2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ವರ್ಷದ ಆರಂಭದಿಂದಲೂ ಆಟೋ ಉದ್ಯಮವು ಕುಸಿತಕ್ಕೆ ಒಳಗಾಗದರೂ ಕೂಡಾ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಕಾರು ಮಾದರಿಯನ್ನು 2019ರ ಅವಧಿಯಲ್ಲಿ ಬಿಡುಗಡೆಗೊಳಿಸಿದ್ದು, ಅಚ್ಚರಿ ಎನ್ನುವಂತೆ ಹಲವಾರು ಹೊಸ ಕಾರು ಮಾದರಿಗಳು ಆಟೋ ಉದ್ಯಮದಲ್ಲಿನ ಏರಿಳಿತದ ನಡುವೆಯೂ ಭರ್ಜರಿ ಮಾರಾಟಗೊಂಡಿವೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಹೌದು, ಆರ್ಥಿಕ ಹಿಂಜರಿತದಿಂದಾಗಿ ಭಾರೀ ನಷ್ಟ ಅನುಭಿಸಿದ ಆಟೋ ಉತ್ಪಾದನಾ ಸಂಸ್ಥೆಗಳು ಕನಿಷ್ಠ ಮಟ್ಟದ ಮಾರಾಟ ಪ್ರಮಾಣವನ್ನು ದಾಖಲಿಸಲು ಸಹ ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. ಈ ನಡುವೆ ಬಿಡುಗಡೆಯಾದ ಕೆಲವು ಹೊಸ ಕಾರು ಮಾದರಿಗಳು ಆಟೋ ಉದ್ಯಮಕ್ಕೆ ಪೂರಕವಾದ ಬೆಳವಣಿಗೆಯೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು ಮಾತ್ರ ಸುಳ್ಳಲ್ಲ. ಹಾಗಾದ್ರೆ 2019ರಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳು ಯಾವವು? ಮತ್ತು ಅವುಗಳ ಗ್ರಾಹಕರ ಆಕರ್ಷಿಸಲು ಕಾರಣವಾದಂತಹ ಫೀಚರ್ಸ್‌ಗಳ ಕುರಿತು ಇಲ್ಲಿ ಚರ್ಚಿಸಲಾಗಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಟಾಟಾ ಹ್ಯಾರಿಯರ್

2018ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡಿದ್ದ ಟಾಟಾ ಹ್ಯಾರಿಯರ್ ಎಸ್‌ಯುವಿ ಕಾರು 2019ರ ಜನವರಿ ಕೊನೆಯಲ್ಲಿ ಬಿಡುಗಡೆಗೊಂಡಿತ್ತು. ಬಿಡುಗಡೆಯ ನಂತರ ಇದುವರೆಗೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿರುವ ಹ್ಯಾರಿಯರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.12.99 ಲಕ್ಷದಿಂದ ರೂ.16.95 ಲಕ್ಷ ಬೆಲೆ ಹೊಂದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿರುವ ಹ್ಯಾರಿಯರ್ ಕಾರು 2-ಲೀಟರ್ 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತಿದೆ. ಸದ್ಯದಲ್ಲೇ ಪೆಟ್ರೋಲ್ ಎಂಜಿನ್ ಕೂಡಾ ಬಿಡುಗಡೆಯಾಗಲಿದ್ದು, ಮಾರ್ಚ್ ವೇಳೆಗೆ ಬಿಎಸ್-6 ಮಾದರಿ ರಸ್ತೆಗಿಳಿಯಲಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಮಹೀದ್ರಾ ಎಕ್ಸ್‌ಯುವಿ300

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಸಾಕಷ್ಟು ಜನಪ್ರಿಯತೆ ಹೊಂದುತ್ತಿರುವ ಎಕ್ಸ್‌ಯುವಿ300 ಮಾದರಿಯು 2019 ಫೆಬ್ರುವರಿಯಲ್ಲಿ ಬಿಡುಗಡೆಗೊಂಡಿತ್ತು. ಗ್ರಾಹಕರ ಬೇಡಿಕೆಯೆಂತೆ ಕೆಲವು ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿರುವ ಎಕ್ಸ್‌ಯುವಿ300 ಮಾದರಿಯ ಸದ್ಯ ಬಿಎಸ್-6 ಪೆಟ್ರೋಲ್ ಎಂಜಿನ್‌ನೊಂದಿಗೆ ನವೀಕರಣಗೊಂಡಿದೆ.

