ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಟಾಟಾ ಹ್ಯಾರಿಯರ್ ಮತ್ತು ಇತ್ತೀಚೆಗೆ ಬಿಡುಗಡೆಗೊಂಡ ಎಂಜಿ ಹೆಕ್ಟರ್ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮವಾದ ಬೇಡಿಕೆಯನ್ನು ಪಡೆಯುತ್ತಿದ್ದು, ಎಂಜಿ ಮೋಟಾರ್ ಮೊನ್ನೆಯಷ್ಟೆ ಹೆಕ್ಟರ್ ಎಸ್‍ಯುವಿ ಕಾರಿಗೆ ಬುಕ್ಕಿಂಗ್ ಅಧಿಕವಾಗಿ ಬರುತ್ತಿರುವ ಕಾರಣ ತಾತ್ಕಾಲಿಕವಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ. ಈ ಕಾರುಗಳಿಗೆ ಪೈಪೋಟಿ ನೀಡಲು ಕಿಯಾ ಸಂಸ್ಥೆಯು ಸೆಲ್ಟೊಸ್ ಕಾರನ್ನು ಸಹ ಬಿಡುಗಡೆ ಮಾಡಲಿದ್ದು, ಈ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯು ಸಹ ಈಗಾಗಲೇ ಪ್ರಾರಂಭವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಕಾಂಪ್ಯಾಕ್ಟ್ ಎಸ್‍ಯುವಿ ಕಾರುಗಳ ಬೇಡಿಕೆಯು ಹೆಚ್ಚುತ್ತಿರುವ ಕಾರಣ ಟೊಯೊಟಾ ಸಂಸ್ಥೆಯು ಕೂಡಾ ತಮ್ಮ ಹೊಸ ರಷ್ ಕಾಂಪ್ಯಾಕ್ಟ್ ಎಸ್‍ಯುವಿ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಶೀಘ್ರವೇ ಬಿಡುಗಡೆ ಮಾಡಲಿದ್ದು, ಸಧ್ಯ ಇಂಡೋನೇಷ್ಯನಲ್ಲಿ ನಡೆಯುತ್ತಿರುವ 2019ರ GIIAS (ಗಾಯ್‍‍ಕಿಂಡೋ ಇಂಡೋನೇಷ್ಯಾ ಇಂಟರ್‍‍ನ್ಯಾಶನಲ್ ಆಟೋ ಶೋ) ಸಮಾರಂಭದಲ್ಲಿ ಪ್ರದರ್ಶಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಟೊಯೊಟಾ ಸಂಸ್ಥೆಯು ಇನ್ನು ಕೆಲವೇ ದಿನಗಳಲ್ಲಿ ತಮ್ಮ ಎರಡು ಐಷಾರಾಮಿ ಎಂಪಿವಿ ಕಾರುಗಳನ್ನು ಮತ್ತು ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆ ಮಾಡಲಿದ್ದು, ಆ ಎರಡು ಐಷಾರಾಮಿ ಎಂಪಿವಿ ಕಾರುಗಳು ವೆಲ್‍ಫೈರ್ ಮತ್ತು ಆಲ್ಫಾರ್ಡ್ ಎನ್ನಲಾಗಿದೆ. ಮತ್ತು ನಮಗೆಲ್ಲರಿಗು ತಿಳಿದಿರುವ ಹಾಗೆ ರಷ್ ಎಂಬ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಎಂಜಿನ್ ಸಾಮರ್ಥ್ಯ

