ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಟೊಯೊಟಾ ಸಂಸ್ಥೆಯು ಮಾರುತಿ ಸುಜುಕಿ ನಿರ್ಮಾಣದ ಬಲೆನೊ ಕಾರನ್ನು ರೀ ಬ್ಯಾಡ್ಜ್‌ನೊಂದಿಗೆ ಗ್ಲಾಂಝಾ ಹೆಸರಿನಲ್ಲಿ ಜೂನ್ 6ರಂದು ಬಿಡುಗಡೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ರೂ.10 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಭಾರತದಲ್ಲಿ ಮೊದಲ ಬಾರಿಗೆ ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳನ್ನು ಉತ್ಪಾದನೆ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯ ಭಾಗವಾಗಿ ಮಾರುತಿ ಸುಜುಕಿ ಜನಪ್ರಿಯ ಕಾರು ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಟೊಯೊಟಾ ಸಂಸ್ಥೆಯು ರೀ ಬ್ಯಾಡ್ಜ್‌ನೊಂದಿಗೆ ಮರುಬಿಡುಗಡೆ ಮಾಡುತ್ತಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಬಲೆನೊ ಕಾರಿನ ಮೂಲ ಆವೃತ್ತಿಯಂತೆಯೇ ಇರುವ ಗ್ಲಾಂಝಾ ಕಾರು ಟೊಯೊಟಾ ಸಂಸ್ಥೆಯ ಲೊಗೊ ಮತ್ತು ಮುಂಭಾಗದಲ್ಲಿ ಗ್ರಿಲ್ ಹೊರತುಪಡಿಸಿ ಬಹುತೇಕ ತಾಂತ್ರಿಕ ಅಂಶಗಳು ಪ್ರಸ್ತುತ ಬಲೆನೊ ಮಾದರಿಯಲ್ಲೇ ಪಡೆದುಕೊಂಡಿದ್ದು, ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿರುವ ಫಸ್ಟ್ ಲುಕ್ ಟೀಸರ್‌ನಲ್ಲಿ ಇದು ಸ್ಪಷ್ಟವಾಗಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಮಾಹಿತಿ ಪ್ರಕಾರ, ಹೊಸ ಗ್ಲಾಂಝ್ ಕಾರು ಸ್ಮಾರ್ಟ್ ಹೈಬ್ರಿಡ್ ಮತ್ತು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದ್ದು, 2020ರ ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್- 6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಮಾದರಿಯನ್ನು ಈಗಲೇ ಉನ್ನತಿಕರಿಸಲಾಗಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿ ಬಲೆನೊ ಕಾರುಗಳು ಸ್ಮಾರ್ಟ್ ಹೈಬ್ರಿಡ್ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, ಬಲೆನೊ ಮಾದರಿಯಲ್ಲೇ ಗ್ಲಾಂಝಾ ಕಾರು ಕೂಡಾ ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗುತ್ತಿದೆ. ಆದ್ರೆ ಗ್ಲಾಂಝಾ ಆವೃತ್ತಿಯಲ್ಲಿ ಡೀಸೆಲ್ ಆವೃತ್ತಿಯನ್ನು ಬಿಡುಗಡೆ ಮಾಡುವ ಬಗ್ಗೆ ಇನ್ನು ಕೂಡಾ ಯಾವುದೇ ಸ್ಪಷ್ಟ ಮಾಹಿತಿಗಳಿಲ್ಲ,

