ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಮತ್ತು ಖರೀದಿಸುವ ಗ್ರಾಹಕರಿಗೂ ಕೂಡಾ ವಿವಿಧ ಹೊಸ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ಪ್ರಮುಖವಾಗಿ ಜಿಎಸ್‌ಟಿ ದರ ಇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ವರದಾನವಾಗಿದ್ದು, ಟಾಟಾ ಸೇರಿದಂತೆ ಪ್ರಮುಖ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ತಮ್ಮ ಇವಿ ಬೆಲೆಗಳನ್ನು ಕಡಿತಗೊಳಿಸಿವೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟದ ಮೇಲೆ ಹೆಚ್ಚಿನ ಮಟ್ಟದ ಸೆಸ್ ಸೇರಿದಂತೆ ದುಬಾರಿ ನೋಂದಣಿ ಶುಲ್ಕ ವಿಧಿಸುತ್ತಿರುವ ಕೇಂದ್ರ ಸರ್ಕಾರವು ಅದಕ್ಕೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮಕೈಗೊಳ್ಳುತ್ತಿದೆ. ಈ ಹಿಂದೆ ಫೇಮ್ ಯೋಜನೆಯ ಮೂಲಕ ಸಬ್ಸಡಿ ಯೋಜನೆಯನ್ನು ಘೋಷಿಸಿದ್ದ ಕೇಂದ್ರವು ಈ ಬಾರಿ ಜಿಎಸ್‌ಟಿ ಪ್ರಮಾಣದಲ್ಲಿ ಭಾರೀ ಕಡಿತ ಮಾಡಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ನೀತಿ ಆಯೋಗದ ಶಿಫಾರಸ್ಸು ಮೇರೆಗೆ ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಕ್ ವಾಹನ ಖರೀದಿದಾರರಿಗೂ ಸಾಕಷ್ಟು ಸಹಕಾರಿಯಾಗಲಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಕೇಂದ್ರ ಸರ್ಕಾರದ ಹೊಸ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಜಿಎಸ್‌ಟಿ ದರ ಕಡಿತ ಯೋಜನೆಯನ್ನು ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲಾಗಿದ್ದು, ಟಾಟಾ ಸಂಸ್ಥೆಯು ಹೊಸ ಯೋಜನೆಯ ಭಾಗವಾಗಿ ಬೆಲೆ ಇಳಿಕೆ ಮಾಡಿದೆ. ಸದ್ಯ ಟಿಗೋರ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾಡುತ್ತಿರುವ ಟಾಟಾ ಸಂಸ್ಥೆಯು ಬರೋಬ್ಬರಿ ರೂ.80 ಸಾವಿರ ಬೆಲೆ ಇಳಿಕೆ ಮಾಡಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಹೊಸ ದರ ಪಟ್ಟಿಯ ಪ್ರಕಾರ ಈ ಹಿಂದೆ ಸಬ್ಸಡಿ ರಹಿತ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯು ರೂ.12.35 ಲಕ್ಷ ಮತ್ತು ರೂ.12.71 ಲಕ್ಷ ಇದ್ದ ಬೆಲೆ ಇದೀಗ ಜಿಎಸ್‌ಟಿ ಇಳಿಕೆ ನಂತರ ರೂ. 11.58 ಲಕ್ಷಕ್ಕೆ ಮತ್ತು ರೂ. 11.92 ಲಕ್ಷಕ್ಕೆ ಇಳಿಕೆಯಾಗಿದೆ. ಹಾಗೆಯೇ ಸಬ್ಸಡಿ ಸಹಿತ ಟಿಗೋರ್ ಕಾರಿನ ಮಾರಾಟ ಬೆಲೆಯು ಈ ಹಿಂದೆ ಇದ್ದ ರೂ. 10.99 ಲಕ್ಷ ಮತ್ತು ರೂ.11.09 ಲಕ್ಷ ಬೆಲೆಯು ಇದೀಗ ರೂ.9.96 ಲಕ್ಷ ಮತ್ತು ರೂ.10.30 ಲಕ್ಷಕ್ಕೆ ಇಳಿಕೆಯಾಗಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಹೊಸ ಆದೇಶದಿಂದಾಗಿ ಅಗಸ್ಟ್ 1ರಿಂದಲೇ ಎಲೆಕ್ಟ್ರಿಕ್ ವಾಹನಗಳ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಲಿದ್ದು, ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಇದಕ್ಕೆ ಹರ್ಷ ವ್ಯಕ್ತಪಡಿಸಿವೆ. ಯಾಕೆಂದ್ರೆ ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಬೆಲೆ ಕಡಿಮೆಯಾಗಿ ಮಾರಾಟ ಪ್ರಮಾಣವು ಹೆಚ್ಚಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ಗ್ರಿನ್ ಸೆಸ್ ಹೆಚ್ಚಾಗುವುದರಿಂದ ಎಲೆಕ್ಟ್ರಿಕ್ ವಾಹನಗಳಿಗೂ ಇದು ಪೂರಕವಾಗಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಇವಿ ಖರೀದಿ ಮೇಲೆ ತೆರಿಗೆ ವಿನಾಯ್ತಿ..!

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ಸಹ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಈ ಹಿಂದೆ 2018ರಲ್ಲಿ ಘೋಷಣೆ ಮಾಡಲಾಗಿರುವ ಫೇಮ್ 2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಬೆಳವಣಿಗಾಗಿ ರೂ. 10 ಸಾವಿರ ಕೋಟಿ ಮೀಸಲು ಇರಿಸಲಾಗಿದ್ದು, 2018-19, 2019-20 ಮತ್ತು 2020-21ರ ಆರ್ಥಿಕ ವರ್ಷದ ಅವಧಿಗಾಗಿ ಈ ಮೀಸಲು ಹಣವನ್ನು ಖರ್ಚು ಮಾಡಲು ನಿರ್ಧರಿಸಲಾಗಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಫೇಮ್ 2 ಯೋಜನೆ ಅಡಿ ಸಬ್ಸಡಿ ಸೇರಿದಂತೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಹೆಚ್ಚಿನ ಮಟ್ಟದಲ್ಲಿ ಹಣ ವಿನಿಯೋಗ ಮಾಡಲಾಗುತ್ತಿದ್ದು, ಇದೀಗ ಜಿಟಿಎಸ್ ತಗ್ಗಿಸಿರುವುದು ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಇದು ಮತ್ತಷ್ಟು ಸಹಕಾರಿಯಾಗಿಲಿದೆ.

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ.80 ಸಾವಿರ ಕಡಿತ

ಈ ಮೂಲಕ 2030ರ ವೇಳೆಗೆ ಶೇ.100 ರಷ್ಟು ವಾಹನಗಳನ್ನು ರಸ್ತೆಗಿಳಿಸಬೇಕೆಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹೊಸ ಬಜೆಟ್ ಪೂರಕವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳಲ್ಲಿ ರೂ.8 ಸಾವಿರದಿಂದ ರೂ.12 ಸಾವಿರ ಮತ್ತು ಎಲೆಕ್ಟ್ರಿಕ್ ಕಾರುಗಳ ಬೆಲೆಯಲ್ಲಿ ರೂ.15 ಲಕ್ಷ ಇದ್ದಲ್ಲಿ ರೂ.1.20 ಲಕ್ಷದಿಂದ ರೂ.1.50 ಲಕ್ಷ ಬೆಲೆ ಇಳಿಕೆಯಾಗಲಿದೆ.

Article Published On: Friday, August 2, 2019, 11:31 [IST]
English summary
Tata Tigor EV price reduced. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+