ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಆಟೋ ಉತ್ಪಾದನಾ ಸಂಸ್ಥೆಯಾಗಿರುವ ಟೆಸ್ಲಾ ಮುಂದಿನ ಕೆಲವೇ ದಿನಗಳಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಡುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಹೊಸ ಕಾರುಗಳನ್ನು ಪರಿಚಯಿಸಲು ಉತ್ಸುಕವಾಗಿದೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಹೆಚ್ಚುತ್ತಿರುವ ಮಾಲಿನ್ಯವನ್ನು ತಗ್ಗಿಸಲು ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಉತ್ತೇಜಿಸಲು ವಿಶ್ವದ ಬಹುತೇಕ ರಾಷ್ಟ್ರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭಾರತ ಸರ್ಕಾರ ಕೂಡಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಮಟ್ಟದ ಸಬ್ಸಡಿಗಳನ್ನು ಘೋಷಣೆ ಮಾಡಿರುವುದು ಭಾರೀ ಬದಲಾವಣೆ ಕಾರಣವಾಗಿದೆ. ಹೀಗಾಗಿ ಭಾರತದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಜಾಗತಿಕ ಮನ್ನಣೆ ಪಡೆದಿರುವ ಟೆಸ್ಲಾ ಕೂಡಾ ಭಾರತದತ್ತ ಮುಖಮಾಡಿದೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

2015ರಿಂದಲೇ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಹೊಸ ಹೊಸ ಆವಿಷ್ಕಾರ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಟೆಸ್ಲಾ ಸಂಸ್ಥೆಯು ಕಳೆದ 2017ರಲ್ಲಿ ತನ್ನ ಮೊದಲ ಕಾರು ಮಾದರಿಯಾದ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳನ್ನು ಬಿಡುಗಡೆ ಮಾಡಿತ್ತು.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಅತ್ಯುತ್ತಮ ದರ್ಜೆಯ ಬ್ಯಾಟರಿ ಸೌಲಭ್ಯ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯದಿಂದಾಗಿ ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಬೇಡಿಕೆ ಪಡೆದುಕೊಂಡಿದ್ದಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಕೇವಲ ಅಮೆರಿಕದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಿಗೂ ಅತಿ ಹೆಚ್ಚು ರಫ್ತುಗೊಳ್ಳುವ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಟೆಸ್ಲಾ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳು ಪ್ರತಿ ಚಾರ್ಜ್‌ಗೆ 300 ಕಿ.ಮಿ ನಿಂದ 480 ಕಿ.ಮಿ ಮೈಲೇಜ್ ರೇಂಜ್ ಪಡೆದುಕೊಂಡಿವೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲೂ ಟೆಸ್ಲಾ ಕಾರುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ಇದೀಗ ಟೆಸ್ಲಾ ಸಂಸ್ಥೆಯೇ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಅಧಿಕೃತವಾದ ಮಾಹಿತಿ ನೀಡಿದೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಯಶಸ್ವಿ ನಂತರ ಕಳೆದ ವಾರವಷ್ಟೇ ಮಾಡೆಲ್ ವೈ ಎನ್ನುವ ಮತ್ತೊಂದು ಕಾರು ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆಗೊಳಿಸಿರುವ ಟೆಸ್ಲಾ ಸಂಸ್ಥೆಯು 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಸುಳಿವು ಕೊಟ್ಟಿದೆ.

MOST READ: ಹೈವೇ ನಲ್ಲಿ ಚಲಿಸುವ ಹೈ ಸ್ಪೀಡ್ ವಾಹನಗಳ ಮೇಲೆ ಗೂಗಲ್ ಹದ್ದಿನ ಕಣ್ಣು..!

ಭಾರತದಲ್ಲಿ ಟೆಸ್ಲಾ ಎಂಟ್ರಿ ಕುರಿತಂತೆ ಭಾರತೀಯರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಟೆಸ್ಲಾ ಸಿಇಓ ಎಲಾನ್ ಮಸ್ಕ್ ಅವರು, 2019 ಇಲ್ಲವೇ 2020ರ ಆರಂಭದಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾಗಿ ಪ್ರತಿಕ್ರಿಯೆಸಿದ್ದಾರೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಇನ್ನು ಟೆಸ್ಲಾ ಸಂಸ್ಥೆಯು ಕಳೆದ ವಾರವಷ್ಟೇ ಬಿಡುಗಡೆಗೊಳಿಸಿರುವ ಹೊಚ್ಚ ಹೊಸ ಮಾಡೆಲ್ ವೈ ಎಲೆಕ್ಟ್ರಿಕ್ ಎಸ್‌ಯುವಿ ಕೂಡಾ ಸಾಕಷ್ಟು ಸದ್ದು ಮಾಡುತ್ತಿದ್ದು, ಸಿಂಗಲ್ ಚಾರ್ಜ್‌ನಲ್ಲಿ 400ಕಿ.ಮಿ ಮೈಲೇಜ್ ರೇಂಜ್‌ನೊಂದಿಗೆ ಎಲೆಕ್ಟ್ರಿಕ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಭಾರತೀಯ ಬೆಲೆಗಳ ಪ್ರಕಾರ ರೂ. 33 ಲಕ್ಷದಿಂದ ರೂ.40 ಲಕ್ಷ ಬೆಲೆ ಹೊಂದಿರುವ ಮಾಡೆಲ್ ವೈ ಎಲೆಕ್ಟ್ರಿಕ್ ಕಾರು ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದ್ದು, ಭಾರತೀಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸಲು ಟೆಸ್ಲಾ ಚಿಂತನೆ ನಡೆಸಿದೆ.

ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾದ ಟೆಸ್ಲಾ ಹೇಳಿದ್ದೇನು?

ಇದಲ್ಲದೇ 2015ರಲ್ಲಿ ಸಿಲಿಕಾನ್ ವ್ಯಾಲಿಯಲ್ಲಿರುವ ಟೆಸ್ಲಾ ಕಾರು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಟೆಸ್ಲಾ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಭಾರತದಲ್ಲೂ ಟೆಸ್ಲಾ ಎಲೆಕ್ಟ್ರಿಕ್ ಕಾರು ಉತ್ಪಾದನೆ ಮತ್ತು ಮಾರಾಟಕ್ಕೆ ಚಾಲನೆ ನೀಡುವಂತೆ ಆಹ್ವಾನ ನೀಡಿದ್ದರು.

More from DriveSpark

Article Published On: Wednesday, March 20, 2019, 17:01 [IST]
English summary
American electric car maker, Tesla is planning to come to India this year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+