ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಕೇಂದ್ರ ಸರ್ಕಾರವು ಕುಸಿತ ಕಂಡಿರುವ ವಾಹನ ಉದ್ಯಮ ಸುಧಾರಣೆಗಾಗಿ ಕೆಲವು ಮಹತ್ವದ ಕ್ರಮ ಕೈಗೊಳ್ಳುತ್ತಿದ್ದು, ಇದರಲ್ಲಿ ಪ್ರಮುಖವಾಗಿ ಕಾರ್ಪೊರೇಟ್ ತೆರಿಗೆಯಲ್ಲಿ ಇಳಿಕೆ ಮಾಡಿರುವುದು ವಾಹನ ಉದ್ಯಮಕ್ಕೆ ವರದಾನವಾಗಲಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಕಾರ್ಪೊರೇಟ್ ತೆರಿಗೆ ಪ್ರಮಾಣವನ್ನು ಶೇ.21.55ರಿಂದ ಶೇ.17.16ಕ್ಕೆ ಇಳಿಕೆ ಮಾಡಲಾಗಿದ್ದು, ಇದು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳುವ ಆಟೋ ಬಿಡಿಭಾಗಗಳ ಬೆಲೆ ಇಳಿಕೆ ಸಾಕಷ್ಟು ಸಹಕಾರಿಯಾಗಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಮೇಲಿನ ಅಧಿಕ ತೆರಿಗೆ ಹೊರೆಯನ್ನು ಕಡಿತಗೊಳಿಸಿದ್ದು, ಇದು ನೇರವಾಗಿ ವಾಹನದ ಮೂಲ ಬೆಲೆಯನ್ನು ತಗ್ಗಿಸಲಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಭಾರತೀಯ ಆಟೋ ಉತ್ಪಾದನಾ ಸಂಸ್ಥೆಗಳು ಹೆಚ್ಚಾಗಿ ಲೀಥಿಯಂ ಅಯಾನ್ ಬ್ಯಾಟರಿ, ಏರ್‌ಬ್ಯಾಗ್, ಸೆನ್ಸಾರ್ ಮತ್ತು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಬಿಡಿಭಾಗಗಳನ್ನು ವಿದೇಶಿ ಮಾರುಕಟ್ಟೆಯಿಂದಲೇ ಆಮದು ಮಾಡಿಕೊಳ್ಳುತ್ತಿದ್ದು, ಕಾರ್ಪೊರೇಟ್ ತೆರಿಗೆ ಇಳಿಕೆಯಿಂದಾಗಿ ವಾಹನ ಬೆಲೆಯಲ್ಲಿ ಕಡಿತವನ್ನು ನೀರಿಕ್ಷಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಇದಲ್ಲದೇ ಸ್ಥಳೀಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣ ಮಾಡುವ ಸಂಸ್ಥೆಗಳಿಗೆ ಹೆಚ್ಚಿನ ಅನುಕೂಲವಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳನ್ನು ಮತ್ತಷ್ಟು ಆಕರ್ಷಿಸಲಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಕಾರ್ಪೊರೇಟ್ ತೆರಿಗೆ ಇಳಿಕೆಯನ್ನು ಸ್ವಾಗತಿಸಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಭವಿಷ್ಯ ವಾಹನ ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡುವ ಭರವಸೆ ವ್ಯಕ್ತಪಡಿಸಿದ್ದು, ಇಂಧನ ಆಧಾರಿತ ವಾಹನಗಳ ಮೇಲಿನ ಜಿಎಸ್‌ಟಿ ದರ ಇಳಿಕೆಯ ನೀರಿಕ್ಷೆಯಲ್ಲಿದ್ದ ಆಟೋ ಉತ್ಪಾದನಾ ಸಂಸ್ಥೆಗಳಿಗೆ ತುಸು ನಿರಾಸೆಯಾಗಿದೆ. ಆದ್ರೆ ಕಾರ್ಪೊರೇಟ್ ತೆರಿಗೆ ಇಳಿಕೆಯು ಇಂಧನ ಆಧರಿತ ವಾಹನಗಳಿಂತ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಇದರ ಜೊತೆಗೆ ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳು ಸ್ಥಳೀಯವಾಗಿಯೇ ಬಿಡಿಭಾಗಗಳನ್ನು ಉತ್ಪಾದನೆ ಮಾಡಲು ಕಾರ್ಪೊರೇಟ್ ತೆರಿಗೆ ಇಳಿಕೆಯು ಪ್ರಮುಖ ಆಕರ್ಷಣೆಯಾಗಿದ್ದು, ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳು ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಹಕಾರಿಯಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಇನ್ನು ಕೇಂದ್ರ ಸರ್ಕಾರವು ಇಂಧನ ಆಧರಿತ ವಾಹನಗಳ ಮಾರಾಟವನ್ನು ಕಡಿತಗೊಳಿಸಲು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಸಂಬಂಧ ಕಾರ್ಪೊರೇಟ್ ತೆರಿಗೆ ಸೇರಿದಂತೆ ಈಗಾಗಲೇ ಹಲವಾರುವ ವಿನೂತನ ಯೋಜನೆಗಳನ್ನು ಜಾರಿಗೆ ಮಾಡಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಈ ಹಿಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಇದ್ದ ಜಿಎಸ್‌ಟಿ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಿರುವುದಲ್ಲದೇ ಗ್ರಾಹಕರಿಗೆ ಸಬ್ಸಡಿ ಯೋಜನೆಯನ್ನು ಸಹ ಜಾರಿಗೆ ತಂದಿದ್ದು, 1.5 ಲಕ್ಷದ ತೆರಿಗೆ ವಿನಾಯ್ತಿ ಕೂಡಾ ದೊರೆಯುತ್ತಿದೆ.

MOST READ: ಮೋಟಾರ್ ಸ್ಪೋರ್ಟ್‌ನಲ್ಲಿ ಅರ್ಜುನ್ ಪ್ರಶಸ್ತಿ ವಿಜೇತನಿಂದಲೇ ಭೀಕರ ಅಪಘಾತ..!

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಇಂಧನ ಆಧರಿತ ವಾಹನಗಳನ್ನು ಕಡಿತಗೊಳಿಸಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಪ್ರಕಟಿಸುತ್ತಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಹಲವು ಹೊಸ ಬದಲಾವಣೆಗೆ ಕಾರಣವಾಗಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಫೇಮ್ 2 ಯೋಜನೆಯನ್ನು 2018ರಿಂದ 2022ರ ಅವಧಿಗೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಸುಮಾರು 10 ಸಾವಿರ ಕೋಟಿ ಹಣ ಮಿಸಲಿಟ್ಟಿದ್ದು, ಎಲೆಕ್ಕ್ರಿಕ್ ಕಾರು ಉತ್ಪಾದನಾ ಸಂಸ್ಥೆಗಳಿಗೆ ಮಾತ್ರವಲ್ಲದೇ ಇವಿ ಖರೀದಿದಾರರಿಗೂ ಸಬ್ಸಡಿ, ತೆರಿಗೆ ವಿನಾಯ್ತಿ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ.

Most Read Articles

Kannada
English summary
Tax Reduction For EV Component Manufacturers: Here’s What The Government Proposes.
Story first published: Monday, September 23, 2019, 14:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X