Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೆಕ್ಸ್ಟ್ ಜನರೇಷನ್ ಡಸ್ಟರ್ ಕಾರಿನಲ್ಲಿ ಡೀಸೆಲ್ ಆಯ್ಕೆಯನ್ನು ಕೈಬಿಡಲಿದೆ ರೆನಾಲ್ಟ್
ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು 2020ರಿಂದಲೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ಸುಳಿವು ನೀಡಿವೆ.

ಹೌದು, ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ. ಹೀಗಾಗಿಯೇ ರೆನಾಲ್ಟ್, ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕೈಬಿಟ್ಟು ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳ ಉತ್ಪಾದನೆಯತ್ತ ಹೆಚ್ಚಿನ ಗಮನಹರಿಸಲು ಮುಂದಾಗಿವೆ.

ಈಗಾಗಲೇ ಮಾರುತಿ ಸುಜುಕಿ ಸಂಸ್ಥೆಯು ಅಧಿಕೃತವಾಗಿಯೇ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು 2020ರ ಏಪ್ರಿಲ್‌ನಿಂದ ಬಂದ್ ಮಾಡುವುದಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ.

ಇದೀಗ ರೆನಾಲ್ಟ್ ಕೂಡಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟಕ್ಕೆ ಗುಡ್‌ಬೈ ಹೇಳುವ ಮುನ್ಸೂಚನೆ ನೀಡಿದ್ದು, ಕಳೆದ ವಾರವಷ್ಟೇ ಅನಾವರಣಗೊಳಿಸಲಾದ ಟ್ರೈಬರ್ ಎಂಪಿವಿ ಕಾರಿನಲ್ಲೂ ಸಹ ಪೆಟ್ರೋಲ್ ಹೊರತುಪಡಿಸಿ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡದಿರಲು ತೀರ್ಮಾನಿಸಿದೆ.

ಹಾಗೆಯೇ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿರುವ ನೆಕ್ಸ್ಟ್ ಜನರೇಷನ್ ಡಸ್ಟರ್ ಆವೃತ್ತಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಗಳನ್ನು ತಗ್ಗಿಸಿ ಪೆಟ್ರೋಲ್ ಮತ್ತು ಹೈಬ್ರಿಡ್ ಆವೃತ್ತಿಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಿದ್ದು, ತದನಂತರ ನಿಧಾನವಾಗಿ ಡೀಸೆಲ್ ಎಂಜಿನ್‌ಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಿದೆ. ಈ ಬಗ್ಗೆ ಎನ್‌ಡಿಟಿವಿ ಆಟೋ ಜೊತೆ ಮಾತನಾಡಿರುವ ರೆನಾಲ್ಟ್ ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ನಿಲ್ಲಿಸುವ ಯೋಜನೆಯಲ್ಲಿದ್ದೇವೆ ಎಂದಿದ್ದಾರೆ.

2020ರ ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ನಿಯಮವು ಜಾರಿಗೆ ಬರುತ್ತಿದ್ದು, ಚಾಲ್ತಿಯಲ್ಲಿರುವ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟವು ಸಂಪೂರ್ಣವಾಗಿ ಬಂದ್ ಆಗಲಿದೆ. ಹೀಗಾಗಿ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತಿಕರಣ ಸಾಧ್ಯವಿಲ್ಲದ ಡೀಸೆಲ್ ಎಂಜಿನ್‌ಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ.

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 1.50 ರಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ. ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.1.50 ಲಕ್ಷ ರೂ. 2 ಲಕ್ಷ ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಇದರಿಂದ ರೆನಾಲ್ಟ್ ಸಂಸ್ಥೆಯು ನಿಸ್ಸಾನ್ ಉತ್ಪಾದನೆಯ ಡೀಸೆಲ್ ಎಂಜಿನ್ ಆಯ್ಕೆ ಕೈಬಿಟ್ಟು, ಸದ್ಯ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು1.6-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಉನ್ನತಿಕರಿಸಿ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

ಇನ್ನು ಮುಂದಿನ ವಾರವಷ್ಟೇ ಡಸ್ಟರ್ ಫೇಸ್‌ಲಿಫ್ಟ್ ಆವೃತ್ತಿಯು ಬಿಡುಗಡೆಯಾಗುತ್ತಿದ್ದು, 2ನೇ ತಲೆಮಾರಿನ ಈ ಕಾರು ತಾಂತ್ರಿಕವಾಗಿ 2017ರಿಂದ ಯಾವುದೇ ಹೆಚ್ಚುವರಿ ಬದಲಾವಣೆ ಪಡೆದಿಲ್ಲ. ಆದರೆ, 2021 ಅಥವಾ 2022ರ ವೇಳೆಗೆ ಬಿಡುಗಡೆಯಾಗಲಿರುವ 3ನೇ ಜನರೇಷನ್ ಡಸ್ಟರ್ ಕಾರು ಈಗಿರುವ ಆವೃತ್ತಿಗಿಂತ ಸಾಕಷ್ಟು ಬದಲಾವಣೆ ಪಡೆದುಕೊಳ್ಳಲಿದೆ.