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8 ಎನ್ನುವ ಪ್ರಮುಖ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12.69 ಲಕ್ಷ ಬೆಲೆ ಹೊಂದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ನಿಸ್ಸಾನ್ ಕಿಕ್ಸ್

ವರ್ಷದ ಆರಂಭದಲ್ಲಿ ಬಿಡುಗಡೆಯಾದ ಕಾರುಗಳ ಪೈಕಿ ನಿಸ್ಸಾನ್ ಕಿಕ್ಸ್ ಎಸ್‌ಯುವಿ ಕೂಡಾ ಒಂದು. ಎಕ್ಸ್ಇ, ಎಕ್ಸ್ಎಲ್, ಎಕ್ಸ್‌ವಿ, ಮತ್ತು ಎಕ್ಸ್‌ವಿ ಪ್ರೀ ಎಂಬ ಐದು ವೆರಿಯೆಂಟ್ ಹೊಂದಿರುವ ಕಿಕ್ಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9.55 ಲಕ್ಷದಿಂದ ರೂ.13.69 ಲಕ್ಷ ಬೆಲೆ ಹೊಂದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಕಿಕ್ಸ್ ಮಾದರಿಯು 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಹಾಗೂ 1.5-ಲೀಟರ್ ಕೆ9ಕೆ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಡಿಸೇಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಹ್ಯುಂಡೈ ವೆನ್ಯೂ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹ್ಯುಂಡೈ ವೆನ್ಯೂ ಕಾರು ಬಿಡುಗಡೆಯಾದ ಕೇವಲ ದಿನಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದುವರೆಗೆ ಬರೋಬ್ಬರಿ 1.15 ಲಕ್ಷ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ವರ್ಷದ ಬೆಸ್ಟ್ ಕಾರು ಮಾದರಿಯಾಗಿ ಹೊರಹೊಮ್ಮಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6,50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದ್ದು, 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್, 1.4-ಡೀಸೆಲ್ ಎಂಜಿನ್‌ ಜೊತೆಗೆ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ನೆಚ್ಚಿನ ಆಯ್ಕೆಯಾಗಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಎಂಜಿ ಹೆಕ್ಟರ್

ಜೂನ್ ಆರಂಭದಲ್ಲಿ ಬಿಡುಗಡೆಯಾದ ಎಂಜಿ ಹೆಕ್ಟರ್ ಕಾರು ಆಕರ್ಷಕ ಬೆಲೆಗಳೊಂದಿಗೆ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌‌ನೊಂದಿಗೆ ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 1.5-ಲೀಟರ್ ಪೆಟ್ರೋಲ್, 2.0-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್(48ವೋಲ್ಟ್) ಎಂಜಿನ್ ಹೊಂದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಕಿಯಾ ಸೆಲ್ಟೊಸ್

ಅಗಸ್ಟ್ ಕೊನೆಯಲ್ಲಿ ಬಿಡುಗಡೆಯಾದ ಕಿಯಾ ಸೆಲ್ಟೊಸ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗರಿಷ್ಠ ಬೇಡಿಕೆಯೊಂದಿಗೆ ನಂ.1 ಸ್ಥಾನಕ್ಕೇರಿದ್ದು, ಅತಿ ಕಡಿಮೆ ಅವಧಿಯಲ್ಲಿ 40 ಸಾವಿರ್ ಯುನಿಟ್ ಮಾರಾಟಗೊಳ್ಳುವ ಮೂಲಕ ಅಚ್ಚರಿಯ ಬೆಳವಣೆಗೆ ಸಾಧಿಸಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಕಿಯಾ ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 16.99 ಲಕ್ಷಕ್ಕೆ ಖರೀದಿಗೆ ಲಭ್ಯವಿದ್ದು, ಒಟ್ಟು 15 ವೆರಿಯೆಂಟ್‌ಗಳೊಂದಿಗೆ ಬಿಎಸ್-6 ಪ್ರೇರಿತ 1.4-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಮಾರುತಿ ಸುಜುಕಿ ನಿರ್ಮಾಣದ ಎಸ್-ಪ್ರೆಸ್ಸೊ ಮೈಕ್ರೊ ಎಸ್‌ಯುವಿ ಕಾರು ಮಾರುಕಟ್ಟೆಯಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಅಧಿಕೃತ ಮಾರಾಟ ಆರಂಭವಾದ ನಂತರ ಇದುವರೆಗೆ ಬರೋಬ್ಬರಿ 20 ಸಾವಿರ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.3.69 ಲಕ್ಷದಿಂದ ರೂ. 4.91 ಲಕ್ಷ ಬೆಲೆ ಪಡೆದುಕೊಂಡಿದ್ದು,998 ಸಿಸಿ ತ್ರಿ-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ ‌68-ಬಿಎಚ್‌ಪಿ ಮತ್ತು 90-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಉತ್ತಮ ಇಂಧನ ಕಾರ್ಯಕ್ಷಮತೆ ಪಡೆದಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ರೆನಾಲ್ಟ್ ಟ್ರೈಬರ್

