ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳಲ್ಲಿ ಸಾಂಪ್ರದಾಯಿಕ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ತಗ್ಗಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಆವೃತ್ತಿಗಳು ಬಿಡುಗಡೆಗಾಗಿ ಸಿದ್ದವಾಗಿವೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಆಟೋ ಉತ್ಪಾದನಾ ಸಂಸ್ಥೆಯಾಗಿರುವ ಟೆಸ್ಲಾ ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ವಾಹನ ಮಾರಾಟ ಜಾಲವನ್ನು ವಿಸ್ತರಣೆ ಮಾಡಲು ಮುಂದಾಗಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಹೊಸ ಕಾರುಗಳನ್ನು ಪರಿಚಯಿಸಲು ಉತ್ಸುಕವಾಗಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಮಾಲಿನ್ಯವನ್ನು ತಗ್ಗಿಸಲು ಮತ್ತು ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಉತ್ತೇಜಿಸಲು ವಿಶ್ವದ ಬಹುತೇಕ ರಾಷ್ಟ್ರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭಾರತ ಸರ್ಕಾರ ಕೂಡಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಮಟ್ಟದ ಸಬ್ಸಡಿ, ಜಿಎಸ್‌ಟಿ ಇಳಿಕೆ ಮತ್ತು ತೆರಿಗೆ ವಿನಾಯ್ತಿಗಳನ್ನು ಘೋಷಣೆ ಮಾಡಿರುವುದು ಭಾರೀ ಬದಲಾವಣೆ ಕಾರಣವಾಗಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಹೀಗಾಗಿ ಭಾರತದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಜಾಗತಿಕ ಮನ್ನಣೆ ಪಡೆದಿರುವ ಟೆಸ್ಲಾ ಕೂಡಾ ಭಾರತದತ್ತ ಮುಖಮಾಡಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

2015ರಿಂದಲೇ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಹೊಸ ಹೊಸ ಆವಿಷ್ಕಾರ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಟೆಸ್ಲಾ ಸಂಸ್ಥೆಯು ಕಳೆದ 2017ರಲ್ಲಿ ತನ್ನ ಮೊದಲ ಕಾರು ಮಾದರಿಯಾದ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟವಾಗಿರುವ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳು ಹಲವಾರು ಐಷಾರಾಮಿ ಕಾರುಗಳನ್ನು ಹಿಂದಿಕ್ಕಿ ಅತ್ಯಧಿಕ ಲಾಭಾಂಶ ತಂದುಕೊಟ್ಟಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಅತ್ಯುತ್ತಮ ದರ್ಜೆಯ ಬ್ಯಾಟರಿ ಸೌಲಭ್ಯ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯದಿಂದಾಗಿ ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಬೇಡಿಕೆ ಪಡೆದುಕೊಂಡಿದ್ದಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಕೇವಲ ಅಮೆರಿಕದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಿಗೂ ಅತಿ ಹೆಚ್ಚು ರಫ್ತುಗೊಳ್ಳುವ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಟೆಸ್ಲಾ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳು ಪ್ರತಿ ಚಾರ್ಜ್‌ಗೆ 300 ಕಿ.ಮಿ ನಿಂದ 480 ಕಿ.ಮಿ ಮೈಲೇಜ್ ರೇಂಜ್ ಪಡೆದುಕೊಂಡಿವೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲೂ ಟೆಸ್ಲಾ ಕಾರುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ಇದೀಗ ಟೆಸ್ಲಾ ಸಂಸ್ಥೆಯೇ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಅಧಿಕೃತವಾದ ಮಾಹಿತಿ ನೀಡಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಯಶಸ್ವಿ ನಂತರ ಕಳೆದ ದಿನಗಳ ಹಿಂದಷ್ಟೇ ಮಾಡೆಲ್ ವೈ ಎನ್ನುವ ಮತ್ತೊಂದು ಕಾರು ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆಗೊಳಿಸಿರುವ ಟೆಸ್ಲಾ ಸಂಸ್ಥೆಯು 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಸುಳಿವು ಕೊಟ್ಟಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಈ ಹಿಂದೆಯೇ ಭಾರತದಲ್ಲಿ ಟೆಸ್ಲಾ ಎಂಟ್ರಿ ನೀಡುವ ಕುರಿತಂತೆ ಭಾರತೀಯರೊಬ್ಬರ ಪ್ರಶ್ನೆಗೆ ಉತ್ತರಿಸಿದ್ದ ಟೆಸ್ಲಾ ಸಿಇಓ ಎಲಾನ್ ಮಸ್ಕ್ ಅವರು, 2019 ಇಲ್ಲವೇ 2020ರ ಆರಂಭದಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾಗಿ ಪ್ರತಿಕ್ರಿಯೆಸಿದ್ದರು. ಇದೀಗ ಅಧಿಕೃತವಾಗಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಉತ್ಪಾದನೆಯನ್ನು ಶೀಘ್ರದಲ್ಲೇ ಕೈಗೊಳ್ಳುವುದಾಗಿ ಹೇಳಿಕೊಂಡಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಇನ್ನು ಟೆಸ್ಲಾ ಸಂಸ್ಥೆಯು ಕಳೆದ ದಿನಗಳ ಹಿಂದೆ ಬಿಡುಗಡೆಗೊಳಿಸಿರುವ ಹೊಚ್ಚ ಹೊಸ ಮಾಡೆಲ್ ವೈ ಎಲೆಕ್ಟ್ರಿಕ್ ಎಸ್‌ಯುವಿ ಕೂಡಾ ಸಾಕಷ್ಟು ಸದ್ದು ಮಾಡುತ್ತಿದ್ದು, ಸಿಂಗಲ್ ಚಾರ್ಜ್‌ನಲ್ಲಿ 400ಕಿ.ಮಿ ಮೈಲೇಜ್ ರೇಂಜ್‌ನೊಂದಿಗೆ ಎಲೆಕ್ಟ್ರಿಕ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಭಾರತಕ್ಕೆ ಟೆಸ್ಲಾ ಬರೋದು ಪಕ್ಕಾ- ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನ

ಭಾರತೀಯ ಬೆಲೆಗಳ ಪ್ರಕಾರ ರೂ. 33 ಲಕ್ಷದಿಂದ ರೂ.40 ಲಕ್ಷ ಬೆಲೆ ಹೊಂದಿರುವ ಮಾಡೆಲ್ ವೈ ಎಲೆಕ್ಟ್ರಿಕ್ ಕಾರು ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದ್ದು, ಭಾರತೀಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸಲು ಟೆಸ್ಲಾ ಚಿಂತನೆ ನಡೆಸಿದೆ.

Most Read Articles

Kannada
Read more on ಟೆಸ್ಲಾ tesla
English summary
Tesla Coming To India in 2020 Says Elon Musk.
Story first published: Monday, July 29, 2019, 13:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X