Just In
- 32 min ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 12 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 13 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 15 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Movies Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ ಬಿಡುಗಡೆಯಾಗಲಿರುವ ಟೊಯೊಟಾ ಗ್ಲಾಂಝಾ ಖರೀದಿಗೆ ಬುಕ್ಕಿಂಗ್ ಆರಂಭ
ಟೊಯೊಟಾ ಇಂಡಿಯಾ ಸಂಸ್ಥೆಯು ಇದೇ ತಿಂಗಳು 6ರಂದು ತನ್ನ ಬಹುನೀರಿಕ್ಷಿತ ಗ್ಲಾಂಝಾ ರೀಬ್ಯಾಡ್ಜ್ ಹ್ಯಾಚ್ಬ್ಯಾಕ್ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಖರೀದಿಗಾಗಿ ಇಂದಿನಿಂದಲೇ ರೂ.11 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಭಾರತದಲ್ಲಿ ಮೊದಲ ಬಾರಿಗೆ ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳನ್ನು ಉತ್ಪಾದನೆ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯ ಭಾಗವಾಗಿ ಮಾರುತಿ ಸುಜುಕಿ ಜನಪ್ರಿಯ ಕಾರು ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಟೊಯೊಟಾ ಸಂಸ್ಥೆಯು ರೀ ಬ್ಯಾಡ್ಜ್ನೊಂದಿಗೆ ಮರುಬಿಡುಗಡೆ ಮಾಡುತ್ತಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಬಲೆನೊ ಕಾರಿನ ಮೂಲ ಆವೃತ್ತಿಯಂತೆಯೇ ಇರುವ ಗ್ಲಾಂಝಾ ಕಾರು ಟೊಯೊಟಾ ಸಂಸ್ಥೆಯ ಲೊಗೊ ಮತ್ತು ಮುಂಭಾಗದಲ್ಲಿ ಗ್ರಿಲ್ ಹೊರತುಪಡಿಸಿ ಬಹುತೇಕ ತಾಂತ್ರಿಕ ಅಂಶಗಳನ್ನು ಪ್ರಸ್ತುತ ಬಲೆನೊ ಮಾದರಿಯಿಂದಲೇ ಎರವಲು ಪಡೆದುಕೊಂಡಿದ್ದು, ಹ್ಯಾಚ್ಬ್ಯಾಕ್ ಕಾರುಗಳಲ್ಲೇ ಉತ್ತಮ ಎನ್ನಿಸಿಲಿದೆ.
ಜೊತೆಗೆ ಹೊಸ ಗ್ಲಾಂಝಾ ಕಾರು ಪೆಟ್ರೋಲ್ ಆವೃತ್ತಿಯು ಸ್ಮಾರ್ಟ್ ಹೈಬ್ರಿಡ್ ಎಂಜಿನ್ನೊಂದಿಗೆ ಬಿಡುಗಡೆಯಾಗಲಿದ್ದು, 2020ರ ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್- 6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಮಾದರಿಯನ್ನು ಈಗಾಗಲೇ ಉನ್ನತಿಕರಿಸಲಾಗಿದೆ.
ಎಂಜಿನ್ ಸಾಮರ್ಥ್ಯ
ಸದ್ಯ ಮಾರುಕಟ್ಟೆಯಲ್ಲಿ ಬಲೆನೊ ಕಾರುಗಳು ಸ್ಮಾರ್ಟ್ ಹೈಬ್ರಿಡ್ 1.2-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, ಗ್ಲಾಂಝಾ ಕಾರು ಕೂಡಾ ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ನೊಂದಿಗೆ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಡೀಸೆಲ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿಲ್ಲ ಎನ್ನಲಾಗಿದೆ.
ಇನ್ನು ಗ್ಲಾಂಝಾ ಕಾರು ಜಿ ಮತ್ತು ವಿ ಎನ್ನುವ ಎರಡು ಆವೃತ್ತಿಯಲ್ಲಿ ಮಾರಾಟಕ್ಕೆ ಲಭ್ಯವಿರಲಿದ್ದು, ಗ್ಲಾಂಝಾ ಖರೀದಿಸುವ ಗ್ರಾಹಕರಿಗೆ ಟೊಯೊಟಾ ಸಂಸ್ಥೆಯು 3 ವರ್ಷ ಅಥವಾ 1 ಲಕ್ಷ ಕಿ.ಮಿ ಮೇಲೆ ಗರಿಷ್ಠ ವಾರಂಟಿ ನೀಡಲು ಮುಂದಾಗಿದೆ.
ಗ್ಲಾಂಝಾ ಜಿ ಆವೃತ್ತಿ
ಟೊಯೊಟಾ ಗ್ಲಾಂಝಾ ಆವೃತ್ತಿಯಲ್ಲೇ ಹೈ ಎಂಡ್ ಆವೃತ್ತಿಯಾಗಿ ಮಾರಾಟವಾಗಲಿರುವ ಜಿ ವೆರಿಯೆಂಟ್ ಮಾದರಿಯು ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ನೊಂದಿಗೆ 83-ಬಿಎಚ್ಪಿ ಉತ್ಪಾದಿಸಬಲ್ಲದು.
ಜಿ ವೆರಿಯೆಂಟ್ನಲ್ಲಿ ಪ್ರೀಮಿಯಂ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸ್ಟಾಂಡರ್ಡ್ ಆಗಿ ಆಟೋ ಆ್ಯಂಡ್ರಾಯಿಡ್, ಆ್ಯಪಲ್ ಕಾರ್ ಪ್ಲೇ ಹಾಗೂ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಬ್ರೇಕ್ ಅಸಿಸ್ಟ್, ಸೀಟ್ ರಿಮೆಂಡರ್, ಎಲ್ಇಡಿ ಪ್ರೋಜೆಕ್ಟರ್ ಹೆಡ್ಲ್ಯಾಂಪ್, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಮತ್ತು ಫ್ರಂಟ್ ಫಾಗ್ ಲೈಟ್ ಇದರಲ್ಲಿದೆ.
ಗ್ಲಾಂಝಾ ವಿ ಆವೃತ್ತಿ
ವಿ ಆವೃತ್ತಿಯು ಕೂಡಾ 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದರಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಮಾಡಿಲ್ಲ. ಆದರೆ ಜಿ ವೆರಿಯೆಂಟ್ನಲ್ಲಿರುವ ಬಹುತೇಕ ತಾಂತ್ರಿಕ ಅಂಶಗಳು ವಿ ವೆರಿಯೆಂಟ್ನಲ್ಲಿದ್ದು, ವಿ ವೆರಿಯೆಂಟ್ನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಜೊತೆಗೆ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಸೌಲಭ್ಯವಿದೆ.
MOST READ: ಟೊಯೊಟಾ ಕಾರಿಗೆ ಸೆಗಣಿಯಿಂದ ಕೊಟಿಂಗ್- ಅಸಲಿ ಕಾರಣ ಬಿಚ್ಚಿಟ್ಟ ಕರೊಲ್ಲಾ ಓನರ್..!
ಈ ಮೂಲಕ ಹ್ಯುಂಡೈ ಸಂಸ್ಥೆಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಹೊಸ ಯೋಜನೆಯ ಮೂಲಕ ಭಾರೀ ಪ್ರಮಾಣದ ಆದಾಯ ಗಳಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಯೋಜನೆಯು ಎರಡು ಸಂಸ್ಥೆಗಳಿಗೂ ಸಾಕಷ್ಟು ಸಹಕಾರಿಯಾಗಲಿದೆ.