ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಕಾರುಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಮುಂದಿನ ತಿಂಗಳಿನಿಂದಲೇ ಹೊಸ ದರ ಪರಿಷ್ಕರಣೆ ಮಾಡುವುದಾಗಿ ಹೇಳಿಕೊಂಡಿದೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಡಾಲರ್ ಎದುರು ರೂಪಾಯಿ ಮೌಲ್ಯ ಸತತ ಕುಸಿತ ಮತ್ತು ಕಾರುಗಳ ಬೀಡಿಭಾಗಗಳ ಆಮದು ಮೇಲಿನ ಸುಂಕಗಳು ಹೆಚ್ಚಳಗೊಂಡಿರುವ ಹಿನ್ನೆಲೆ ಕಾರಿನ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿರುವ ಟಾಟಾ ಮೋಟಾರ್ಸ್ ಸಂಸ್ಥೆಯು, ಏಪ್ರಿಲ್ 1 ರಿಂದಲೇ ಹೊಸ ದರ ಪಟ್ಟಿಯಂತೆ ಕಾರು ಬೆಲೆಗಳು ಅನ್ವಯವಾಗಿವೆ ಎಂದಿದೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಮಾಹಿತಿಗಳ ಪ್ರಕಾರ, ಟಾಟಾ ಸಂಸ್ಥೆಯು ಕಾರಿನ ಬೆಲೆಯಲ್ಲಿ ಶೇ.2 ರಿಂದ ಶೇ. 3ರಷ್ಟು ಹೆಚ್ಚಳ ಮಾಡುವ ಸುಳಿವು ನೀಡಿದ್ದು, ಕಾರುಗಳು ಬೆಲೆಯು ಸರಾಸರಿಯಾಗಿ ರೂ.20 ಸಾವಿರದಿಂದ ರೂ.25 ಸಾವಿರ ಹೆಚ್ಚಳವಾಗುವುದು ನಿಚ್ಚಳವಾಗಿದೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಸಂಸ್ಥೆಯು ಸದ್ಯ ಎಂಟ್ರಿ ಲೆವಲ್ ಮಾದರಿಯಾಗಿ ನ್ಯಾನೋ ಆವೃತ್ತಿಯನ್ನು ಮಾರಾಟ ಮಾಡುತ್ತಿದ್ದು, ಹೈ ಎಂಡ್ ಮಾದರಿಯಾಗಿ ಹ್ಯಾರಿಯರ್ ಆವೃತ್ತಿಯನ್ನು ಕಳೆದ ಜನವರಿಯಲ್ಲಿ ಬಿಡುಗಡೆಗೊಳಿಸಿದೆ. ಇವುಗಳ ಮಧ್ಯದಲ್ಲಿ ಬರುವ ಟಿಗೋರ್, ಟಿಯಾಗೋ, ಟಿಗೋರ್ ಇವಿ, ಟಿಯಾಗೋ ಇವಿ, ನೆಕ್ಸಾನ್, ಹೆಕ್ಸಾ ಕಾರುಗಳು ಕೂಡಾ ಟಾಟಾ ಸಂಸ್ಥೆಗೆ ಉತ್ತಮ ಆದಾಯ ತಂದುಕೊಡುತ್ತಿವೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಆದ್ರೆ ಕಳೆದ ವರ್ಷದಿಂದ ಕಾರು ಉತ್ಪಾದನೆಗೆ ಬೇಕಿರುವ ಬಿಡಿಭಾಗಗಳ ಬೆಲೆಯಲ್ಲಿ ಸತತ ಏರಿಕೆಯು ವಾಹನ ಉತ್ಪಾದನಾ ಸಂಸ್ಥೆಗಳಿಗೆ ಹೊರೆಯಾಗಿ ಪರಿಣಮಿಸಿದ್ದು, ಟಾಟಾ ಮೋಟಾರ್ಸ್ ಮಾತ್ರವಲ್ಲದೇ ಟೊಯೊಟಾ, ಮಾರುತಿ ಸುಜುಕಿ ಮತ್ತು ಹ್ಯುಂಡೈ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಏಪ್ರಿಲ್ 1ರಿಂದಲೇ ಬೆಲೆ ಏರಿಕೆ ಮಾಡುವ ಸುಳಿವು ನೀಡಿವೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಕಳೆದ ಜನವರಿ ಆರಂಭದಲ್ಲೂ ಶೇ.2ರಿಂದ ಶೇ.4ರಷ್ಟು ಬೆಲೆ ಹೆಚ್ಚಳ ಮಾಡಿರುವ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಳಕ್ಕೆ ಸಿದ್ದತೆ ನಡೆಸಿದ್ದು, ಕಾರು ಖರೀದಿಯ ಪ್ರಕ್ರಿಯೆಗಳು ಮತ್ತಷ್ಟು ದುಬಾರಿಯಾಗಿ ಪರಿಣಮಿಸಲಿವೆ.

