ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಭಾರತದಲ್ಲಿ ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳನ್ನು ಉತ್ಪಾದನೆ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯ ಭಾಗವಾಗಿ ಮಾರುತಿ ಸುಜುಕಿ ಜನಪ್ರಿಯ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಟೊಯೊಟಾ ಸಂಸ್ಥೆಯು ರೀ ಬ್ಯಾಡ್ಜ್‌ನೊಂದಿಗೆ ಮರುಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ ಕಾರನ್ನು ಗ್ಲಾಂಝ್ ಹೆಸರಿನೊಂದಿಗೆ ಉತ್ಪಾದನೆ ಮತ್ತು ಮಾರಾಟದ ಜವಾಬ್ದಾರಿಯನ್ನು ಪೂರ್ಣಪ್ರಮಾಣದಲ್ಲಿ ತನ್ನ ವಶಕ್ಕೆ ತೆಗೆದುಕೊಂಡಿರುವ ಟೊಯೊಟಾ ಸಂಸ್ಥೆಯು ಹೊಸ ಕಾರನ್ನು ಮುಂದಿನ ತಿಂಗಳು ಜೂನ್ ಆರಂಭದಲ್ಲಿ ಬಿಡುಗಡೆಯ ಸುಳಿವು ನೀಡಿದ್ದು, ಇದೀಗ ಗ್ಲಾಂಝ್ ಕಾರಿನ ಫಸ್ಟ್ ಲುಕ್ ಟೀಸರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಟೀಸರ್‌ನಲ್ಲಿರುವಂತೆ ಹೊಸ ಗ್ಲಾಂಝ್ ಕಾರು ಬಲೆನೊ ಮಾದರಿಯಲ್ಲೇ ಬಹುತೇಕ ಡಿಸೈನ್ ಹೊಂದಿದ್ದು, ಕೇವಲ ಗ್ರಿಲ್‌ ಮತ್ತು ಬ್ರಾಂಡ್ ಲೊಗೊದಲ್ಲಿ ಮಾತ್ರವೇ ಬದಲಾವಣೆಗೊಂಡಿರುವುದು ಸ್ಪಷ್ಟವಾಗಿದೆ.

ಮಾಹಿತಿ ಪ್ರಕಾರ, ಹೊಸ ಗ್ಲಾಂಝ್ ಕಾರು ಸ್ಮಾರ್ಟ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, 2020ರ ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್- 6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರನ್ನು ಈಗಲೇ ಉನ್ನತಿಕರಿಸಲಾಗಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಈ ಮೂಲಕ ಹ್ಯುಂಡೈ ಸಂಸ್ಥೆಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಹೊಸ ಯೋಜನೆಯ ಮೂಲಕ ಭಾರೀ ಪ್ರಮಾಣದ ಆದಾಯ ಗಳಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಯೋಜನೆಯು ಎರಡು ಸಂಸ್ಥೆಗಳಿಗೂ ಸಾಕಷ್ಟು ಸಹಕಾರಿಯಾಗಲಿದೆ. ಯಾಕೆಂದ್ರೆ ಹೊಸ ಕಾರುಗಳ ಉತ್ಪಾದನೆಗಾಗಿ ಸಾವಿರಾರು ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದ ಮಾರುತಿ ಸುಜುಕಿ ಸಂಸ್ಥೆಯು ಉತ್ಪಾದನಾ ಸಾಮರ್ಥ್ಯಕ್ಕಿಂತ ಕಡಿಮೆ ಪ್ರಮಾಣವನ್ನು ಹೊಂದಿರುವ ಬಿಡದಿ ಟೊಯೊಟಾ ಘಟಕವನ್ನು ಸಮರ್ಥವಾಗಿ ಬಳಕೆ ಮಾಡಲಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಸದ್ಯ ಭಾರತದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳನ್ನ ಹೊಂದಿರುವ ಸುಜುಕಿ ಸಂಸ್ಥೆಯು ಹರಿಯಾಣದಲ್ಲಿ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಉತ್ಪಾದನಾ ಘಟಕವನ್ನ ಹೊಂದಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಯಾವುದೇ ಉತ್ಪಾದನಾ ಘಟಕ ಇಲ್ಲದಿರುವುದು ಸುಜುಕಿ ಸಂಸ್ಥೆಗೆ ಕಾರುಗಳ ಸರಬರಾಜು ಒಂದು ಸವಾಲಿನ ವಿಚಾರವೇ ಸರಿ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಹೀಗಿರುವಾಗ ಬೆಂಗಳೂರು ಬಳಿ ಇರುವ ಬಿಡದಿಯಲ್ಲಿ ನೆಲೆಗೊಂಡಿರುವ ಟೊಯೊಟಾ ಸಂಸ್ಥೆಯ ಕಾರು ಉತ್ಪಾದನಾ ಘಟಕದಿಂದ ಸುಜುಕಿ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳಾದ ವಿಟಾರಾ ಬ್ರೆಝಾ ಮತ್ತು ಬಲೆನೊ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿನ ಡೀಲರ್ಸ್‌ಗಳಿಗೆ ಸರಬರಾಜು ಮಾಡಲು ನಿರ್ಧರಿಸಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಇದಕ್ಕೆ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಪರಸ್ಪರ ಒಪ್ಪಿಗೆ ಸೂಚಿಸಿದ್ದು, ಕಳೆದ ನವೆಂಬರ್‌ನಲ್ಲಿ ಬಿಡದಿಗೆ ಭೇಟಿ ನೀಡಿದ್ದ ಸುಜುಕಿ ಸಂಸ್ಥೆಯ ಹಿರಿಯ ಅಧಿಕಾರಿಗಳ ತಂಡವು ಕಾರು ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸಲು ಅಗತ್ಯ ಸೌಲಭ್ಯಗಳನ್ನ ಪೂರೈಕೆ ಮಾಡುವುದಾಗಿ ಸಮ್ಮತಿ ಸೂಚಿಸಿದೆ.

