ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಟೊಯೊಟಾ ನಿರ್ಮಾಣದ ಬಹುತೇಕ ಕಾರುಗಳು ಈಗಾಗಲೇ ಭಾರೀ ಬೇಡಿಕೆಯೊಂದಿಗೆ ಮುನ್ನಡೆ ಸಾಧಿಸುತ್ತಿದ್ದು, ಸದ್ಯದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಇದರಲ್ಲಿ ಮಿನಿ ಫಾರ್ಚೂನರ್ ಖ್ಯಾತಿಯ ರಷ್ ಕಾರು ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಟೊಯೊಟಾ ಸಂಸ್ಥೆಯು ಸುಳಿವು ನೀಡಿದೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಹೌದು, ಟೊಯೊಟಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ವಿನೂತನ ವಿನ್ಯಾಸದ ಸಿ-ಹೆಚ್‌ಆರ್ ಕ್ರಾಸ್ ಓವರ್ ಮತ್ತು ಮಧ್ಯಮ ಕ್ರಮಾಂಕದ ಎಸ್‌ಯುವಿ ರಷ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹ್ಯುಂಡೈ ಕ್ರೆಟಾ, ರೆನಾಲ್ಟ್ ಕ್ಯಾಪ್ಚರ್, ನಿಸ್ಸಾನ್ ಕಿಕ್ಸ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ರಷ್ ಮತ್ತು ಸಿ-ಹೆಚ್‌ಆರ್ ಕಾರುಗಳು ದೇಶಿಯ ಮಾರುಕಟ್ಟೆಗೆ ಪ್ರವೇಶ ಪಡೆಯಲಿವೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಸದ್ಯ ಟೊಯೊಟಾ ನಿರ್ಮಾಣದ ಇಟಿಯಾಸ್ ಲಿವಾ, ಪ್ಲ್ಯಾಟಿನಂ ಇಟಿಯಾಸ್ ಮತ್ತು ಇಟಿಯಾಸ್ ಕ್ರಾಸ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳು ತುಸು ದುಬಾರಿ ಎನ್ನಿಸಲಿದ್ದು, ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಯಾರಿಸ್ ಸೆಡಾನ್ ಹೊರತಾಗಿ ಮತ್ಯಾವುದೇ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿಲ್ಲ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಪ್ರಸ್ತುತ ಮಾರುಕಟ್ಟೆಯಲ್ಲಿ ಇನೋವಾ ಕ್ರಿಸ್ಟಾ ಆವೃತ್ತಿಯು ರೂ.15 ಲಕ್ಷದಿಂದ ರೂ.22 ಲಕ್ಷ ಎಕ್ಸ್‌ಶೋರೂಂ ಬೆಲೆ ಪಡೆದುಕೊಂಡಿದ್ದು, ಇದೀಗ ಬಿಡುಗಡೆಗಾಗಿ ಸಿದ್ದವಾಗುತ್ತಿರುವ ಹೊಸ ನಮೂನೆಯ ರಷ್ ಮತ್ತು ಸಿಹೆಚ್ಆರ್ ಕಾರುಗಳು ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿವೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಇದಕ್ಕೆ ಪೂರಕ ಎನ್ನುವಂತೆ ಕೆಲದಿನಗಳ ಹಿಂದೆ ಸಿ-ಹೆಚ್ಆರ್ ಕಾರಿನ ಎಂಜಿನ್ ಮಾಹಿತಿಯನ್ನು ಹೊರಹಾಕಿದ್ದ ಟೊಯೊಟಾ ಸಂಸ್ಥೆಯು, ಹೊಸ ಕಾರು ಶಾರ್ಪ್ ಮತ್ತು ಎಡ್ಜ್ ಡಿಸೈನ್‌ನೊಂದಿಗೆ ಸ್ಲಿಕ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆಗೆ ಪ್ರೀಮಿಯಂ ಸೌಲಭ್ಯ ಹೊಂದಿರಲಿದೆ ಎಂದಿತ್ತು. ಇದಲ್ಲದೇ ಹೊಸ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ ಅಲಾಯ್ ವೀಲ್ಹ್‌ಗಳು, ಸಿ ಸೇಫ್ ಎಲ್ಇಡಿ ಟೈಲ್ ಲೈಟ್ಸ್, ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು ಮಸ್ಕ್ಯೂಲರ್ ಬಂಪರ್ ಜೊತೆ ಪ್ಲಾಸಿಕ್ಟ್ ಕ್ಯಾಡಿಂಗ್ ಜೋಡಿಸಲಾಗಿದ್ದು, ಒಟ್ಟಿನಲ್ಲಿ ಹೊಸ ಕಾರಿನ ವಿನ್ಯಾಸಗಳು ಐಷಾರಾಮಿ ಕಾರಿನ ಹೋಲಿಕೆ ಪಡೆದಿರಲಿವೆ ಎನ್ನಬಹುದು.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಹಾಗೆಯೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ರಷ್ ಕಂಪ್ಯಾಕ್ಟ್ ಎಸ್‌ಯುವಿಯು ಕೂಡಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳಬಹುದಾದ ಕಾರು ಮಾದರಿಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ಬೇಡಿಕೆಗಳನ್ನು ಇವು ಪೂರೈಸಲಿವೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಯಾರಿಸ್ ತದನಂತರದಲ್ಲಿ ಬರುವ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಕಾರುಗಳು ಕನಿಷ್ಠ ಆನ್ ರೋಡ್ ಬೆಲೆಗಳ ಪ್ರಕಾರ ರೂ.19 ಲಕ್ಷದಿಂದ ರೂ.38 ಲಕ್ಷ ಬೆಲೆ ಹೊಂದಿದ್ದು, ಇದು ಮಧ್ಯಮ ವರ್ಗದ ಕಾರು ಖರೀದಿದಾರರಿಗೆ ಅದು ಕಷ್ಟ ಸಾಧ್ಯ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಹೀಗಾಗಿ ರಷ್ ಮತ್ತು ಸಿ-ಹೆಚ್ಆರ್ ಕಾರುಗಳನ್ನು ಪರಿಚಯಿಸಲು ಎದುರು ನೋಡುತ್ತಿರುವ ಟೊಯೊಟಾ ಸಂಸ್ಥೆಯು ಇದರ ಜೊತೆ ಜೊತೆಯಲ್ಲಿ ಮಾರುತಿ ಸುಜುಕಿ ಜೊತೆಗೂಡಿ ಸಹಭಾಗಿತ್ವದ ಆಧಾರ ಮೇಲೆ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸಿ ಮಾರಾಟ ಮಾಡಲು ಹೊಸ ಒಪ್ಪಂದ ಮಾಡಿಕೊಂಡಿವೆ.

