ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಇಂಡಿಯಾ, ತನ್ನ ಸರಣಿಯಲ್ಲಿರುವ ವಾಹನಗಳನ್ನು ಬಿ‍ಎಸ್ 6 ಮಾಲಿನ್ಯ ನಿಯಮಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸುತ್ತಿದೆ. ಕಂಪನಿಯು ಮೊದಲಿಗೆ ತನ್ನ ಜನಪ್ರಿಯ ವಾಹನಗಳಾದ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಕಾರುಗಳನ್ನು ಅಭಿವೃದ್ದಿ ಪಡಿಸಿ, ಬೆಲೆ ಏರಿಕೆ ಮಾಡಲಿದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಬಿ‍ಎಸ್ 6 ನಿಯಮಗಳಿಗೆ ತಕ್ಕಂತೆ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಕಂಪನಿಯು ಬೆಲೆಗಳನ್ನು ಸಹ ಏರಿಕೆ ಮಾಡಲಿದೆ. ವರದಿಗಳ ಪ್ರಕಾರ, ಇನೋವಾ ಹಾಗೂ ಫಾರ್ಚೂನರ್ ಕಾರುಗಳ ಬೆಲೆಯು ರೂ.5 ಲಕ್ಷಗಳವರೆಗೆ ಹೆಚ್ಚಾಗಲಿದೆ. ಟೊಯೊಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿರುವ ತನ್ನ ಪೆಟ್ರೋಲ್ ಮಾದರಿಯ ಕಾರುಗಳನ್ನು ಅಪ್‍‍ಡೇಟ್ ಮಾಡಲು ಬಯಸಿದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಕಂಪನಿಯು ತನ್ನ ಡೀಸೆಲ್ ಮಾದರಿಯ ಕಾರುಗಳನ್ನು ಬಿ‍ಎಸ್ 6 ನಿಯಮಗಳಿಗೆ ತಕ್ಕಂತೆ ಅಪ್‍‍ಡೇಟ್ ಮಾಡಲು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಟೊಯೊಟಾ ತನ್ನ ಜನಪ್ರಿಯ ಎಂಪಿವಿ ವಾಹನವಾದ ಇನ್ನೋವಾ ಕ್ರಿಸ್ಟಾವನ್ನು ಶೀಘ್ರದಲ್ಲೇ, ಡೀಸೆಲ್ ಎಂಜಿನ್ ಬದಲಿಗೆ ಪೆಟ್ರೋಲ್ ಹೈಬ್ರಿಡ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವುದಾಗಿ ತಿಳಿಸಿದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಕಂಪನಿಯು, ಬಿ‍ಎಸ್6 ಮಾಲಿನ್ಯ ನಿಯಮಗಳು ಜಾರಿಗೆ ಬಂದ ನಂತರ, ಬೆಲೆಯೆರಿಕೆಯ ಕಾರಣದಿಂದಾಗಿ ತನ್ನ ಸರಣಿಯಲ್ಲಿರುವ ಬಹುತೇಕ ಪೆಟ್ರೋಲ್ ಆವೃತ್ತಿಯ ವಾಹನಗಳನ್ನು ಸ್ಥಗಿತಗೊಳಿಸಲಿದೆ ಎಂದು ಹೇಳಲಾಗುತ್ತಿದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಸ್‍‍ಯು‍‍ವಿಯನ್ನು ಸದ್ಯಕ್ಕೆ ಎರಡು ಡೀಸೆಲ್ ಹಾಗೂ ಒಂದು ಪೆಟ್ರೋಲ್ ಸೇರಿದಂತೆ ಒಟ್ಟು ಮೂರು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪೆಟ್ರೋಲ್ ಎಂಜಿನ್ ಮಾದರಿಯು 2.7 ಲೀಟರಿನ ನಾಲ್ಕು ಸಿಲಿಂಡರ್ ಎಂಜಿನ್ ಹೊಂದಿದ್ದು, ಈ ಎಂಜಿನ್ 160 ಬಿಹೆಚ್‌ಪಿ ಪವರ್ ಹಾಗೂ 245 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಈ ಎಂಜಿನ್‍‍ನೊಂದಿಗೆ ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್ಮಿಷನ್ ಆಯ್ಕೆಗಳನ್ನು ನೀಡಲಾಗುವುದು. ಟೊಯೊಟಾ ಇನ್ನೋವಾ ಕ್ರಿಸ್ಟಾದಲ್ಲಿನ ಡೀಸೆಲ್ ಎಂಜಿನ್‍‍ನಲ್ಲಿ 2.4 ಲೀಟರ್ ಹಾಗೂ 2.75 ಲೀಟರಿನ ಎಂಜಿನ್‍‍ಗಳು ಸೇರಿವೆ. ಸಣ್ಣ ಸಾಮರ್ಥ್ಯದ ಎಂಜಿನ್ 150 ಬಿ‍‍ಹೆಚ್‍‍ಪಿ ಹಾಗೂ 343 ಎನ್‍‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಈ ಎಂಜಿನ್‍‍ನೊಂದಿಗೆ ಐದು ಸ್ಪೀಡಿನ ಮ್ಯಾನುವಲ್ ಟ್ರಾನ್ಸ್ ಮಿಷನ್ ಅನ್ನು ಸ್ಟಾಂಡರ್ಡ್ ಆಗಿ ಅಳವಡಿಸಲಾಗಿದೆ. 2.75 ಲೀಟರಿನ ಎಂಜಿನ್, 173 ಬಿ‍ಹೆಚ್‍‍ಪಿ ಪವರ್ ಹಾಗೂ 360 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 6 ಸ್ಪೀಡಿನ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ವಿಶ್ವದ ಬಲಶಾಲಿ ಎಸ್‍‍ಯು‍‍ವಿ ರೆಜ್ವಾನಿ ಟ್ಯಾಂಕ್

