ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಟೊಯೊಟಾ ಸಂಸ್ಥೆಯು ತನ್ನ ಐಷಾರಾಮಿ ಎಂಪಿವಿ ಆವೃತ್ತಿಯಾದ ವೆಲ್‌ಫೈರ್ ಕಾರನ್ನು ಇದೇ ತಿಂಗಳಾಂತ್ಯದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿನ ಪ್ರಮುಖ ಡೀಲರ್ಸ್‌ಗಳಲ್ಲಿ ಹೊಸ ವೆಲ್‌ಫೈರ್ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ವೆಲ್‍‍ಫೈರ್ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಟೊಯೊಟಾ ನಿರ್ಮಾಣದ ಹೈ ಎಂಡ್ ಕಾರು ಮಾದರಿಯಾಗಿದ್ದು, ಅಲ್ಫಾರ್ಡ್ ಲಗ್ಷುರಿ ಮಿನಿ ವ್ಯಾನ್ ಡಿಸೈನ್ ಆಧಾರದ ಮೇಲೆ ಈ ಕಾರನ್ನು ಅಭಿವೃದ್ದಿಗೊಳಿಸಲಾಗಿದೆ. ಈ ಲಗ್ಷುರಿ ವ್ಯಾನ್ ಅನ್ನು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟ ಮಾಡಲಾಗುತ್ತಿದ್ದು, ಇದೀಗ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಹಲವು ಹೊಸ ತಂತ್ರಜ್ಞಾನ ಪ್ರೇರಣೆ ಹೊಂದಿರುವ ವೆಲ್‌ಫೈರ್ ಕಾರು ಟೊಯೊಟಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ಕಂಡುಕೊಡಲಿದ್ದು, ಕೇಂದ್ರ ಸರ್ಕಾರವು ಬದಲಾವಣೆ ಮಾಡಿರುವ ಆಮದು ನೀತಿಯ ಪರಿಣಾಮ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಐಷಾರಾಮಿ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿವೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಕೇಂದ್ರ ಸರ್ಕಾರವು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೇ ವಾರ್ಷಿಕವಾಗಿ 2,500 ವಾಹನಗಳನ್ನು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿದೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಈ ಹಿನ್ನಲೆಯಲ್ಲಿ ಜಪಾನ್ ಆಟೋ ದಿಗ್ಗಜ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿರುವ ತಮ್ಮ ಜನಪ್ರಿಯ ವಾಹನಗಳನ್ನು ಭಾರತದಲ್ಲೂ ಮಾರಾಟ ಮಾಡಲು ಸಿದ್ದವಾಗುತ್ತಿದ್ದು, ವೆಲ್‌ಫೈರ್ ಹಲವು ವಿಶೇಷತೆಗಳೊಂದಿಗೆ ಭಾರತದಲ್ಲಿ ಸದ್ದು ಮಾಡಲು ಸಿದ್ದವಾಗುತ್ತಿದೆ. ಟೊಯೊಟಾ ವೆಲ್‌ಫೈರ್ ಕಾರು ಈಗಾಗಲೇ ಆಯ್ದ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದ್ದು, 4,935 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,935 ಎಂಎಂ ಎತ್ತರವಿದೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಆರು ಆಸನ ಸೌಲಭ್ಯವಿರುವ ವೆಲ್‌ಫೈರ್ ಕಾರಿನಲ್ಲಿ ಪ್ರತಿ ಆಸನವು ಪ್ರತ್ಯೇಕ ಕಂಟ್ರೋಲ್ ಹೊಂದಿದ್ದು, ಆರಾಮದಾಯಕವಾಗಿ ಪ್ರಯಾಣಿಸುವಂತೆ ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಇದು ಐಷಾರಾಮಿ ಪ್ರಯಾಣವನ್ನು ಬಯಸುವ ಗ್ರಾಹಕರಿಗೆ ವಿಶೇಷವಾಗಿ ನಿರ್ಮಾಣ ಮಾಡಲಾಗಿದ್ದು, ಬೆರಳತುದಿಯಲ್ಲೇ ಹಲವು ತಾಂತ್ರಿಕ ಸೌಲಭ್ಯಗಳು ಲಭ್ಯವಿರಲಿವೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಎಂಜಿನ್ ಸಾಮರ್ಥ್ಯ

ವಿದೇಶಿ ಮಾರುಕಟ್ಟೆಗಳಲ್ಲಿ ವೆಲ್‌ಫೈರ್ ಕಾರು 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 3.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನಲ್ಲಿ ಕೇವಲ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ವರ್ಷನ್ ಮಾತ್ರವೇ ಬಿಡುಗಡೆ ಮಾಡಲಾಗುತ್ತಿದೆ.

