Just In
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈನಲ್ಲಿ ಮಾರಾಟವಾದ ಟೊಯೊಟಾ ಗ್ಲಾಂಝಾ ಎಷ್ಟು ಗೊತ್ತಾ.?
ಟೊಯೊಟಾ ಮತ್ತು ಮಾರುತಿ ಸುಜುಕಿ ಸಂಸ್ಥೆಯು ಜೊತೆಗೂಡಿ ಇದೇ ಜೂನ್ 6ರಂದು ತಮ್ಮ ಹೊಸ ಪ್ರೀಮಿಯಂ ಹ್ಯಾಚ್ಬ್ಯಾಕ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು. ಟೊಯೊಟಾ ಗ್ಲಾಂಝಾ ಬಿಡುಗಡೆಗೂ ಮುನ್ನವೇ ಮಾರುಕಟ್ಟೆಯಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ ಸಂಗತಿ ನಮಗೆಲ್ಲರಿಗು ತಿಳಿದಿದ್ದೆ.
ಟೊಯೊಟಾ ಇಂಡಿಯಾ ಸಂಸ್ಥೆಯು ಜುಲೈ 2019ರಲ್ಲಿ 10,423 ಯೂನಿಟ್ ವಾಹನಗಳನ್ನು ಮಾರಾಟ ಮಾಡಲಾಗಿದ್ದು, 2018ರ ಜುಲೈನಲ್ಲಿ 13,677 ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಅಂದರೆ ಈ ವರ್ಷದ ಜುಲೈನಲ್ಲಿ ಸಂಸ್ಥೆಯು ಶೇಕಡ 14.7ರಷ್ಟು ಕಡಿಮೆ ಮಾರಾಟವಾಗಿದೆ. ಸಂಸ್ಥೆಯು ಈ ವರ್ಷದ ಜೂನ್ ತಿಂಗಳಿನಲ್ಲಿ ಮಾರುತಿ ಸುಜುಕಿ ಸಂಸ್ಥೆ ಜೊತೆಗೂಡಿ ಬಲೆನೊ ಕಾರಿಗೆ ರೀ ಬ್ಯಾಡ್ಜಿಂಗ್ ಮಾಡಿ ಗ್ಲಾಂಝಾ ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿತ್ತು.
ಆದರೆ ಜೂನ್ನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಕಾರಿನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳನ್ನು ಹೊಂದು, ರೀ ಬ್ಯಾಡ್ಜಿಂಗ್ನೊಂದಿಗೆ ದೊರೆಯುತ್ತಿದೆ. ಮಾರುತಿ ಸುಜುಕಿ ಬಲೆನೊ ಕಾರುಗಳು ಪ್ರೀಮಿಯಂ ಹ್ಯಾಚ್ಬ್ಯಾಕ್ಗಳ ಸರಣಿಯಲ್ಲಿ ಪ್ರತೀ ತಿಂಗಳು ಹೆಚ್ಚಿನ ಮಟ್ಟದಲ್ಲಿ ಮಾರಾಟವಾಗುತ್ತಿದ್ದೆ, ಗ್ಲಾಂಝಾ ಕಾರಿಗೆ ಅಷ್ಟು ಬೇಡಿಕೆ ಇಲ್ಲವೆಂದು ವರದಿಗಳು ಹೇಳುತ್ತಿದೆ.
ಮಾರುತಿ ಸುಜುಕಿ ಸಂಸ್ಥೆಯೊಂದಿಗೆ ಜೊತೆಗೂಡಿ ಟೊಯೊಟಾ ಬಿಡುಗಡೆ ಮಾಡಲಾದ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ ಕಾರು ಬಿಡುಗಡೆಗೊಂಡಾಗ ಹೆಚ್ಚಾಗಿ ಸದ್ದು ಮಾಡಿತ್ತು. ಆದರೆ ಬರು ಬರುತ್ತಾ ಈ ಕಾರಿನ ಮಾರಾಟ ಕುಸಿಯುತ್ತಿದ್ದು, ಮೇ 2019ರಲ್ಲಿ 2142 ಯೂನಿಟ್ ಮಾರಾಟವಾದರೆ, ಜೂನ್ನಲ್ಲಿ 1919 ಯೂನಿಟ್ ಮಾರಾಟವಾಗಿದೆ. ಇವಿಗಳಿಗಿಂತಾ ಕಡಿಮೆ ಎನ್ನುವ ಹಾಗೆ ಜುಲಯ್ 2019ರಲ್ಲಿ 1796 ಯೂನಿಟ್ ಮಾರಾಟವಾಗಿದೆ.
