Just In
- 42 min ago BYD Seal Review: 580 ಕಿ.ಮೀ ಓಡುವ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರಿನ ವಿಮರ್ಶೆ.. ಹೇಗಿದೆ ಗೊತ್ತಾ?
- 18 hrs ago ಮದುವೆ ಉಡುಪು ಧರಿಸಿ ಕೆಟಿಎಂ ಬೈಕ್ನಲ್ಲಿ ಯುವತಿ ಸವಾರಿ... ವಿಡಿಯೋ ವೈರಲ್
- 20 hrs ago ಹಾರ್ಲೆ-ಡೇವಿಡ್ಸನ್ ಬೈಕ್ಗಾಗಿ ಮುಗಿಬಿದ್ದ ಜನ: ನೀವು ಈ ಬೈಕ್ ಮನೆಗೆ ತರಲು EMI, ಆನ್ ರೋಡ್ ಬೆಲೆ ಎಷ್ಟು?
- 22 hrs ago FRONX: ಮಾರುತಿ ಸುಜುಕಿ ಫ್ರಾಂಕ್ಸ್ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News ಕುಮಾರಸ್ವಾಮಿ ಅವರು ಇಂತಹ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? : ಡಿ ಕೆ ಶಿವಕುಮಾರ್ ಪ್ರಶ್ನೆ
- Technology ಇಂದು ರಿಯಲ್ಮಿ P1 ಫೋನ್ ಫಸ್ಟ್ ಸೇಲ್!..ಏನಾದ್ರೂ ಡಿಸ್ಕೌಂಟ್ ಇದೆಯಾ?
- Lifestyle ಮನೆಯಲ್ಲಿ ಟೊಮೆಟೋ ರಸ ಮಾಡೋದು ಹೇಗೆ.?
- Finance April 22 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports KKR vs RCB: ವಿರಾಟ್ ಕೊಹ್ಲಿ ಔಟ್ ವಿವಾದ; ಕಿಡಿಕಾರಿದ ಎಬಿ ಡಿವಿಲಿಯರ್ಸ್
- Movies 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಬೆಂಗಳೂರು ತಲುಪಿದ ವೆಲ್ಫೈರ್- ಹೊಸ ಕಾರು ಬಿಡುಗಡೆಗೆ ಟೊಯೊಟಾ ಭರ್ಜರಿ ತಯಾರಿ..!
ಟೊಯೊಟಾ ಸಂಸ್ಥೆಯು ತನ್ನ ಐಷಾರಾಮಿ ಎಂಪಿವಿ ಕಾರು ಆವೃತ್ತಿಯಾದ ವೆಲ್ಫೈರ್ ಮಾದರಿಯನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದ ನಂತರ ಬಿಡುಗಡೆಯ ಸುಳಿವು ನೀಡಿದೆ. ಹೀಗಾಗಿ ಹೊಸ ಕಾರು ಬಿಡುಗಡೆಗೂ ಮುನ್ನ ಬೆಂಗಳೂರಿನ ಪ್ರಮುಖ ಟೊಯೊಟಾ ಡೀಲರ್ಸ್ ಯಾರ್ಡ್ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದ್ದು, ಆಸಕ್ತ ಗ್ರಾಹಕರಿಂದ ಬುಕ್ಕಿಂಗ್ ಕೂಡಾ ಸ್ವಿಕರಿಸಲಾಗುತ್ತಿದೆ.
ವೆಲ್ಫೈರ್ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಯು ಟೊಯೊಟಾ ನಿರ್ಮಾಣದ ಹೈ ಎಂಡ್ ಕಾರು ಮಾದರಿಯಾಗಿದ್ದು, ಅಲ್ಫಾರ್ಡ್ ಲಗ್ಷುರಿ ಮಿನಿ ವ್ಯಾನ್ ಡಿಸೈನ್ ಆಧಾರದ ಮೇಲೆ ಈ ಕಾರನ್ನು ಅಭಿವೃದ್ದಿಗೊಳಿಸಲಾಗಿದೆ. ಈ ಲಗ್ಷುರಿ ವ್ಯಾನ್ ಅನ್ನು ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟ ಮಾಡಲಾಗುತ್ತಿದ್ದು, ಇದೀಗ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.