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಅತಿಹೆಚ್ಚು ಮಾರಾಟವಾಗುತ್ತಿರುವ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಉತ್ಪಾದನೆ ಮಾಡಲು ಸಾಕಷ್ಟು ಸ್ಥಳಾವಕಾಶ ಬೇಕಿದ್ದು, ಇದಕ್ಕಾಗಿ ಟೊಯೊಟಾ ಘಟಕವನ್ನು ವಿಸ್ತರಣೆ ಮಾಡಲು ಮುಂದಾಗಿರುವ ಸುಜುಕಿ ಸಂಸ್ಥೆಯು 1 ಬಿಲಿಯನ್ ಯುಎಸ್‌ ಡಾಲರ್( ಸುಮಾರು 7 ಸಾವಿರ ಕೋಟಿ) ಹೂಡಿಕೆ ಮಾಡಿದೆ. ಜೊತೆಗೆ ಸುಜುಕಿ ಕಾರುಗಳನ್ನು ಉತ್ಪಾದನೆ ಮಾಡಲು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಲಿರುವ ಟೊಯೊಟಾ ಸಂಸ್ಥೆಯು ಸುಜುಕಿ ಸಂಸ್ಥೆಯ ಉದ್ಯೋಗಿಗಳ ಜೊತೆಗೂಡಿ ಕಾರ್ಯನಿರ್ವಹಣೆ ಮಾಡಲಿದೆ.

MOST READ: 78 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ ಟೊಯೊಟಾ ಕಾರು ಮಾಲೀಕನ ಕಥೆ ಹರೋಹರ

ಟೊಯೊಟಾ ಗ್ಲಾಂಝಾ ಕಾರಿನ ಫಸ್ಟ್ ಲುಕ್ ಟೀಸರ್ ಬಿಡುಗಡೆ

ಇದಕ್ಕೆ ಪ್ರತಿಯಾಗಿ ಸುಜುಕಿ ಸಂಸ್ಥೆಯು ತನ್ನ ಅಧಿಕೃತ ಡೀಲರ್ಸ್‌ಗಳಲ್ಲಿ ಟೊಯಾಟೊ ಕಾರುಗಳ ಮಾರಾಟಕ್ಕೆ ಅವಕಾಶ ನೀಡಲಿದೆ. ಹಾಗೆಯೇ ಹೈಬ್ರಿಡ್ ತಂತ್ರಜ್ಞಾನ ಅಭಿವೃದ್ಧಿಗೂ ಸಹಕಾರ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಭಾರತದಲ್ಲಿ ಆರಂಭವಾಗಿರುವ 'ಮೆಕ್ ಇನ್ ಇಂಡಿಯಾ' ಯೋಜನೆ ಅಡಿ ಹೊಸ ಕಾರುಗಳ ಉತ್ಪಾದನೆಯನ್ನು ಆರಂಭಿಸಲಿವೆ.

Article Published On: Friday, May 17, 2019, 18:33 [IST]
English summary
Toyota Drop Teaser Video Ahead Of Glanza Launch. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+