ಮಾರುತಿ ಸುಜುಕಿ ಸಂಸ್ಥೆಯ ಬಲೆನೊ ಆವೃತ್ತಿಯನ್ನೇ ಕೆಲವು ತಾಂತ್ರಿಕ ಸೌಲಭ್ಯಗಳ ಬದಲಾವಣೆಗಳೊಂದಿಗೆ ಮರುನಾಮಕರಣಗೊಳಿಸಿ ಬಿಡುಗಡೆ ಮಾಡಲಾಗಿರುವ ಟೊಯೊಟಾ ಗ್ಲಾಂಝಾ ಕಾರು ಸಾಕಷ್ಟು ಆಕರ್ಷಣೆಯಾಗಿದ್ದು, ಹೊಸ ಕಾರಿನ ಬೆಲೆಯನ್ನು ಆರಂಭಿಕವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 7,21,900ಕ್ಕೆ ನಿಗದಿಪಡಿಸಲಾಗಿದೆ.
ಗ್ಲಾಂಝಾ ಖರೀದಿ ಮೇಲೆ ಭರ್ಜರಿ
ವಾರಂಟಿ ಟೊಯೊಟಾ ಸಂಸ್ಥೆಯು ರೀ ಬ್ಯಾಡ್ಜ್ ಗ್ಲಾಂಝಾ ಖರೀದಿ ಮೇಲೆ ಅತ್ಯುತ್ತಮ ವಾರಂಟಿ ಸೌಲಭ್ಯವನ್ನು ಘೋಷಣೆ ಮಾಡಿದ್ದು, 3 ವರ್ಷದ ಅವಧಿಗೆ ಇಲ್ಲವೇ 1 ಲಕ್ಷ ಕಿ.ಮಿ ರನ್ನಿಂಗ್ ಮೇಲೆ ವಾರಂಟಿಯನ್ನು ಆಯ್ಕೆಮಾಡಬಹುದಾಗಿದೆ.
ಎಂಜಿನ್ ಸಾಮಾರ್ಥ್ಯ
ಗ್ಲಾಂಝಾ ಕಾರು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆ 1.2-ಲೀಟರ್ ಕೆ ಸೀರಿಸ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಮೂಲಕ ಮ್ಯಾನುವಲ್ ಆವೃತ್ತಿಯು 89.7 ಬಿಎಚ್ಪಿ ಉತ್ಪಾದನೆ ಮಾಡಿದ್ದಲ್ಲಿ ಎಎಂಟಿ ಮಾದರಿಯು 82-ಬಿಎಚ್ಪಿ ಉತ್ಪಾದನೆ ಮಾಡಲಿದೆ.
ಎರಡು ಆವೃತ್ತಿಗಳಲ್ಲೂ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್ಮಿಷನ್ ನೀಡಲಾಗಿದ್ದು, ಇದರಲ್ಲಿ ಆರಂಭಿಕ ಆವೃತ್ತಿಯಾದ ಜಿ ಮ್ಯಾನುವಲ್ನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಲೀ-ಅಯಾನ್ (66 ಕಿಲೋ ವ್ಯಾಟ್) ಬ್ಯಾಟರಿ ಅಳವಡಿಸುವ ಮೂಲಕ ಹೆಚ್ಚಿನ ಮಟ್ಟದ ಮೈಲೇಜ್ ನೀರಿಕ್ಷಿಸುವ ಗ್ರಾಹಕರಿಗಾಗಿಯೇ ವಿಶೇಷವಾಗಿ ಅಭಿವೃದ್ಧಿಪಡಿಸಿದೆ.
ಟೊಯೊಟಾ ಸಂಸ್ಥೆಯು ಹಂಚಿಕೊಂಡಿರುವ ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಜಿ ಆವೃತ್ತಿಯು ಪ್ರತಿ ಲೀಟರ್ ಪೆಟ್ರೋಲ್ಗೆ 23.87 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ವಿ ಆವೃತ್ತಿಯ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ಗೆ 19.59 ಮತ್ತು ಸಿವಿಟಿ ಮಾದರಿಯು 21.01 ಮೈಲೇಜ್ ನೀಡುತ್ತದೆ.
