ಭಾರತದಲ್ಲಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್‌ಗೆ ಸಜ್ಜಾದ ಟೊಯೊಟಾ ರಷ್
ಟೊಯೊಟಾ ಕಾರುಗಳು ಭಾರತದಲ್ಲಿ ಈಗಾಗಲೇ ಭಾರೀ ಬೇಡಿಕೆಯೊಂದಿಗೆ ಮುನ್ನಡೆ ಸಾಧಿಸುತ್ತಿದ್ದು, ಸದ್ಯದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಹೀಗಾಗಿ ಬಿಡುಗಡೆಯಾಗಲಿರುವ ರಷ್ ಮತ್ತು ಸಿ-ಹೆಚ್ಆರ್ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಸಂಬಂಧ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಆರಂಭಗೊಳಿಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರುಗಳು ಬಿಡುಗಡೆಯಾಗುವ ಸುಳಿವು ನೀಡಿದೆ.

ಹೌದು, ಟೊಯೊಟಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ವಿನೂತನ ವಿನ್ಯಾಸದ ಸಿ-ಹೆಚ್‌ಆರ್ ಕ್ರಾಸ್ ಓವರ್ ಮತ್ತು ಮಧ್ಯಮ ಕ್ರಮಾಂಕದ ಎಸ್‌ಯುವಿ ರಷ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹೊಸ ಕಾರುಗಳನ್ನು ಬಿಡುಗಡೆಗೊಳಿಸುವುದಕ್ಕಾಗಿ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗಾಗಿ ವಿದೇಶಿ ಮಾರುಕಟ್ಟೆಯಿಂದ ಭಾರತಕ್ಕೆ ರಷ್ ಮತ್ತು ಸಿ-ಹೆಚ್ಆರ್ ಉತ್ಪಾದನಾ ಆವೃತ್ತಿಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗಿದೆ.

ಮಾಹಿತಿಗಳ ಪ್ರಕಾರ ಹೊಸ ಕಾರುಗಳು ರೂ. 12 ಲಕ್ಷ ರಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳ್ಳುವ ಸಾಧ್ಯತೆಯಿದ್ದು, ಭಾರತದಲ್ಲಿ ಇವು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ರೆನಾಲ್ಟ್ ಕ್ಯಾಪ್ಚರ್ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡಲಿವೆ.

ಇದಕ್ಕೆ ಪೂರಕ ಎನ್ನುವಂತೆ ಇದೀಗ ಸಿ-ಹೆಚ್ಆರ್ ಕಾರುಗಳ ಎಂಜಿನ್ ಮಾಹಿತಿಯನ್ನು ಹೊರಹಾಕಿದ್ದು, ಶಾರ್ಪ್ ಮತ್ತು ಎಡ್ಜ್ ಡಿಸೈನ್ ಹೊಂದಿರುವ ಈ ಕಾರು ಸ್ಲಿಕ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆಗೆ ಪ್ರೀಮಿಯಂ ಸೌಲಭ್ಯಗಳೊಂದಿಗೆ ಹೊಂದಿರುವುದು ಕಾರಿನ ಹೊರಭಾಗದ ನೋಟವನ್ನು ಹೆಚ್ಚಿಸಿದೆ ಎನ್ನಬಹುದು.

ಇದಲ್ಲದೇ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ ಅಲಾಯ್ ವೀಲ್ಹ್‌ಗಳು, ಸಿ ಸೇಫ್ ಎಲ್ಇಡಿ ಟೈಲ್ ಲೈಟ್ಸ್, ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು ಮಸ್ಕ್ಯೂಲರ್ ಬಂಪರ್ ಜೊತೆ ಪ್ಲಾಸಿಕ್ಟ್ ಕ್ಯಾಡಿಂಗ್ ಹೊಂದಿದೆ. ಒಟ್ಟಿನಲ್ಲಿ ಕಾರಿನ ವಿನ್ಯಾಸಗಳು ಐಷಾರಾಮಿ ಕಾರಿನ ಹೋಲಿಕೆ ಪಡೆದಿವೆ ಎನ್ನಬಹುದು. ಹಾಗೆಯೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ರಷ್ ಕಂಪ್ಯಾಕ್ಟ್ ಎಸ್‌ಯುವಿಯು ಕೂಡಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳಬಹುದಾದ ಕಾರು ಮಾದರಿಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ಬೇಡಿಕೆಗಳನ್ನು ಇವು ಪೂರೈಸಲಿವೆ.

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಟೊಯೊಟಾ ನಿರ್ಮಾಣದ ಇಟಿಯಾಸ್ ಲಿವಾ, ಪ್ಲ್ಯಾಟಿನಂ ಇಟಿಯಾಸ್ ಮತ್ತು ಇಟಿಯಾಸ್ ಕ್ರಾಸ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳು ತುಸು ದುಬಾರಿ ಎನ್ನಿಸಲಿದ್ದು, ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಯಾರಿಸ್ ಸೆಡಾನ್ ಹೊರತಾಗಿ ಮತ್ಯಾವುದೇ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿಲ್ಲ.

ಯಾರಿಸ್ ತದನಂತರದಲ್ಲಿ ಬರುವ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಕಾರುಗಳು ಕನಿಷ್ಠ ಅಂದ್ರು ಆನ್ ರೋಡ್ ಬೆಲೆಗಳ ಪ್ರಕಾರ ರೂ.19 ಲಕ್ಷದಿಂದ ರೂ.38 ಲಕ್ಷ ಬೆಲೆ ಹೊಂದಿದ್ದು, ಇದು ಮಧ್ಯಮ ವರ್ಗದ ಕಾರು ಖರೀದಿದಾರರಿಗೆ ಅಸಾಧ್ಯದ ಮಾತು.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹೀಗಾಗಿ ರಷ್ ಮತ್ತು ಸಿ-ಹೆಚ್ಆರ್ ಕಾರುಗಳನ್ನು ಪರಿಚಯಿಸಲು ಎದುರು ನೋಡುತ್ತಿರುವ ಟೊಯೊಟಾ ಸಂಸ್ಥೆಯು ಇದರ ಜೊತೆ ಜೊತೆಯಲ್ಲಿ ಮಾರುತಿ ಸುಜುಕಿ ಜೊತೆಗೂಡಿ ಸಹಭಾಗಿತ್ವದ ಆಧಾರ ಮೇಲೆ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸಿ ಮಾರಾಟ ಮಾಡಲು ಹೊಸ ಒಪ್ಪಂದ ಮಾಡಿಕೊಂಡಿವೆ.

ಕಾರಿನ ಬೆಲೆ ಮತ್ತು ಬಿಡುಗಡೆ (ಅಂದಾಜು)
ಹೊಚ್ಚ ಸಿ-ಹೆಚ್ಆರ್ ಮತ್ತು ರಷ್ ಕಾರುಗಳು ಭಾರತದಲ್ಲಿ 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು ರೂ.12 ಲಕ್ಷದಿಂದ ರೂ.16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications