ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಭಾರತದಲ್ಲಿ ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳನ್ನು ಉತ್ಪಾದನೆ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆಯ ಭಾಗವಾಗಿ ಮಾರುತಿ ಸುಜುಕಿ ಜನಪ್ರಿಯ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಟೊಯೊಟಾ ಸಂಸ್ಥೆಯು ರೀ ಬ್ಯಾಡ್ಜ್‌ನೊಂದಿಗೆ ಮರುಬಿಡುಗಡೆಗಾಗಿ ಸಜ್ಜುಗೊಳಿಸಲಾಗುತ್ತಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಇದೀಗ ಆಟೋಕಾರ್ ಇಂಡಿಯಾರವರು ಸೋರಿಕೆ ಮಾಡಲಾಗಿರುವ ಟೊಯೊಟಾ ಗ್ಲ್ಯಾಂಝ, ವಿನ್ಯಾಸದಲ್ಲಿ ಕೊಂಚ ಗುರುತರ ಬದಲಾವಣೆಗಳನ್ನು ಪಡೆದುಕೊಂಡಿರಲಿದ್ದು, ಮಾರುತಿ ಸುಜುಕಿ ಬ್ಯಾಡ್ಜಿಂಗ್ ಮೊದಲು ಟೊಯೊಟಾ ಬ್ಯಾಡ್ಜಿಂಗ್ ಅನ್ನು ನೀಡಿದ್ದಾರೆ ಅಂತಲೇ ಹೇಳಬಹುದು. ಈ ಕಾರು ಟೊಯೊಟಾ ಮತ್ತು ಮಾರುತಿ ಸುಜುಕಿ ಸಾಂಸ್ಥೆಗಳು ಜಂಟಿಯಾಗಿ ನಿರ್ಮಾಣವಗುತ್ತಿರುವ ಮೊದಲನೆಯೆ ಕಾರಾಗಿದ್ದು, ಭವಿಷ್ಯದಲ್ಲಿ ಇನ್ನು ಹಲವಾರು ಕಾರುಗಳನ್ನು ಬಿಡುಗಡೆ ಮಾಡಲಿವೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಇದಕ್ಕೆ ಪೂರಕ ಎಂಬಂತೆ ಗ್ಲ್ಯಾಂಜ್ ಹೆಸರಿನಲ್ಲಿ ಬಲೆನೊ ಕಾರನ್ನು ಮರು ಅಭಿವೃದ್ಧಿಪಡಿಸಿ ಟೀಸರ್ ಬಿಡುಗಡೆ ಮಾಡಿರುವುದಲ್ಲದೇ ಪ್ರಮುಖ ಡೀಲರ್ಸ್‌ಗಳಿಗೆ ರವಾನೆ ಮಾಡುತ್ತಿದ್ದು, ಹೊಸ ಗ್ಲ್ಯಾಂಜ್ ಕಾರು ಪ್ರಸ್ತುತ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿರುವುದು ಸ್ಪಷ್ಟವಾಗಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಹೊಸ ಕಾರು ಜೂನ್ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಕುರಿತಾಗಿ ಹ್ಯಾಚ್‌ಬ್ಯಾಕ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದೆ. ಮಾಹಿತಿ ಪ್ರಕಾರ, ಹೊಸ ಗ್ಲ್ಯಾಂಜ್ ಕಾರು ಸ್ಮಾರ್ಟ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, 2020ರ ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್- 6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರುಗಳನ್ನು ಉನ್ನತಿಕರಿಸಲಾಗಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಈ ಮೂಲಕ ಹ್ಯುಂಡೈ ಸಂಸ್ಥೆಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಹೊಸ ಯೋಜನೆಯ ಮೂಲಕ ಭಾರೀ ಪ್ರಮಾಣದ ಆದಾಯ ಗಳಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಯೋಜನೆಯು ಎರಡು ಸಂಸ್ಥೆಗಳಿಗೂ ಸಾಕಷ್ಟು ಸಹಕಾರಿಯಾಗಲಿದೆ. ಯಾಕೆಂದ್ರೆ ಹೊಸ ಕಾರುಗಳ ಉತ್ಪಾದನೆಗಾಗಿ ಸಾವಿರಾರು ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದ ಮಾರುತಿ ಸುಜುಕಿ ಸಂಸ್ಥೆಯು ಉತ್ಪಾದನಾ ಸಾಮರ್ಥ್ಯಕ್ಕಿಂತ ಕಡಿಮೆ ಪ್ರಮಾಣವನ್ನು ಹೊಂದಿರುವ ಬಿಡದಿ ಟೊಯೊಟಾ ಘಟಕವನ್ನು ಸಮರ್ಥವಾಗಿ ಬಳಕೆ ಮಾಡಲಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಸದ್ಯ ಭಾರತದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳನ್ನ ಹೊಂದಿರುವ ಸುಜುಕಿ ಸಂಸ್ಥೆಯು ಹರಿಯಾಣದಲ್ಲಿ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಉತ್ಪಾದನಾ ಘಟಕವನ್ನ ಹೊಂದಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಯಾವುದೇ ಉತ್ಪಾದನಾ ಘಟಕ ಇಲ್ಲದಿರುವುದು ಸುಜುಕಿ ಸಂಸ್ಥೆಗೆ ಕಾರುಗಳ ಸರಬರಾಜು ಒಂದು ಸವಾಲಿನ ವಿಚಾರವೇ ಸರಿ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಹೀಗಿರುವಾಗ ಬೆಂಗಳೂರು ಬಳಿ ಇರುವ ಬಿಡದಿಯಲ್ಲಿ ನೆಲೆಗೊಂಡಿರುವ ಟೊಯೊಟಾ ಸಂಸ್ಥೆಯ ಕಾರು ಉತ್ಪಾದನಾ ಘಟಕದಿಂದ ಸುಜುಕಿ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳಾದ ವಿಟಾರಾ ಬ್ರೆಝಾ ಮತ್ತು ಬಲೆನೊ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿನ ಡೀಲರ್ಸ್‌ಗಳಿಗೆ ಸರಬರಾಜು ಮಾಡಲು ನಿರ್ಧರಿಸಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಇದಕ್ಕೆ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಪರಸ್ಪರ ಒಪ್ಪಿಗೆ ಸೂಚಿಸಿದ್ದು, ಕಳೆದ ನವೆಂಬರ್‌ನಲ್ಲಿ ಬಿಡದಿಗೆ ಭೇಟಿ ನೀಡಿದ್ದ ಸುಜುಕಿ ಸಂಸ್ಥೆಯ ಹಿರಿಯ ಅಧಿಕಾರಿಗಳ ತಂಡವು ಕಾರು ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸಲು ಅಗತ್ಯ ಸೌಲಭ್ಯಗಳನ್ನ ಪೂರೈಕೆ ಮಾಡುವುದಾಗಿ ಸಮ್ಮತಿ ಸೂಚಿಸಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಸದ್ಯ ಮಾರುಕಟ್ಟೆಯಲ್ಲಿ ಅತಿಹೆಚ್ಚು ಮಾರಾಟವಾಗುತ್ತಿರುವ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಉತ್ಪಾದನೆ ಮಾಡಲು ಸಾಕಷ್ಟು ಸ್ಥಳಾವಕಾಶ ಬೇಕಿದ್ದು, ಇದಕ್ಕಾಗಿ ಟೊಯೊಟಾ ಘಟಕವನ್ನು ವಿಸ್ತರಣೆ ಮಾಡಲು ಮುಂದಾಗಿರುವ ಸುಜುಕಿ ಸಂಸ್ಥೆಯು 1 ಬಿಲಿಯನ್ ಯುಎಸ್‌ ಡಾಲರ್( ಸುಮಾರು 7 ಸಾವಿರ ಕೋಟಿ) ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿದೆ. ಜೊತೆಗೆ ಸುಜುಕಿ ಕಾರುಗಳನ್ನು ಉತ್ಪಾದನೆ ಮಾಡಲು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಲಿರುವ ಟೊಯೊಟಾ ಸಂಸ್ಥೆಯು ಸುಜುಕಿ ಸಂಸ್ಥೆಯ ಉದ್ಯೋಗಿಗಳ ಜೊತೆಗೂಡಿ ಕಾರ್ಯನಿರ್ವಹಣೆ ಮಾಡಲಿದೆ.