MOST READ: ಹೊಸ ವಾಹನಗಳ ಖರೀದಿ ಹೆಚ್ಚಿಸಲು ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಕಡಿತ

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮಾದರಿಯು 150-ಬಿ‍‍ಹೆಚ್‍‍ಪಿ ಮತ್ತು 197-ಎನ್‍ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ನಾಲ್ಕು ಚಕ್ರಗಳಿಗೂ ಪ್ರತ್ಯೇಕವಾಗಿ ಪವರ್ ಒದಗಿಸುವ ಎಲೆಕ್ಟ್ರಿಕ್ ಸಿ‍‍ವಿ‍‍ಟಿ ಗೇರ್‍‍ಬಾಕ್ಸ್ ತಂತ್ರಜ್ಞಾನವನ್ನು ಈ ಕಾರಿನಲ್ಲಿ ಅಳವಡಿಸಲಾಗಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳಾದ ಎಲ್‍ಇ‍‍ಡಿ ಹೆಡ್‍‍ಲೈಟ್, ಕಾರ್ನರಿಂಗ್ ಲೈಟ್, ಇನ್‍‍ಕ್ಯಾಂಡಿಸೆಂಟ್ ಲೈಟ್, ಇಂಡಿಕೇಟರ್ ಲೈಟ್, ವೆಂಟಿಲೇಟೆಡ್ ಸೀಟಿಂಗ್, ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ಕ್ಯಾಮರಾ, ಡ್ಯುಯಲ್ ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಹಲವಾರು ಸೌಲಭ್ಯಗಳಿವೆ.

MOST READ: ಕೊನೆಗೂ ಭಾರೀ ದಂಡಕ್ಕೆ ಹೆದರಿದ ಬೆಂಗಳೂರಿನ ವಾಹನ ಸವಾರರು

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಹಾಗೆಯೇ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ 7 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಹಿಲ್ ಅಸಿಸ್ಟ್, ತ್ರಿ ಜೋನ್ ಆಟೋ ಕ್ಲೈಮೆಟ್ ಕಂಟ್ರೊಲ್, ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಫ್ರಂಟ್ ಅಂಡ್ ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿ ಹಲವು ಸೆಫ್ಟಿ ಫೀಚರ್ಸ್‌ಗಳಿದ್ದು, ಭಾರತದಲ್ಲಿ ಬೆಲೆ ಕಡಿತಗೊಳಿಸುವುದಕ್ಕಾಗಿ ಕೆಲವು ಹೈ ಎಂಡ್ ಫೀಚರ್ಸ್‌ಗಳನ್ನು ಕೈಬಿಡಲಾಗಿದೆ.

ಟೊಯೊಟಾ ವೆಲ್‌ಫೈರ್ ಖರೀದಿಗೆ ಬುಕ್ಕಿಂಗ್ ಶುರು- ಬೆಲೆ ರೂ. 80 ಲಕ್ಷ ಅಷ್ಟೆ ಅಂತೆ..!

ಒಟ್ಟಿನಲ್ಲಿ ಹೊಸ ಟೊಯೊಟಾ ವೆಲ್‍‍ಫೈರ್ ಲಗ್ಷುರಿಯ ಎಂ‍ಪಿವಿಯ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸದ್ಯ ಮಾರುಕಟ್ಟೆರುವ ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್‌ಗೆ ಪೈಪೋಟಿ ನೀಡಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರವೇ ರೂ.75 ಲಕ್ಷದಿಂದ ರೂ.80 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Vellfire bookings open at dealerships. Read in Kannada.
Story first published: Tuesday, October 15, 2019, 19:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X