ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಟಿಗೋರ್ ಫೇಸ್‌ಲಿಫ್ಟ್ ಕೂಡಾ ಇಂಪ್ಯಾಕ್ಟ್ ಡಿಸೈನ್‌ 2.0 ಪಿಲಾಸಫಿಯೊಂದಿಗೆ ಸಿದ್ದವಾಗಿರುವುದು ರೋಡ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಸದ್ಯ ಹೊಸ ಕಾರುಗಳ ಅಭಿವೃದ್ಧಿಗಾಗಿ ಟಾಟಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ. ಕಳೆದ ಜನವರಿಯಲ್ಲಿ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ನೆಕ್ಸಾನ್, ಟಿಗೋರ್ ಮತ್ತು ಟಿಯಾಗೋ ಕಾರುಗಳನ್ನು ಸಹ ಇದೇ ಪ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗಿದೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡು ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿರುವ ಹೊಸ ಟಿಗೋರ್ ಕಾರು ಕೂಡಾ ಸ್ಪೋರ್ಟಿ ಲುಕ್ ಮೂಲಕ ಕಂಪ್ಯಾಕ್ಟ್ ಸೆಡಾನ್ ಕಾರುಗಳ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ಸುಳಿವು ನೀಡಿದೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ನಂತೆ, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ರ ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವನ್ನು ಕಡ್ಡಾಯಗೊಳಿಸಲಾಗಿದೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಟಾಟಾ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುತ್ತಿವೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಜೊತೆಗೆ ಕಾರುಗಳ ಸುರಕ್ಷಾ ವಿಚಾರದಲ್ಲೂ ಸಾಕಷ್ಟು ಹೊಸ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದ್ದು, ಎಂಟ್ರಿ ಕಾರುಗಳಲ್ಲೂ ಸಹ ಗರಿಷ್ಠ ಪ್ರಮಾಣದ ಸುರಕ್ಷಾ ಸೌಲಭ್ಯಗಳು ಸ್ಟ್ಯಾಂಡರ್ಡ್ ಆಗಿ ದೊರೆಯುವುದು ಬಿಎಸ್-6 ನಿಯಮದ ಪ್ರಮುಖ ಆಕರ್ಷಣೆಯಾಗಲಿದೆ.

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.15ರಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ. 80 ಸಾವಿರದಿಂದ ಲಕ್ಷದಿಂದ ರೂ. 1.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

MOST READ: 2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಈ ಕಾರಣಕ್ಕಾಗಿಯೇ ಟಿಗೋರ್ ಕಾರಿನಲ್ಲಿ ಈ ಬಾರಿ 1.2-ಲೀಟರ್ ಸಾಮಾರ್ಥ್ಯದ ಪೆಟ್ರೋಲ್ ಎಂಜಿನ್ ಹೊರತುಪಡಿಸಿ 1-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಧಗಿತಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಂದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ ಉನ್ನತೀಕರಿಸಿದರೂ ಸಹ ಅಧಿಕ ಬೆಲೆಯಿಂದಾಗಿ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

MOST READ: ಗಂಡನಿಗೆ ಸರ್‍‍ಪ್ರೈಸ್ ಗಿಫ್ಟ್ ನೀಡಿದ ಹೆಂಡತಿ..!

ಇಂಪ್ಯಾಕ್ಟ್ ಡಿಸೈನ್‌ನೊಂದಿಗೆ ಮಿಂಚಲಿದೆ ಟಾಟಾ ಟಿಗೋರ್ ಫೇಸ್‌ಲಿಫ್ಟ್

ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಟಾಟಾ ಸಂಸ್ಥೆಯು ದುಬಾರಿಯಾಗಲಿರುವ ಬೆಲೆ ಕಡಿತದೊಂದಿಗೆ ಹೊಸ ನಿಯಮ ಪಾಲನೆ ಮಾಡಲು ಯೋಜನೆ ರೂಪಿಸಿದ್ದು, ಕೈಗೆಟುವ ಬೆಲೆಗಳಲ್ಲಿ ಬಿಎಸ್-6 ಕಾರುಗಳನ್ನು ರಸ್ತೆಗಿಳಿಸುತ್ತಿದೆ ಎನ್ನಬಹುದು.

Image Courtesy: Electricvehicleweb

Most Read Articles

Kannada
English summary
Tata Tigor Facelift Spotted Testing Again. Read in Kannada.
Story first published: Wednesday, December 25, 2019, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more