MOST READ: ಮಾಡಿಫೈ ಬೈಕ್ ಸವಾರರಿಗೆ ಭಿಕ್ಷುಕರ ವೇಷದಲ್ಲಿ ಬಂದು ಶಾಕ್ ಕೊಟ್ಟ ಪೊಲೀಸರು..!

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಕೆಲವು ಮಾಹಿತಿಗಳ ಪ್ರಕಾರ, ಟೊಯೊಟಾ ಸಂಸ್ಥೆಯು ಸಹ ಕಾರಿನ ಬೆಲೆಯಲ್ಲಿ ಶೇ. 2ರಿಂದ ಶೇ.3ರಷ್ಟು ಹೆಚ್ಚಳ ಮಾಡುವ ಸುಳಿವು ನೀಡಿದ್ದು, ಎಂಟ್ರಿ ಲೆವಲ್ ಕಾರು ಮಾದರಿಯ ಇಟಿಯಾಸ್ ಲಿವಾ ಬೆಲೆಯಲ್ಲಿ ರೂ. 15 ಸಾವಿರ ಹೆಚ್ಚಳವಾಗಲಿದ್ದರೆ, ಹೈ ಎಂಡ್ ಮಾದರಿಯಾದ ಲ್ಯಾಂಡ್ ಕ್ರೂಸರ್ ಪ್ರಾಡೋ ಮಾದರಿಯ ಬೆಲೆಯಲ್ಲಿ ರೂ. 2.50 ಲಕ್ಷ ಹೆಚ್ಚಳಲಾಗಲಿದೆ.

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಹಾಗೆಯೇ ಕ್ಯಾಬ್ ಸೇವೆಗಳಿಗಾಗಿ ಹೆಚ್ಚಾಗಿ ಬಳಕೆಯಾಗುವ ಇಟಿಯಾಸ್ ಸೆಡಾನ್ ಕಾರುಗಳ ಬೆಲೆಯು ರೂ. 15 ಸಾವಿರ ಹೆಚ್ಚಳವಾಗಲಿದ್ದರೆ, ಯಾರಿಸ್ ಬೆಲೆಯಲ್ಲಿ 20 ಸಾವಿರದಿಂದ 25 ಸಾವಿರ ಹಾಗೂ ಇನೋವಾ ಕ್ರಿಸ್ಟ್ರಾ ಕಾರುಗಳ ಬೆಲೆಯು ರೂ. 25 ಸಾವಿರದಿಂದ 30 ಸಾವಿರ ತನಕ ಬೆಲೆ ಹೆಚ್ಚಳವಾಗುವುದು ಖಚಿತವಾಗಿದೆ.

MOST READ: ಏರ್ ಶೋ ವೇಳೆ ಅಗ್ನಿ ದುರಂತ- ಕಾರು ಮಾಲೀಕರಿಗೆ ಧೈರ್ಯ ತುಂಬಿದ ಟೊಯೊಟಾ..!

ಏಪ್ರಿಲ್ 1ರಿಂದಲೇ ಕಾರುಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ಒಟ್ಟಿನಲ್ಲಿ ಮಾರ್ಚ್ ನಂತರ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವುದು ಖಚಿತವಾಗಿದ್ದು, ಒಂದು ವೇಳೆ ನೀವು ಕೂಡಾ ಹೊಸ ಕಾರು ಖರೀದಿಸುವ ಯೋಜನೆಯಲ್ಲಿದ್ದಲ್ಲಿ ಈಗಲೇ ಖರೀದಿ ಮಾಡಿ ಬೆಲೆ ಹೆಚ್ಚಳದ ಹೊಡೆತದಿಂದ ತಪ್ಪಿಸಿಕೊಳ್ಳಬಹುದು.

Most Read Articles

Kannada
English summary
Tata Tiago, Nexon, Tigor, Hexa price hike up to Rs 25k from 1st April 2019. Read in Kannada.
Story first published: Saturday, March 23, 2019, 18:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X