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಕಾಂಪ್ಯಾಕ್ಟ್ ಎಸ್‍ಯುವಿ ಕಾರು 1.5 ಲೀಟರ್ ವಿವಿಟಿ-ಐ 4 ಸಿಲೆಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆಯಲಿದ್ದು, ಈ ಎಂಜಿನ್ 105 ಬಿಹೆಚ್‍ಪಿ ಮತ್ತು 136 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಈ ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಹಾಗೆಯೆ ಕೆಲ ದಿನಗಳ ಹಿಂದಷ್ಟೆ ಟೊಯೊಟಾ ಸಾಂಸ್ಥೆಯು ಸಿ-ಹೆಚ್ಆರ್ ಕಾರುಗಳ ಎಂಜಿನ್ ಮಾಹಿತಿಯನ್ನು ಹೊರಹಾಕಿದ್ದು, ಶಾರ್ಪ್ ಮತ್ತು ಎಡ್ಜ್ ಡಿಸೈನ್ ಹೊಂದಿರುವ ಈ ಕಾರು ಸ್ಲಿಕ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆಗೆ ಪ್ರೀಮಿಯಂ ಸೌಲಭ್ಯಗಳೊಂದಿಗೆ ಹೊಂದಿರುವುದು ಕಾರಿನ ಹೊರಭಾಗದ ನೋಟವನ್ನು ಹೆಚ್ಚಿಸಿದೆ ಎನ್ನಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಇದಲ್ಲದೇ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ ಅಲಾಯ್ ವೀಲ್ಹ್‌ಗಳು, ಸಿ ಸೇಫ್ ಎಲ್ಇಡಿ ಟೈಲ್ ಲೈಟ್ಸ್, ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು ಮಸ್ಕ್ಯೂಲರ್ ಬಂಪರ್ ಜೊತೆ ಪ್ಲಾಸಿಕ್ಟ್ ಕ್ಯಾಡಿಂಗ್ ಹೊಂದಿದೆ. ಒಟ್ಟಿನಲ್ಲಿ ಕಾರಿನ ವಿನ್ಯಾಸಗಳು ಐಷಾರಾಮಿ ಕಾರಿನ ಹೋಲಿಕೆ ಪಡೆದಿವೆ ಎನ್ನಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಹಾಗೆಯೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ರಷ್ ಕಂಪ್ಯಾಕ್ಟ್ ಎಸ್‌ಯುವಿಯು ಕೂಡಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳಬಹುದಾದ ಕಾರು ಮಾದರಿಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ಬೇಡಿಕೆಗಳನ್ನು ಇವು ಪೂರೈಸಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಟೊಯೊಟಾ ನಿರ್ಮಾಣದ ಇಟಿಯಾಸ್ ಲಿವಾ, ಪ್ಲ್ಯಾಟಿನಂ ಇಟಿಯಾಸ್ ಮತ್ತು ಇಟಿಯಾಸ್ ಕ್ರಾಸ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳು ತುಸು ದುಬಾರಿ ಎನ್ನಿಸಲಿದ್ದು, ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಯಾರಿಸ್ ಸೆಡಾನ್ ಹೊರತಾಗಿ ಮತ್ಯಾವುದೇ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಯಾರಿಸ್ ತದನಂತರದಲ್ಲಿ ಬರುವ ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಕಾರುಗಳು ಕನಿಷ್ಠ ಅಂದ್ರು ಆನ್ ರೋಡ್ ಬೆಲೆಗಳ ಪ್ರಕಾರ ರೂ.19 ಲಕ್ಷದಿಂದ ರೂ.38 ಲಕ್ಷ ಬೆಲೆ ಹೊಂದಿದ್ದು, ಇದು ಮಧ್ಯಮ ವರ್ಗದ ಕಾರು ಖರೀದಿದಾರರಿಗೆ ಅಸಾಧ್ಯದ ಮಾತು.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಹೀಗಾಗಿ ರಷ್ ಮತ್ತು ಸಿ-ಹೆಚ್ಆರ್ ಕಾರುಗಳನ್ನು ಪರಿಚಯಿಸಲು ಎದುರು ನೋಡುತ್ತಿರುವ ಟೊಯೊಟಾ ಸಂಸ್ಥೆಯು ಇದರ ಜೊತೆ ಜೊತೆಯಲ್ಲಿ ಮಾರುತಿ ಸುಜುಕಿ ಜೊತೆಗೂಡಿ ಸಹಭಾಗಿತ್ವದ ಆಧಾರ ಮೇಲೆ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸಿ ಮಾರಾಟ ಮಾಡಲು ಹೊಸ ಒಪ್ಪಂದ ಮಾಡಿಕೊಂಡಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ರಷ್ ಇದೇನೆ...

ಕಾರಿನ ಬೆಲೆ ಮತ್ತು ಬಿಡುಗಡೆ (ಅಂದಾಜು)

ಹೊಚ್ಚ ಸಿ-ಹೆಚ್ಆರ್ ಮತ್ತು ರಷ್ ಕಾರುಗಳು ಭಾರತದಲ್ಲಿ 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಾರಿನ ಬೆಲೆಯು ರೂ.12 ಲಕ್ಷದಿಂದ ರೂ.16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Toyota Rush Unveiled At GIIAS 2019 India Bound Rival Tata Harrier And MG Hector. Read In Kannada
Story first published: Saturday, July 20, 2019, 11:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X