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಫಾರ್ಚೂನರ್ ಎಸ್‍‍ಯು‍‍ವಿಯನ್ನು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‍‍ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪೆಟ್ರೋಲ್ ಎಂಜಿನ್ 2.7 ಲೀಟರ್ ಆಗಿದ್ದರೆ, ಡೀಸೆಲ್ ಎಂಜಿನ್ 2.75 ಲೀಟರ್ ಆಗಿದೆ. ಪೆಟ್ರೋಲ್ ಎಂಜಿನ್ 160 ಬಿಹೆಚ್‌ಪಿ ಪವರ್ ಹಾಗೂ 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಈ ಎಂಜಿನ್‍ 5 ಸ್ಪೀಡಿನ ಮ್ಯಾನುವಲ್ ಅಥವಾ 6 ಸ್ಪೀಡಿನ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಹೊಂದಿರಲಿದೆ. ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಪವರ್ ಹಾಗೂ 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಸಹ 5 ಸ್ಪೀಡಿನ ಮ್ಯಾನುವಲ್ ಅಥವಾ 6 ಸ್ಪೀಡಿನ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಹೊಂದಿದೆ.

MOST READ: ಕೇವಲ ಐದು ನಿಮಿಷದಲ್ಲಿ ಚಾರ್ಜ್ ಆಗಲಿದೆ ಈ ಎಲೆಕ್ಟ್ರಿಕ್ ಆಟೋ

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಇನ್ನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಬೆಲೆಗಳು ದೆಹಲಿಯ ಎಕ್ಸ್ ಶೋರೂಂ ದರದಂತೆ ಕ್ರಮವಾಗಿ ರೂ.14.93 ಲಕ್ಷ ಹಾಗೂ ರೂ.27.83 ಲಕ್ಷಗಳಾಗಿವೆ. ಬಿಎಸ್ 6 ಮಾಲಿನ್ಯ ನಿಯಮಗಳಿಗೆ ತಕ್ಕಂತೆ ಈ ವಾಹನಗಳನ್ನು ಅಪ್‍‍ಡೇಟ್‍‍ಗೊಳಿಸಿದ ನಂತರ ಈ ಎರಡೂ ಮಾದರಿಗಳ ಬೆಲೆಗಳು ರೂ.5 ಲಕ್ಷಗಳವರೆಗೆ ಹೆಚ್ಚಾಗಲಿವೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಡ್ರೈವ್‍‍ಸ್ಪಾರ್ಕ್ ಅಭಿಪ್ರಾಯ

ಟೊಯೊಟಾ ಫಾರ್ಚೂನರ್ ಹಾಗೂ ಇನೋವಾ ಕ್ರಿಸ್ಟಾ ಜಪಾನ್ ಮೂಲದ ಟೊಯೊಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಎರಡು ಜನಪ್ರಿಯ ವಾಹನಗಳಾಗಿವೆ. ಟೊಯೊಟಾ ಇನ್ನೋವಾ ಕ್ರಿಸ್ಟಾ ದೇಶದಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಂಪಿವಿಗಳಲ್ಲಿ ಒಂದಾಗಿದ್ದು, ಮಹೀಂದ್ರಾ ಮರಾಜೊ ಹಾಗೂ ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಏರಿಕೆಯಾಗಲಿವೆ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ದರಗಳು

ಟೊಯೊಟಾ ಫಾರ್ಚೂನರ್ ದೇಶಿಯ ಮಾರುಕಟ್ಟೆಯಲ್ಲಿ ಪೂರ್ಣ ಪ್ರಮಾಣದ ಎಸ್‍‍ಯುವಿ ಸೆಗ್‍‍ಮೆಂಟಿನಲ್ಲಿ ಮುಂಚೂಣಿಯಲ್ಲಿದೆ. ಈ ಸೆಗ್‍‍ಮೆಂಟಿನಲ್ಲಿ ಫೋರ್ಡ್ ಎಂಡಿವರ್ ಹಾಗೂ ಮಹೀಂದ್ರಾ ಅಲ್ತುರಾಸ್ ಜಿ4 ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಟೊಯೊಟಾ toyota
English summary
Toyota Innova Crysta & Fortuner Prices To Be Increased In The Coming Months - Read in kannada
Story first published: Monday, August 19, 2019, 14:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X