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಇನ್ನು ಗ್ಲಾಂಝಾ ಕಾರು ವಿ ಮತ್ತು ಜೆಡ್ ಎನ್ನುವ ಎರಡು ಆವೃತ್ತಿಯಲ್ಲಿ ಮಾರಾಟಕ್ಕೆ ಲಭ್ಯವಿರಲಿದ್ದು, ಗ್ಲಾಂಝಾ ಖರೀದಿಸುವ ಗ್ರಾಹಕರಿಗೆ ಟೊಯೊಟಾ ಸಂಸ್ಥೆಯು 3 ವರ್ಷ ಅಥವಾ 1 ಲಕ್ಷ ಕಿ.ಮಿ ಮೇಲೆ ಗರಿಷ್ಠ ವಾರಂಟಿ ನೀಡಲು ಮುಂದಾಗಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಈ ಮೂಲಕ ಹ್ಯುಂಡೈ ಸಂಸ್ಥೆಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಹೊಸ ಯೋಜನೆಯ ಮೂಲಕ ಭಾರೀ ಪ್ರಮಾಣದ ಆದಾಯ ಗಳಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಯೋಜನೆಯು ಎರಡು ಸಂಸ್ಥೆಗಳಿಗೂ ಸಾಕಷ್ಟು ಸಹಕಾರಿಯಾಗಲಿದೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಯಾಕೆಂದ್ರೆ ಹೊಸ ಕಾರುಗಳ ಉತ್ಪಾದನೆಗಾಗಿ ಸಾವಿರಾರು ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದ ಮಾರುತಿ ಸುಜುಕಿ ಸಂಸ್ಥೆಯು ಉತ್ಪಾದನಾ ಸಾಮರ್ಥ್ಯಕ್ಕಿಂತ ಕಡಿಮೆ ಪ್ರಮಾಣವನ್ನು ಹೊಂದಿರುವ ಬಿಡದಿ ಟೊಯೊಟಾ ಘಟಕವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲು ಈ ಯೋಜನೆಯನ್ನು ರೂಪಿಸಿವೆ.

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಸದ್ಯ ಭಾರತದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳನ್ನ ಹೊಂದಿರುವ ಸುಜುಕಿ ಸಂಸ್ಥೆಯು ಹರಿಯಾಣದಲ್ಲಿ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಉತ್ಪಾದನಾ ಘಟಕವನ್ನ ಹೊಂದಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಯಾವುದೇ ಉತ್ಪಾದನಾ ಘಟಕ ಇಲ್ಲದಿರುವುದು ಸುಜುಕಿ ಸಂಸ್ಥೆಗೆ ಕಾರುಗಳ ಸರಬರಾಜು ಒಂದು ಸವಾಲಿನ ವಿಚಾರವೇ ಸರಿ.

MOST READ: ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

ಟೊಯೊಟಾ ಗ್ಲಾಂಝಾ ಕಾರು ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಇದಕ್ಕಾಗಿಯೇ ಸುಜುಕಿ ಸಂಸ್ಥೆಯು ಟೊಯೊಟಾ ಕಾರು ಉತ್ಪಾದನಾ ಘಟಕವನ್ನು ಉನ್ನತಿಕರಿಸಲು 1 ಬಿಲಿಯನ್ ಯುಎಸ್‌ ಡಾಲರ್( ಸುಮಾರು 7 ಸಾವಿರ ಕೋಟಿ) ಹೂಡಿಕೆ ಮಾಡಿರುವುದಲ್ಲದೇ ಕಾರುಗಳ ಉತ್ಪಾದನೆ ಮಾಡಲು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಲಿರುವ ಟೊಯೊಟಾ ಸಂಸ್ಥೆಯು ಮಾರುತಿ ಸುಜುಕಿ ಜೊತೆಗೂಡಿ ಸಾಮಾನ್ಯ ಕಾರುಗಳ ಜೊತೆಗೆ ಪೂರ್ಣಪ್ರಮಾಣದ ಹೈಬ್ರಿಡ್ ಕಾರುಗಳನ್ನು ಸಹ ಉತ್ಪಾದನೆ ಮಾಡುವ ಯೋಜನೆಯಲ್ಲಿವೆ.

Source: autocarindia

Most Read Articles

Kannada
Read more on ಟೊಯೊಟಾ toyota
English summary
Toyota Begins Booking For Upcoming Glanza Premium Hatchback. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X