ಜೂನ್ ಪ್ರಾರಂಭದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ಗ್ಲ್ಯಾಂಝ ಇದೇನೆ...

ಇದಕ್ಕೆ ಪ್ರತಿಯಾಗಿ ಸುಜುಕಿ ಸಂಸ್ಥೆಯು ತನ್ನ ಅಧಿಕೃತ ಡೀಲರ್ಸ್‌ಗಳಲ್ಲಿ ಟೊಯಾಟೊ ಕಾರುಗಳ ಮಾರಾಟಕ್ಕೆ ಅವಕಾಶ ನೀಡಲಿದೆ. ಹಾಗೆಯೇ ಹೈಬ್ರಿಡ್ ತಂತ್ರಜ್ಞಾನ ಅಭಿವೃದ್ಧಿಗೂ ಸಹಕಾರ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಭಾರತದಲ್ಲಿ ಆರಂಭವಾಗಿರುವ 'ಮೆಕ್ ಇನ್ ಇಂಡಿಯಾ' ಯೋಜನೆ ಅಡಿ ಹೊಸ ಕಾರುಗಳ ಉತ್ಪಾದನೆಯನ್ನು ಆರಂಭಿಸಲಿವೆ.

Most Read Articles

Kannada
English summary
Toyota Glanza Spied For The First Time — Launch Expected In First Week Of June. Read In Kannada
Story first published: Tuesday, April 30, 2019, 11:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X