Just In
- 7 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 9 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 10 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್ 6 ಎಫೆಕ್ಟ್- ಟಾಟಾ ಟಿಗೋರ್ ಮತ್ತು ಟಿಯಾಗೋ ಡೀಸೆಲ್ ಎಂಜಿನ್ ಬಂದ್..!
ದೇಶಾದ್ಯಂತ ಸದ್ಯ ಬಿಎಸ್-4 ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ತಾಂತ್ರಿಕ ಗುಣವೈಶಿಷ್ಟ್ಯತೆಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದ್ದು, ಇದು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ನಿಷೇಧವಾಗುವುದು ಖಚಿತವಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರವು 2017ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದೇಶಾದ್ಯಂತ ಬಿಎಸ್-3 (ಭಾರತ್ ಸ್ಟೇಜ್) ಸೌಲಭ್ಯಗಳನ್ನು ಒಳಗೊಂಡ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಮೇಲೆ ನಿಷೇಧ ನಿಷೇಧ ಹೇರಿದ್ದಲ್ಲದೆ ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನ ಮಾದರಿಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಿತ್ತು.
ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಡುತ್ತಿರುವ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.
ಹೀಗಾಗಿ ಕೇಂದ್ರ ಸರ್ಕಾರದ ಡೆಡ್ಲೈನ್ಗೂ ಮುನ್ನವೇ ಬಿಎಸ್ 6 ವೈಶಿಷ್ಟ್ಯತೆಯುಳ್ಳ ಎಂಜಿನ್ ಪ್ರೇರಿತ ಕಾರು ಮಾದರಿಗಳನ್ನು ಬಿಡುಗಡೆ ಮಾಡಬೇಕಿರುವ ಪ್ರಮುಖ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ನಿಯಮ ಪಾಲಿಸಲು ಸಾಧ್ಯವಾಗದ ಕೆಲವು ಕಾರು ಮಾದರಿಗಳಿಗೆ ಗುಡ್ಬೈ ಹೇಳಬೇಕಾದ ಅನಿವಾರ್ಯತೆ ಎದುರಾಗಿದೆ.
ಇದರಿಂದ ಟಾಟಾ ನಿರ್ಮಾಣದ ಟಿಗೋರ್ ಮತ್ತು ಟಿಯಾಗೋ ಕಾರಿನ 1.2-ಲೀಟರ್ ಡೀಸೆಲ್ ವರ್ಷನ್ಗಳನ್ನು ಕೈಬಿಡಲು ನಿರ್ಧರಿಸಲಾಗಿದ್ದು, ಬಿಎಸ್ 6 ನಿಯಮಾವಳಿಗಳನ್ನು ಪಾಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಡೀಸೆಲ್ ವೆರಿಯೆಂಟ್ ಸ್ಥಗಿತಗೊಳ್ಳವುದು ಖಚಿತವಾಗಿದೆ.
ಒಂದು ವೇಳೆ ಡೀಸೆಲ್ ಕಾರಿನ ಎಂಜಿನ್ ಗುಣಮಟ್ಟವನ್ನು ಹೆಚ್ಚಿಸಿದರೂ ಕೂಡಾ ಮಾರುಕಟ್ಟೆಯಲ್ಲಿ ಗರಿಷ್ಠ ಬೇಡಿಕೆ ಪಡೆಯುವ ಸಾಧ್ಯತೆಗಳು ಕಡಿಮೆ ಇದ್ದು, ಇದರಿಂದ ಡೀಸೆಲ್ ಆವೃತ್ತಿಗಳನ್ನು ಸ್ಥಗಿತಗೊಳಿಸಿ ಪೆಟ್ರೋಲ್ ವರ್ಷನ್ಗಳ ಮೇಲೆ ಹೆಚ್ಚಿನ ಗಮನಹರಿಸಲು ನಿರ್ಧರಿಸಲಾಗಿದೆ.
ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್ನಲ್ಲಿ ಯುರೋ-6, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ ಬಿಎಸ್-6 ವಾಹನಗಳು ರಸ್ತೆಗಿಳಿಯಲಿವೆ.
ಯುರೋಪ್ನಲ್ಲಿ ಈ ಹಿಂದೆ 2017ರಿಂದಲೇ ಯುರೋ-6 ತಾಂತ್ರಿಕ ಅಂಶಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದ್ದು, ಇದು ಬಿಎಸ್-6 ವೈಶಿಷ್ಟ್ಯತೆಗೆ ಸರಿಸಮನಾಗಿದೆ.
ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ಮಾದರಿಗಳಲ್ಲಿ ಭಾರೀ ಬದಲಾವಣೆಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಮಾದರಿಗಿಂತಲೂ ಬಿಎಸ್-6 ಹೆಚ್ಚಿನ ಗುಣಮಟ್ಟದೊಂದಿಗೆ ಹೊಗೆ ಉಗುಳುವ ಪ್ರಮಾಣದಲ್ಲಿ ಪರಿಣಾಮಕಾರಿ ತಗ್ಗಿಸಲಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!
ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.
ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.
MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ
ಬೆಲೆ ಏರಿಕೆಯ ಬಿಸಿ..!
ಹೌದು, ಬಿಎಸ್ 4 ವಾಹನಗಳಿಂತಲೂ ಬಿಎಸ್ 6 ಎಂಜಿನ್ ಪ್ರೇರಿತ ವಾಹನಗಳ ಎಂಜಿನ್ ಮಾದರಿಯು ಹೆಚ್ಚಿನ ಗುಣಮಟ್ಟ ಪಡೆದುಕೊಂಡಿರಲಿದ್ದು, ಇದರಿಂದ ಸಹಜವಾಗಿಯೇ ಸದ್ಯ ರೂ.5 ಲಕ್ಷಕ್ಕೆ ದೊರೆಯುತ್ತಿರುವ ಕಾರುಗಳು ಮುಂಬರುವ ದಿನಗಳಲ್ಲಿ ರೂ. 6.50 ಲಕ್ಷದಿಂದ ರೂ. 7 ಲಕ್ಷಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.