ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಜಗತ್ತಿನಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವು ಹೊಸ ಆಯಾಮ ಪಡೆದುಕೊಳ್ಳುತ್ತಿದ್ದು, ದಿನಕ್ಕೊಂದು ಹೊಸ ಬಗೆಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಸಿದ್ದಪಡಿಸಿ ಅನಾವರಣಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟೆಸ್ಲಾ ಸಂಸ್ಥೆಯು ಇದೇ ಮೊದಲ ಬಾರಿಗೆ ವಿಶೇಷ ವಿನ್ಯಾಸದ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಮಾದರಿಯನ್ನು ಅನಾವರಣಗೊಳಿಸಿದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಅಮೆರಿಕ ಪ್ರಸಿದ್ಧ ಎಲೆಕ್ಟ್ರಿಕ್ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಟೆಸ್ಲಾ ಈಗಾಗಲೇ ಲಕ್ಷಾಂತರ ವಾಹನಗಳ ಮಾರಾಟ ಮಾಡಿದ್ದು, ಅಮೆರಿಕದಲ್ಲಿ ಮಾತ್ರವಲ್ಲದೇ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲೂ ಭಾರೀ ಸದ್ದು ಮಾಡುತ್ತಿದೆ. ಮಾಡೆಲ್ ಎಸ್, ಮಾಡೆಲ್ 3, ಮಾಡೆಲ್ ಎಕ್ಸ್, ಮಾಡೆಲ್ ವೈ ಮತ್ತು ರೋಡ್‌ಸ್ಟರ್ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಸೈಬರ್‌ಟ್ರಕ್ ಎನ್ನುವ ಪಿಕ್ಅಪ್ ವಾಹನವನ್ನು ಬಿಡುಗಡೆಯ ಸುಳಿವು ನೀಡಿದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಮಾಡೆಲ್ ವೈ ಮತ್ತು ರೋಡ್‌ಸ್ಟರ್ ಕಾರಿನ ನಡುವಿನ ಸ್ಥಾನ ಪಡೆದುಕೊಂಡಿರುವ ಸೈಬರ್‌ಟ್ರಕ್ ಪಿಕ್ಅಪ್ ವಾಹನವು ವಿಶೇಷ ವಿನ್ಯಾಸದೊಂದಿಗೆ ರಸ್ತೆಗಿಳಿಯಲಿದ್ದು, ಹೊರಭಾಗದ ವಿನ್ಯಾಸವು ತುಸು ವಿಚಿತ್ರ ಎನ್ನಿಸಿದರೂ ಸಹ ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳೊಂದಿಗೆ ಬಿಡುಗಡೆಗೊಳ್ಳಲಿದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಸಾಮಾನ್ಯ ರಸ್ತೆಗಳಲ್ಲಿ ಮಾತ್ರವಲ್ಲದೇ ಆಪ್ ರೋಡ್‌ಗಳಲ್ಲೂ ಬಲಶಾಲಿ ಡ್ರೈವ್ ಸೌಲಭ್ಯವನ್ನು ಹೊಂದಿರುವ ಸೈಬರ್‌ಟ್ರಕ್ ಆಲ್ ವೀಲ್ಹ್ ಡ್ರೈವ್ ಟೆಕ್ನಾಲಜಿ ಪಡೆದುಕೊಂಡಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಆರಂಭಿಕ ಆವೃತ್ತಿಯು ಸಿಂಗಲ್ ಮೋಟಾರ್ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ 400ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಕೇವಲ 6.5 ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮೀ ವೇಗದ ಪಡೆದುಕೊಳ್ಳುವ ಮೂಲಕ ಗರಿಷ್ಠ 3,400 ಕೆ.ಜಿ ಎಳೆಯುವ ಸಾಮರ್ಥ್ಯವನ್ನು ಹೊಂದಿದೆ. ಮಧ್ಯಮ ಗಾತ್ರದ ಆವೃತ್ತಿಯು ಡ್ಯುಯಲ್ ಮೋಟಾರ್ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 482 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಕೇವಲ 4.5 ಸೇಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗವನ್ನು ಪಡೆಯುವ ಮೂಲಕ 4,500 ಕೆ.ಜಿ ಎಳೆಯುವ ಸಾಮರ್ಥ್ಯವನ್ನು ಹೊಂದಿದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಕೊನೆಯದಾಗಿ ಹೈ ಎಂಡ್ ಮಾದರಿಯು ತ್ರಿಬಲ್ ಮೋಟಾರ್ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಕೇವಲ 3 ಸೇಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳುತ್ತದೆ.

