ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೋವಾದ್ದೆ ಹವಾ..!

ಟೊಯೊಟಾ ಸಂಸ್ಥೆಯ ಜನಪ್ರಿಯ ಇನೋವಾ ಕ್ರಿಸ್ಟಾ ಎಂಪಿವಿ ಕಾರು 2018ರ ಡಿಸೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಬುಕ್ಕಿಂಗ್ ಅನ್ನು ಪಡೆದುಕೊಂಡಿದ್ದು, ಮಾರಾಟದಲ್ಲಿ ಲಭ್ಯವಿರುವ ಬೇರೆಲ್ಲಾ ಎಂಪಿವಿ ಕಾರುಗಳನ್ನು ಹಿಂದಿಕ್ಕಿದೆ. ಈ ಲೇಖನದಲ್ಲಿ ಈ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿಯಿರಿ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಟೊಯೊಟಾ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಇನೋವಾ ಕಾರನ್ನು ಬಿಡುಗಡೆಗೊಳಿಸಿದ್ದು, ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಯಾಗಿ ಮರುಬಿಡುಗಡೆಯಾಗಿತ್ತು. ಆದ್ರೆ ಇದೀಗ ಈ ಕಾರು ಮಾರುಕಟ್ಟೆಯಲ್ಲಿ ತಮ್ಮ ಎದುರಾಳಿಗಳನ್ನು ಹಿಂದಿಕ್ಕಿ ಮತ್ತಷ್ಟು ಬೇಡಿಕೆಯನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಿದೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಕಳೆದ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಸಂಸ್ಥೆಯ ಮರಾಜೊ ಕಾರು ಮತ್ತು ಮಾರುತಿ ಸುಜುಕಿ ಸಂಸ್ಥೆಯ ಹೊಸ ತಲೆಮಾರಿನ ಎರ್ಟಿಗಾ ಎಂಪಿವಿ ಕಾರುಗಳು ಬಿಡುಗಡೆಗೊಂಡರೂ ಸಹ ಗ್ರಾಹಕರು ಇನ್ನು ಇನೋವಾ ಕ್ರಿಸ್ಟಾ ಕಾರುಗಳಿಗೆ ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ ಎಂದರೆ ತಪ್ಪಾಗಲಾರದು.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

2018ರ ಡಿಸೆಂಬರ್ ತಿಂಗಳಿನಲ್ಲಿ ಮಹೀಂದ್ರಾ ಮರಾಜೊ ಮತ್ತು ಎರ್ಟಿಗಾ ಕಾರುಗಳನ್ನು ಹಿಂದಿಕ್ಕಿ ಒಂದೇ ತಿಂಗಳಿನಲ್ಲಿ ಬರೊಬ್ಬರಿ 11,200 ಯೂನಿಟ್ ಕಾರುಗಳ ಬುಕ್ಕಿಂಗ್ ಪಡೆದುಕೊಂಡಿದ್ದು, ಟೊಯೊಟಾ ಸಂಸ್ಥೆಗೆ ಈ ಮೂಲಕವಾಗಿ ಬರೊಬ್ಬರಿ ರೂ. 2,200 ಕೋಟಿಯ ಆದಾಯವನ್ನು ತಂದುಕೊಟ್ಟಿದೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

2016ರಲ್ಲಿ ಬಿಡುಗಡೆಗೊಂಡ ಟೊಯೊಟಾ ಇನೋವಾ ಕ್ರಿಸ್ಟಾ ಎಮ್‍ಪಿವಿ ಕಾರುಗಳು ದೇಶದಲ್ಲಿನ ಅತಿ ಹೆಚ್ಚು ಮಾರಾಟಗೊಳ್ಳುತ್ತಿರುವ ಎಂಪಿವಿ ಕಾರು ಮಾದರಿಯಾಗಿ ಹೊರಹೊಮ್ಮಿದೆ. ಯಾಕೆಂದ್ರೆ ಬೆಲೆಯಲ್ಲಿ ಅಧಿಕವಾದರೂ ಗ್ರಾಹಕರು ಕಡಿಮೆ ಬೆಲೆಯ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ಲೆಕ್ಕಿಸದೇ ಐಷಾರಾಮಿ ಸೌವಲತ್ತುಗಳನ್ನು ಒದಗಿಸುತ್ತಿರುವ ಇನೋವಾ ಕ್ರಿಸ್ಟಾ ಕಾರುಗಳನ್ನು ಖರೀದಿಸುತ್ತಿದ್ದಾರೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರುಗಳು ಕ್ಯಾಬ್ ಆಪರೇಟರ್‍‍ಗಳಿಗೆ ಮತ್ತು ಸ್ವಂತ ಬಳಕೆಗೆ ತಯಾರಿಸ್ಪಟ್ಟ ಕಾರಾಗಿದ್ದು, ದೆಹಲಿಯ ಎಕ್ಸ್ ಶೋರಂ ಪ್ರಕಾರ ಈ ಕಾರು ರೂ.13.84 ಲಕ್ಷದಿಂದ ರೂ.20.72 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಹಳೆಯ ಇನೋವಾಗಿಂತಲೂ 150 ಎಂಎಂ ಉದ್ದ, 70 ಎಂಎಂ ಅಗಲ ಮತ್ತು 35 ಎಂಎಂ ಹೆಚ್ಚು ಎತ್ತರವನ್ನು ಎರಡನೇ ತಲೆಮಾರಿನ ಇನೋವಾ ಪಡೆದಿದೆ. ಇದು ಒಟ್ಟಾರೆ 4735 ಎಂಎಂ ಉದ್ದ, 1830 ಎಂಎಂ ಅಗಲ, 1795 ಎಂಎಂ ಎತ್ತರ ಮತ್ತು 2750 ಎಂಎಂ ವೀಲ್ ಬೇಸ್ ಪಡೆದಿದೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಟಾಪ್ ಎಂಡ್ ಇನೋವಾ ಕಾರಿನಲ್ಲಿ ಸ್ಟ್ಯಾರ್ಟ್ ಸ್ಟಾಪ್ ಬಟನ್, ಸ್ಮಾರ್ಟ್ ಎಂಟ್ರಿ ಸಿಸ್ಟಂ, ಏಳು ಏರ್ ಬ್ಯಾಗ್, ಎಬಿಎಸ್, ಇಬಿಡಿ, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಏಳು ಇಂಚುಗಳ ಆಡಿಯೋ ಸಿಸ್ಟಂ ಜೊತೆ ನೇವಿಗೇಷನ್, ಎಲ್ ಇಡಿ ಹೆಡ್ ಲ್ಯಾಂಪ್ ಮತ್ತು 17 ಇಂಚುಗಳ ಅಲಾಯ್ ವೀಲ್ ಗಳಿರಲಿದೆ.

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಪ್ರಸ್ತುತ ಟೊಯೊಟಾ ಇನೊವಾ ಕ್ರಿಸ್ಟಾ ಕಾರುಗಳು 2.4 ಲೀಟರ್ ಮತ್ತು 2.8 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅಯ್ಕೆಯಲ್ಲಿ ಹಾಗು 2.7 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಅಥವಾ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

MOST READ: ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಎಂಪಿವಿ ಕಾರುಗಳ ಮಾರಾಟದಲ್ಲಿ ಟೊಯೊಟಾ ಇನೊವಾನದ್ದೆ ಹವಾ...

ಇನ್ನು 2.4 ಲೀಟರ್ ಡೀಸೆಲ್ ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಿದಲ್ಲಿ 2.7 ಲೀಟರ್ ಡೀಸೆಲ್ ಎಂಜಿನ್ ಅನ್ನು ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಟೊಯೊಟಾ ಇನೋವಾ ಎಲ್ಲಾ ವೇರಿಯಂಟ್ ಕಾರುಗಳಲ್ಲಿ ರಿಯರ್ ವ್ಹೀಲ್ ಡ್ರೈವ್ ಮೋಡ್ ಅನ್ನು ಅಳವಡಿಸಲಾಗಿದೆ.

More from DriveSpark

Article Published On: Saturday, January 12, 2019, 14:43 [IST]
English summary
Toyota Innova Crysta Still Remains The Best MPV In India. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+