ಕಳೆದ ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಗೊಂಡಿದ್ದ ಟ್ರೈಬರ್ ಎಂಪಿವಿ ಕಾರು ರೆನಾಲ್ಟ್ ನಿರ್ಮಾಣದ ಕಾರುಗಳ ಮಾರಾಟದಲ್ಲಿ ನಂ.1 ಸ್ಥಾನಕ್ಕೇರಿದ್ದು, ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಹೆಚ್ಚು ಮಾರಾಟ ದಾಖಲಿಸಿರುವ ಮೂಲಕ ರೆನಾಲ್ಟ್ ಸಂಸ್ಥೆಯು ದೇಶದ 5ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿರುವ ಟ್ರೈಬರ್ ಕಾರು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ಹಲವು ವಿಭಿನ್ನ ವೈಶಿಷ್ಟಯತೆಗಳನ್ನು ಹೊಂದಿದ್ದು, 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಪಡೆದುಕೊಂಡಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಹ್ಯುಂಡೈ ಕೊನಾ ಎಲೆಕ್ಟ್ರಿಕ್

ಹ್ಯುಂಡೈ ಸಂಸ್ಥೆಯು ಸದ್ಯ ವಿದೇಶಿ ಮಾರುಕಟ್ಟೆಗಳಿಂದ ಕೋನಾ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿದ್ದು, ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹಾಗೆಯೇ ಹೊಸ ಕಾರಿನ ಮೇಲೆ ರೂ.1.50 ತೆರಿಗೆ ವಿನಾಯ್ತಿ ಸಹ ಸಿಗಲಿದ್ದು, ಬ್ಯಾಟರಿ ಮೇಲೆ 8 ವರ್ಷಗಳ ವಾರಂಟಿ ನೀಡಲಾಗಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಕೊನಾ ಕಾರು 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ವೈಶಿಷ್ಟ್ಯತೆಯನ್ನು ಹೊಂದಿದ್ದು, 4,180-ಎಂಎಂ ಉದ್ದ, 1,800-ಎಂಎಂ ಅಗಲ, 1,570-ಎಂಎಂ ಎತ್ತರ ಮತ್ತು 2,600-ಎಂಎಂ ವೀಲ್ಹ್‌ಬೇಸ್‌ನೊಂದಿಗೆ 332-ಲೀಟರ್ ಸಾಮರ್ಥ್ಯದ ಲಗೇಜ್ ಸ್ಪೆಸ್ ಪಡೆದುಕೊಂಡಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ಬಿಎಂಡಬ್ಲ್ಯು ಎಕ್ಸ್7 ಎಸ್‌ಯುವಿ

ಬಿಎಂಡಬ್ಲ್ಯು ನಿರ್ಮಾಣದ ಮೊದಲ 7 ಸೀಟರ್ ಎಸ್‌ಯುವಿ ಮಾದರಿಯಾದ ಎಕ್ಸ್7 ಐಷಾರಾಮಿ ಕಾರು ಕಳೆದ ಜುಲೈನಲ್ಲಿ ಹಲವು ವಿಶೇಷತೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಡಿಸೈನ್ ಫ್ಯೂರ್ ಎಕ್ಸ್‌ಲೆನ್ಸ್ ತಂತ್ರಜ್ಞಾನ ವಿನ್ಯಾಸ ಹೊಂದಿರುವ ಹೊಸ ಎಕ್ಸ್7 ಕಾರು ಎಕ್ಸ್ ಸರಣಿ ಕಾರು ಮಾದರಿಗಳಲ್ಲೇ ಅತಿ ವಿನೂತ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರಿನ ಬೆಲೆಯು ರೂ.98.90 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಎಕ್ಸ್‌ಡ್ರೈವ್ 40ಐ ಮತ್ತು ಎಕ್ಸ್‌ಡ್ರೈವ್ 30ಡಿ ಡಿಪಿಇ ಸಿಗ್ನಿಚೆರ್ ಎರಡು ಮಾದರಿಗಳು ಒಂದೇ ರೀತಿಯಾಗಿ ಬೆಲೆ ನೀಡಿರುವುದು ಮತ್ತೊಂದು ವಿಶೇಷವಾಗಿದೆ. ಪೆಟ್ರೋಲ್ ಮಾದರಿಯು 3-ಲೀಟರ್ ಇನ್ ಲೈನ್ ಸಿಕ್ಸ್ ಸಿಲಿಂಡರ್ ಟ್ವಿನ್ ಟರ್ಬೋ ಎಂಜಿನ್ ಹೊಂದಿದ್ದರೆ ಡೀಸೆಲ್ ಮಾದರಿಯು ಕೂಡಾ 3.0-ಲೀಟರ್ ಇನ್ ಲೈನ್ ಸಿಕ್ಸ್ ಸಿಲಿಂಡರ್ ಟ್ವಿನ್ ಟರ್ಬೋ ಎಂಜಿನ್ ಹೊಂದಿದೆ.

Most Read Articles

Kannada
English summary
Top 10 Cars Launches In 2019. Read more in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X