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಜೊತೆಗೆ ಹೈ ಎಂಡ್ ಮಾದರಿಯಲ್ಲಿ ಆಲ್ ವೀಲ್ಹ್ ಡ್ರೈವ್ ಟೆಕ್ನಾಲಜಿ ಸೇರಿದಂತೆ ವಿವಿಧ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಇದು 6,350 ಕೆ.ಜಿ ಸರಕು ಎಳೆಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಹೈ ಎಂಡ್ ಮಾದರಿಯ ವೇಗವು ಪೋರ್ಷೆ 911 ಸೂಪರ್ ಕಾರಿನ ವೇಗಕ್ಕೆ ಸಮನಾಗಿದ್ದು, ಆಟೋ ಉದ್ಯಮದಲ್ಲಿ ಹೊಸ ಅಲೆ ಸೃಷ್ಠಿಸಲಿದೆ.

MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಸದ್ಯ ಇದು ಅನಾವರಣಗೊಳಿಸಿರುವ ಪಿಕ್ಅಪ್ ಟ್ರಕ್ ಆವೃತ್ತಿಯಾಗಿದ್ದು, ಬಿಡುಗಡೆಯ ಹೊತ್ತಿಗೆ ಇನ್ನು ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಆದರೂ ಶೇ.90 ರಷ್ಟು ಉತ್ಪಾದನಾ ಆವೃತ್ತಿಯಲ್ಲೂ ಇದೇ ವಿನ್ಯಾಸವನ್ನೇ ಪಡೆದುಕೊಳ್ಳಲಿದ್ದು, ಬೆಲೆ ಕೂಡಾ ಆಕರ್ಷಕವಾಗಿರಲಿವೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಬಿಡುಗಡೆಯ ಅವಧಿ ಮತ್ತು ಬೆಲೆ (ಅಂದಾಜು)

2021ರ ಕೊನೆಯಲ್ಲಿ ಅಥವಾ 2022ರ ಆರಂಭದಲ್ಲಿ ಸೈಬರ್‌ಟ್ರಕ್ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಆರಂಭಿಕ ಆವೃತ್ತಿಯು ಭಾರತೀಯ ಬೆಲೆಯಲ್ಲಿ ರೂ.35 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.55 ಲಕ್ಷ ಬೆಲೆ ಪಡೆದುಕೊಳ್ಳಲಿದೆ ಎನ್ನಲಾಗಿದೆ.

MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿ‍ಎಲ್ ಕಳೆದುಕೊಂಡ ಡ್ರೈವರ್..!

ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಇನ್ನು ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆ ಬರುತ್ತಿರುವ ಹಿನ್ನಲೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಇನ್ನು ಹಲವು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಸಿದ್ದಪಡಿಸಿರುವ ಟೆಸ್ಲಾ ಸಂಸ್ಥೆಯು ಮುಂಬರುವ 2020ರ ವೇಳೆಗೆ ಭಾರತದಲ್ಲೂ ತನ್ನ ಎಲೆಕ್ಟ್ರಿಕ್ ಕಾರು ಉತ್ಪನ್ನಗಳ ಮಾರಾಟವನ್ನು ಅಧಿಕೃತವಾಗಿ ಆರಂಭಿಸುವ ಯೋಜನೆಯಲ್ಲಿದ್ದು, ವ್ಯಯಕ್ತಿಯ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಟೆಸ್ಲಾ ಮಾರಾಟ ಮಾಡಲಿದೆ.

Most Read Articles

Kannada
Read more on ಟೆಸ್ಲಾ tesla
English summary
The much awaited Tesla electric Cybertruck has unveiled in USA. It will have a maximum range of 800 kilometers in single charge.
Story first published: Saturday, November 23, 2019, 18:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X