ಹೊಸ ಕಾರಿನ ವೈಶಿಷ್ಟ್ಯತೆಗಳು
ಗ್ಲಾಂಝಾ ಕಾರು ಎಲ್ಇಡಿ ಪ್ರೋಜೆಕ್ಟರ್ ಜೊತೆ ಡಿಎಲ್ಆರ್, ಆಟೋ ಹೆಡ್ಲ್ಯಾಂಪ್, ಫಾಲೋ ಮೀ ಕಾರ್ ಫಂಕ್ಷನ್, 3ಡಿ ಮಾದರಿಯಲ್ಲಿ ಮುಂಭಾಗದ ಕ್ರೋಮ್ ಗ್ರೀಲ್, ಸ್ಟೈಲಿಷ್ ಬಂಪರ್, ಡೈಮೆಂಡ್ ಕಟ್ ಅಲಾಯ್ ವೀಲ್ಗಳು ಮತ್ತು ಎಲ್ಇಡಿ ರಿಯರ್ ಕಾಂಬಿನೇಷನ್ ಟೈಲ್ಗೇಟ್ ಲ್ಯಾಂಪ್ಗಳನ್ನು ಪಡೆದುಕೊಂಡಿದೆ.
ಕಾರಿನ ಒಳಾಂಗಣ ವಿನ್ಯಾಸ
ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಹೊತ್ತುಬಂದಿರುವ ಗ್ಲಾಂಝಾ ಕಾರಿನಲ್ಲಿ ಸ್ಮಾರ್ಟ್ ಪ್ಲೇ ಕಾಸ್ಟ್, ಟಚ್ ಸ್ಕ್ರೀನ್ ಆಡಿಯೋ, 4-ಸ್ಪೀಕರ್ಸ್ಗಳು, ಸ್ಮಾರ್ಟ್ ಫೋನ್ ಕನೆಕ್ಟ್(ಆ್ಯಪಲ್ ಕಾರ್ ಪ್ಲೇ/ಅಂಡ್ರಾಯಿಡ್ ಆಟೋ), ನ್ಯಾವಿಗೇಷನ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಮತ್ತು ಕಾಲಿಂಗ್ ಕಂಟ್ರೋಲರ್, ವೈಸ್ ಕಮಾಂಡ್, ಮುಂಭಾಗದ ಸೀಟುಗಳಲ್ಲಿ ಆರ್ಮ್ ರೆಸ್ಟ್ ಮತ್ತು ಲಗೇಜ್ ರೂಂ ಬಳಿ ಲೈಟಿಂಗ್ ಸೌಲಭ್ಯ ಹೊಂದಿದೆ.
ಹಾಗೆಯೇ ಹೊಸ ಕಾರಿನಲ್ಲಿ ಚಾಲಕ ಸೇರಿ ಐದು ಜನ ಅರಾಮಾದಾಯಕವಾಗಿ ಪ್ರಯಾಣಿಸುವ ಹಾಗೆ ಆಸನ ಸೌಲಭ್ಯವಿದ್ದು, ಪುಶ್ ಸ್ಟಾರ್ಟ್/ಸ್ಟಾಪ್ ಬಟನ್ನೊಂದಿಗೆ ಸ್ಮಾರ್ಟ್ ಎಂಟ್ರಿ, 60:40 ಅನುಪಾತದಲ್ಲಿ ವಿಭಜಿಸಬಹುದಾದ ಹಿಂಬದಿ ಆಸನಗಳು, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಫೋಲ್ಡಿಂಗ್ ORVM, ಟೆಲಿಸ್ಕೋಪಿಕ್ ಸ್ಟೀರಿಂಗ್ ಮತ್ತು ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಜೋಡಿಸಲಾಗಿದೆ.
ಸುರಕ್ಷಾ ವೈಶಿಷ್ಟ್ಯತೆಗಳು
ಗ್ಲಾಂಝಾ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷಾ ವಿಚಾರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್, ಇಬಿಡಿ, ಬಿಎ, ಟೆಕ್ ಬಾಡಿ, ISOFIX ಚೈಲ್ಡ್ ಸೀಟ್ ಮೌಂಟ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ನಾಲ್ಕು ಬದಿಯಲ್ಲೂ ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್ ಮತ್ತು ಹೈ ಸ್ಪೀಡ್ ವಾರ್ನಿಂಗ್ ಅಲರ್ಟ್ ಸಿಸ್ಟಂ ನೀಡಲಾಗಿದೆ.