Just In
- 51 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 1 hr ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 1 hr ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 1 hr ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೆಟಾ ಮತ್ತು ಎಕ್ಸ್ಯುವಿ500 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಟೊಯೊಟಾ ರಷ್..!
ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಕಾರುಗಳು ಈಗಾಗಲೇ ಭಾರೀ ಬೇಡಿಕೆಯೊಂದಿಗೆ ಮುನ್ನಡೆ ಸಾಧಿಸುತ್ತಿದ್ದು, ಸದ್ಯದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಒಂದು ವೇಳೆ ಈ ಹೊಸ ಎಸ್ಯುವಿ ಕಾರುಗಳು ನಿಗದಿತ ಅವಧಿಯಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಭಾರತದಲ್ಲಿ ಪ್ರಮುಖ ಎಸ್ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.
ಹೌದು, ಟೊಯೊಟಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ವಿನೂತನ ವಿನ್ಯಾಸದ ಸಿ-ಹೆಚ್ಆರ್ ಕ್ರಾಸ್ ಓವರ್ ಮತ್ತು ಮಧ್ಯಮ ಕ್ರಮಾಂಕದ ಎಸ್ಯುವಿ ರಷ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಮಾರುಕಟ್ಟೆ ಅಧ್ಯಯನ ನಡೆಸುತ್ತಿರುವುದಾಗಿ ಟೊಯೊಟಾ ಸಂಸ್ಥೆಯು ಮಾಧ್ಯಮ ಸಂವಾದದಲ್ಲಿ ಮಾಹಿತಿ ಹಂಚಿಕೊಂಡಿದೆ.
ಇದಲ್ಲದೇ ಕಳೆದ ಜೂನ್ನಲ್ಲಿ ಹೊಸ ಕಾರುಗಳ ಬಿಡುಗಡೆ ಬಗ್ಗೆ ಮಾತನಾಡಿದ್ದ ಟೊಯೊಟಾ ಕಿರ್ಲೋಸ್ಕರ್ ಇಂಡಿಯಾ ಎಂಡಿ ಅಕಿತೊ ತಾಚಿಬಾನಾ ಅವರು, 'ವಾಹನ ಉದ್ಯಮದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಭಾರತೀಯ ಮಾರುಕಟ್ಟೆಗಾಗಿ ಸದ್ಯದಲ್ಲೇ ಎರಡು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದರು.
ಜೊತೆಗೆ ಬಿಡುಗಡೆಯಾಗಲಿರುವ ಹೊಸ ಕಾರುಗಳು ರೂ. 12 ಲಕ್ಷ ರಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವುದು ನಮ್ಮ ಮುಂದಿನ ಯೋಜನೆಗಳಾಗಿವೆ ಎಂಬ ಮಾಹಿತಿಯನ್ನು ನೀಡಿದ್ದರು.
ಇದಕ್ಕೆ ಪೂರಕ ಎನ್ನುವಂತೆ ಇದೀಗ ಸಿ-ಹೆಚ್ಆರ್ ಕಾರುಗಳ ಎಂಜಿನ್ ಮಾಹಿತಿಯನ್ನು ಹೊರಹಾಕಿದ್ದು, ಶಾರ್ಪ್ ಮತ್ತು ಎಡ್ಜ್ ಡಿಸೈನ್ ಹೊಂದಿರುವ ಈ ಕಾರು ಸ್ಲಿಕ್ ಪ್ರೊಜೆಕ್ಟರ್ ಹೆಡ್ಲ್ಯಾಂಪ್ ಜೊತೆಗೆ ಪ್ರೀಮಿಯಂ ಸೌಲಭ್ಯಗಳೊಂದಿಗೆ ಹೊಂದಿರುವುದು ಕಾರಿನ ಹೊರಭಾಗದ ನೋಟವನ್ನು ಹೆಚ್ಚಿಸಿದೆ ಎನ್ನಬಹುದು. ಇದಲ್ಲದೇ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ ಅಲಾಯ್ ವೀಲ್ಹ್ಗಳು, ಸಿ ಸೇಫ್ ಎಲ್ಇಡಿ ಟೈಲ್ ಲೈಟ್ಸ್, ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು ಮಸ್ಕ್ಯೂಲರ್ ಬಂಪರ್ ಜೊತೆ ಪ್ಲಾಸಿಕ್ಟ್ ಕ್ಯಾಡಿಂಗ್ ಹೊಂದಿದೆ. ಒಟ್ಟಿನಲ್ಲಿ ಕಾರಿನ ವಿನ್ಯಾಸಗಳು ಐಷಾರಾಮಿ ಕಾರಿನ ಹೋಲಿಕೆ ಪಡೆದಿವೆ ಎನ್ನಬಹುದು.
ಹಾಗೆಯೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ರಷ್ ಕಂಪ್ಯಾಕ್ಟ್ ಎಸ್ಯುವಿಯು ಕೂಡಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳಬಹುದಾದ ಕಾರು ಮಾದರಿಯಾಗಿದ್ದು, ಕಂಪ್ಯಾಕ್ಟ್ ಎಸ್ಯುವಿ ವಿಭಾಗದಲ್ಲಿನ ಬೇಡಿಕೆಗಳನ್ನು ಇವು ಪೂರೈಸಲಿವೆ.
ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಟೊಯೊಟಾ ನಿರ್ಮಾಣದ ಇಟಿಯಾಸ್ ಲಿವಾ, ಪ್ಲ್ಯಾಟಿನಂ ಇಟಿಯಾಸ್ ಮತ್ತು ಇಟಿಯಾಸ್ ಕ್ರಾಸ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳು ತುಸು ದುಬಾರಿ ಎನ್ನಿಸಲಿದ್ದು, ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಯಾರಿಸ್ ಸೆಡಾನ್ ಹೊರತಾಗಿ ಮತ್ಯಾವುದೇ ಮಧ್ಯಮ ಗಾತ್ರದ ಎಸ್ಯುವಿ ಕಾರುಗಳಿಲ್ಲ.
MOST READ: ಜಾವಾ ಬೈಕ್ ಸಂಸ್ಥೆಯ ವಿರುದ್ದ ಸಿಡಿದೆದ್ದ ಗ್ರಾಹಕರು
ಯಾರಿಸ್ ತದನಂತರದಲ್ಲಿ ಬರುವ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಕಾರುಗಳು ಕನಿಷ್ಠ ಅಂದ್ರು ಆನ್ ರೋಡ್ ಬೆಲೆಗಳ ಪ್ರಕಾರ ರೂ.19 ಲಕ್ಷದಿಂದ ರೂ.38 ಲಕ್ಷ ಬೆಲೆ ಹೊಂದಿದ್ದು, ಇದು ಮಧ್ಯಮ ವರ್ಗದ ಕಾರು ಖರೀದಿದಾರರಿಗೆ ಅಸಾಧ್ಯದ ಮಾತು.
ಹೀಗಾಗಿ ರಷ್ ಮತ್ತು ಸಿ-ಹೆಚ್ಆರ್ ಕಾರುಗಳನ್ನು ಪರಿಚಯಿಸಲು ಎದುರು ನೋಡುತ್ತಿರುವ ಟೊಯೊಟಾ ಸಂಸ್ಥೆಯು ಇದರ ಜೊತೆ ಜೊತೆಯಲ್ಲಿ ಮಾರುತಿ ಸುಜುಕಿ ಜೊತೆಗೂಡಿ ಸಹಭಾಗಿತ್ವದ ಆಧಾರ ಮೇಲೆ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸಿ ಮಾರಾಟ ಮಾಡಲು ಹೊಸ ಒಪ್ಪಂದ ಮಾಡಿಕೊಂಡಿವೆ.
MOST READ: ಕಡಿಮೆ ಬೆಲೆಯಲ್ಲಿ ಬಿಡುಗಡೆಯಾದ ಬಿಎಸ್-6 ಮಾರುತಿ ಆಲ್ಟೋ 800 ಫೇಸ್ಲಿಫ್ಟ್
ಇದಕ್ಕೆ ಪ್ರತಿಯಾಗಿ ಮಾರುತಿ ಸುಜುಕಿ ಸಂಸ್ಥೆಯು ಸಹ ಟೊಯೊಟಾ ನಿರ್ಮಾಣದ ಕಾರುಗಳ ಮಾರಾಟಕ್ಕೆ ಸಹಕಾರಿಯಾಗಲಿದ್ದು, ಒಪ್ಪಂದ ಆಧಾರದ ಮೇಲೆ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳನ್ನು ಸಹ ಅಭಿವೃದ್ಧಿ ಪಡಿಸಲು ಮಾತುಕತೆ ನಡೆಸಿವೆ.
ಕಾರಿನ ಬೆಲೆ ಮತ್ತು ಬಿಡುಗಡೆ (ಅಂದಾಜು)
ಹೊಚ್ಚ ಸಿ-ಹೆಚ್ಆರ್ ಮತ್ತು ರಷ್ ಕಾರುಗಳು ಭಾರತದಲ್ಲಿ 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು ರೂ.12 ಲಕ್ಷದಿಂದ ರೂ.16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.