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಇದಕ್ಕೆ ಪ್ರತಿಯಾಗಿ ಮಾರುತಿ ಸುಜುಕಿ ಸಂಸ್ಥೆಯು ಸಹ ಟೊಯೊಟಾ ನಿರ್ಮಾಣದ ಕಾರುಗಳ ಮಾರಾಟಕ್ಕೆ ಸಹಕಾರಿಯಾಗಲಿದ್ದು, ಒಪ್ಪಂದ ಆಧಾರದ ಮೇಲೆ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳನ್ನು ಸಹ ಅಭಿವೃದ್ಧಿ ಪಡಿಸಲು ಮಾತುಕತೆ ನಡೆಸಿವೆ.

MOST READ: ಅಪಘಾತದಲ್ಲಿ ಹ್ಯಾರಿಯರ್ ಕಾರು ಪುಡಿಪುಡಿಯಾದ್ರು ಪ್ರಯಾಣಿಕರಿಗೆ ಏನೂ ಆಗಲಿಲ್ಲ..!

ಮಿನಿ ಫಾರ್ಚೂನರ್ ಖ್ಯಾತಿಯ ಟೊಯೊಟಾ ರಷ್ ಭಾರತದಲ್ಲಿ ಬಿಡುಗಡೆಯಾಗುವುದು ಪಕ್ಕಾ..!

ಕಾರಿನ ಬೆಲೆ ಮತ್ತು ಬಿಡುಗಡೆಯ ದಿನಾಂಕ (ಅಂದಾಜು)

ಹೊಚ್ಚ ಸಿ-ಹೆಚ್ಆರ್ ಮತ್ತು ರಷ್ ಕಾರುಗಳು ಭಾರತದಲ್ಲಿ 2020ರ ಮಧ್ಯಂತರದಲ್ಲಿ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು ರೂ.10 ಲಕ್ಷದಿಂದ ರೂ.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source:CarBlogIndia

Most Read Articles

Kannada
Read more on ಟೊಯೊಟಾ toyota
English summary
Toyota Rush SUV Launch In India Confirmed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X