Just In
- 17 hrs ago
ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ
- 1 day ago
ನೆಚ್ಚಿನ ವಾಹನದ 50ನೇ ಹುಟ್ಟುಹಬ್ಬವನ್ನು ಆಚರಿಸಿದ ಅಪ್ಪ-ಮಗ
- 1 day ago
ಗ್ರಾಹಕರ ಕೈಸೇರಲು ಸಿದ್ದವಾದ ಬಿಎಸ್-6 ಎಂಜಿನ್ ಪ್ರೇರಿತ ಯಮಹಾ ಆರ್15 ವಿ3.0
- 1 day ago
ಆಟೋ ಮಾರುಕಟ್ಟೆ ಕುಸಿತದ ನಡುವೆಯೂ ಭರ್ಜರಿ ಮಾರಾಟವಾದ ಮಹೀಂದ್ರಾ ಸ್ಕಾರ್ಪಿಯೋ
Don't Miss!
- Sports
ಏಕದಿನ ಸರಣಿ; ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋಲುಣಿಸಿದ ವಿಂಡೀಸ್
- News
ಪೌರತ್ವ ಕಾಯ್ದೆ ಬಗ್ಗೆ ಮಾತಾಡಲ್ಲ, ಸಿದ್ದಾಂತವೇ ಬೇರೆ, ಸರ್ಕಾರವೇ ಬೇರೆ
- Finance
ಶಬರಿಮಲೆ ಅಯ್ಯಪ್ಪ ದೇವಳದಲ್ಲಿ 28 ದಿನದಲ್ಲಿ 104 ಕೋಟಿ ರು. ಸಂಗ್ರಹ
- Movies
ವಂಚನೆ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ 'ಲವ್ ಗುರು' ನಿರ್ದೇಶಕ
- Technology
ಆನ್ಲೈನ್ ಜಾಹೀರಾತುಗಳಿಂದ ಬೇಸರವಾಗಿದ್ದೀರಾ..? ಇಲ್ಲಿದೆ ಪರಿಹಾರ..!
- Lifestyle
ವಾರ ಭವಿಷ್ಯ- ಡಿಸೆಂಬರ್ 15ರಿಂದ ಡಿಸೆಂಬರ್ 21ರ ತನಕ
- Education
KSP: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್
ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸದ್ಯ ಮಾರಾಟಕ್ಕಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಡಿಸೈನ್‌ನಡಿಯಲ್ಲಿ ಅಭಿವೃದ್ಧಿಗೊಳಿಸುತ್ತಿರುವುದು ರೋಡ್ ಟೆಸ್ಟಿಂಗ್‌ನಲ್ಲಿ ಬಹಿರಂಗವಾಗಿದೆ.

ಸದ್ಯ ಹೊಸ ಕಾರುಗಳ ಅಭಿವೃದ್ಧಿಗಾಗಿ ಟಾಟಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ. ಕಳೆದ ಜನವರಿಯಲ್ಲಿ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ನೆಕ್ಸಾನ್, ಟಿಗೋರ್ ಮತ್ತು ಟಿಯಾಗೋ ಕಾರುಗಳನ್ನು ಸಹ ಇದೇ ಪ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗಿದೆ.

ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡು ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿರುವ ಹೊಸ ಟಿಗೋರ್ ಕಾರು ಕೂಡಾ ಸ್ಪೋರ್ಟಿ ಲುಕ್ ಮೂಲಕ ಕಂಪ್ಯಾಕ್ಟ್ ಸೆಡಾನ್ ಕಾರುಗಳ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ಸುಳಿವು ನೀಡಿದೆ.

ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ನಂತೆ, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ರ ಏಪ್ರಿಲ್ 1ರಿಂದ ಬಿಎಸ್-6 ವಾಹನಗಳು ರಸ್ತೆಗಿಳಿಯುತ್ತಿವೆ.

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಟಾಟಾ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುತ್ತಿವೆ.

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಜೊತೆಗೆ ಕಾರುಗಳ ಸುರಕ್ಷಾ ವಿಚಾರದಲ್ಲೂ ಸಾಕಷ್ಟು ಹೊಸ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದ್ದು, ಎಂಟ್ರಿ ಕಾರುಗಳಲ್ಲೂ ಸಹ ಗರಿಷ್ಠ ಪ್ರಮಾಣದ ಸುರಕ್ಷಾ ಸೌಲಭ್ಯಗಳು ಸ್ಟ್ಯಾಂಡರ್ಡ್ ಆಗಿ ದೊರೆಯುವುದು ಬಿಎಸ್-6 ನಿಯಮದ ಪ್ರಮುಖ ಆಕರ್ಷಣೆಯಾಗಲಿದೆ.

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.15ರಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ. 80 ಸಾವಿರದಿಂದ ಲಕ್ಷದಿಂದ ರೂ. 1.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

ಟಾಟಾ ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಟಾಟಾ ಸಂಸ್ಥೆಯು ದುಬಾರಿಯಾಗಲಿರುವ ಬೆಲೆಗಳ ಕಡಿತದೊಂದಿಗೆ ಹೊಸ ನಿಯಮ ಪಾಲನೆ ಮಾಡಲು ಯೋಜನೆ ರೂಪಿಸಿದ್ದು, ಕೈಗೆಟುವ ಬೆಲೆಗಳಲ್ಲಿ ಬಿಎಸ್-6 ಕಾರುಗಳನ್ನು ರಸ್ತೆಗಿಳಿಸುತ್ತಿದೆ ಎನ್ನಬಹುದು.
Source: overdrive