್ಯವನ್ನು ಹೊಂದರಲಿವೆ ಎನ್ನಲಾಗಿದೆ. ಆದ್ರೆ ಇತರೆ ಕಾರುಗಳಿಗೆ ಹೋಲಿಕೆ ಮಾಡಿದ್ದಲ್ಲಿ ಕಡಿಮೆ ಎನ್ನಬಹುದು.
MOST READ: ಬೆಂಗಳೂರಿನಲ್ಲಿ ರಸ್ತೆಗಿಳಿಯಲು ಸಜ್ಜಾದ 3 ಸಾವಿರ ಎಲೆಕ್ಟ್ರಿಕ್ ಬಸ್‌ಗಳು..!

ಮಾರುಕಟ್ಟೆಯಲ್ಲಿ ಈಗಾಗಲೇ ಇದಕ್ಕೂ ಹೆಚ್ಚಿನ ಮೈಲೇಜ್ ಪ್ರೇರಣೆಯ ಇವಿ ಕಾರುಗಳು ಎಂಟ್ರಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗುವ ಟಿಯಾಗೋ ಎಲೆಕ್ಟ್ರಿಕ್ ಹೊಸ ಕಾರಿನ ಬ್ಯಾಟರಿ ವೈಶಿಷ್ಟ್ಯಗಳನ್ನು ಬದಲಾವಣೆ ಮಾಡಬಹುದಾದ ಸಾಧ್ಯತೆಗಳಿವೆ.

ಇದಲ್ಲದೇ ಟಾಟಾ ಸಂಸ್ಥೆಯು ಜೆಎಲ್ಆರ್ ಸಂಸ್ಥೆಯ ಜೊತೆಗೂಡಿ ಹೊಸ ಕಾರುಗಳ ಉತ್ಪಾದನೆಯಲ್ಲಿ ಸಾಕಷ್ಟು ಬದಲಾವಣೆ ತರುತ್ತಿದ್ದು, ಮೊನ್ನೆಯಷ್ಟೇ ಬಿಡುಗಡೆಗೊಂಡ ಹ್ಯಾರಿಯರ್ ಕಾರು ಸಹ ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಪ್ರೇರಣೆಯೊಂದಿಗೆ ಬಿಡುಗಡೆಯಾಗಿದೆ. ಹೀಗಾಗಿ ಟಾಟಾ ಎಲೆಕ್ಟ್ರಿಕ್ ಕಾರುಗಳ ಡಿಸೈನ್‌ನಲ್ಲಿ ಈಗಿರುವ ವಿನ್ಯಾಸಕ್ಕಿಂತ ತುಸು ಬದಲಾಣೆಯಾಗಬಹುದು.


Click it and Unblock the Notifications








