ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸದ್ಯ ಮಾರಾಟಕ್ಕಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಡಿಸೈನ್‌ನಡಿಯಲ್ಲಿ ಅಭಿವೃದ್ಧಿಗೊಳಿಸುತ್ತಿರುವುದು ರೋಡ್ ಟೆಸ್ಟಿಂಗ್‌ನಲ್ಲಿ ಬಹಿರಂಗವಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಸದ್ಯ ಹೊಸ ಕಾರುಗಳ ಅಭಿವೃದ್ಧಿಗಾಗಿ ಟಾಟಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ. ಕಳೆದ ಜನವರಿಯಲ್ಲಿ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ನೆಕ್ಸಾನ್, ಟಿಗೋರ್ ಮತ್ತು ಟಿಯಾಗೋ ಕಾರುಗಳನ್ನು ಸಹ ಇದೇ ಪ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡು ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿರುವ ಹೊಸ ಟಿಗೋರ್ ಕಾರು ಕೂಡಾ ಸ್ಪೋರ್ಟಿ ಲುಕ್ ಮೂಲಕ ಕಂಪ್ಯಾಕ್ಟ್ ಸೆಡಾನ್ ಕಾರುಗಳ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ಸುಳಿವು ನೀಡಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ನಂತೆ, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ರ ಏಪ್ರಿಲ್ 1ರಿಂದ ಬಿಎಸ್-6 ವಾಹನಗಳು ರಸ್ತೆಗಿಳಿಯುತ್ತಿವೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಟಾಟಾ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುತ್ತಿವೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಜೊತೆಗೆ ಕಾರುಗಳ ಸುರಕ್ಷಾ ವಿಚಾರದಲ್ಲೂ ಸಾಕಷ್ಟು ಹೊಸ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದ್ದು, ಎಂಟ್ರಿ ಕಾರುಗಳಲ್ಲೂ ಸಹ ಗರಿಷ್ಠ ಪ್ರಮಾಣದ ಸುರಕ್ಷಾ ಸೌಲಭ್ಯಗಳು ಸ್ಟ್ಯಾಂಡರ್ಡ್ ಆಗಿ ದೊರೆಯುವುದು ಬಿಎಸ್-6 ನಿಯಮದ ಪ್ರಮುಖ ಆಕರ್ಷಣೆಯಾಗಲಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.15ರಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ. 80 ಸಾವಿರದಿಂದ ಲಕ್ಷದಿಂದ ರೂ. 1.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಿದ್ದವಾದ 2020ರ ಟಾಟಾ ಟಿಗೋರ್

ಟಾಟಾ ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಟಾಟಾ ಸಂಸ್ಥೆಯು ದುಬಾರಿಯಾಗಲಿರುವ ಬೆಲೆಗಳ ಕಡಿತದೊಂದಿಗೆ ಹೊಸ ನಿಯಮ ಪಾಲನೆ ಮಾಡಲು ಯೋಜನೆ ರೂಪಿಸಿದ್ದು, ಕೈಗೆಟುವ ಬೆಲೆಗಳಲ್ಲಿ ಬಿಎಸ್-6 ಕಾರುಗಳನ್ನು ರಸ್ತೆಗಿಳಿಸುತ್ತಿದೆ ಎನ್ನಬಹುದು.

Source: overdrive

Most Read Articles

Kannada
English summary
2020 Tata Tigor Spied Testing Ahead Of Launch. Read in Kannada.
Story first published: Monday, October 21, 2019, 18:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X