ಹಲವು ಹೊಸ ತಂತ್ರಜ್ಞಾನ ಪ್ರೇರಣೆ ಹೊಂದಿರುವ ವೆಲ್ಫೈರ್ ಕಾರು ಟೊಯೊಟಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದ್ದು, ಕೇಂದ್ರ ಸರ್ಕಾರವು ಬದಲಾವಣೆ ಮಾಡಿರುವ ಆಮದು ನೀತಿಯ ಪರಿಣಾಮ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಐಷಾರಾಮಿ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿವೆ.
ಕೇಂದ್ರ ಸರ್ಕಾರವು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೇ ವಾರ್ಷಿಕವಾಗಿ 2,500 ವಾಹನಗಳನ್ನು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿದೆ.
ಈ ಹಿನ್ನಲೆಯಲ್ಲಿ ಜಪಾನ್ ಆಟೋ ದಿಗ್ಗಜ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿರುವ ತಮ್ಮ ಜನಪ್ರಿಯ ವಾಹನಗಳನ್ನು ಭಾರತದಲ್ಲೂ ಮಾರಾಟ ಮಾಡಲು ಸಿದ್ದವಾಗುತ್ತಿದ್ದು, ವೆಲ್ಫೈರ್ ಹಲವು ವಿಶೇಷತೆಗಳೊಂದಿಗೆ ಭಾರತದಲ್ಲಿ ಸದ್ದು ಮಾಡಲು ಸಿದ್ದವಾಗುತ್ತಿದೆ. ಟೊಯೊಟಾ ವೆಲ್ಫೈರ್ ಕಾರು ಈಗಾಗಲೇ ಆಯ್ದ ಡೀಲರ್ಸ್ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದ್ದು, 4,935 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,935 ಎಂಎಂ ಎತ್ತರವಿದೆ.
ಆರು ಆಸನ ಸೌಲಭ್ಯವಿರುವ ವೆಲ್ಫೈರ್ ಕಾರಿನಲ್ಲಿ ಪ್ರತಿ ಆಸನವು ಪ್ರತ್ಯೇಕ ಕಂಟ್ರೋಲ್ ಹೊಂದಿದ್ದು, ಆರಾಮದಾಯಕವಾಗಿ ಪ್ರಯಾಣಿಸುವಂತೆ ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಇದು ಐಷಾರಾಮಿ ಪ್ರಯಾಣವನ್ನು ಬಯಸುವ ಗ್ರಾಹಕರಿಗೆ ವಿಶೇಷವಾಗಿ ನಿರ್ಮಾಣ ಮಾಡಲಾಗಿದ್ದು, ಬೆರಳತುದಿಯಲ್ಲೇ ಹಲವು ತಾಂತ್ರಿಕ ಸೌಲಭ್ಯಗಳು ಲಭ್ಯವಿರಲಿವೆ.
ಎಂಜಿನ್ ಸಾಮರ್ಥ್ಯ
ವಿದೇಶಿ ಮಾರುಕಟ್ಟೆಗಳಲ್ಲಿ ವೆಲ್ಫೈರ್ ಕಾರು 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 3.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನಲ್ಲಿ ಕೇವಲ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ವರ್ಷನ್ ಮಾತ್ರವೇ ಬಿಡುಗಡೆ ಮಾಡಲಾಗುತ್ತಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!
2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮಾದರಿಯು 150-ಬಿಹೆಚ್ಪಿ ಮತ್ತು 197-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ನಾಲ್ಕು ಚಕ್ರಗಳಿಗೂ ಪ್ರತ್ಯೇಕವಾಗಿ ಪವರ್ ಒದಗಿಸುವ ಎಲೆಕ್ಟ್ರಿಕ್ ಸಿವಿಟಿ ಗೇರ್ಬಾಕ್ಸ್ ತಂತ್ರಜ್ಞಾನವನ್ನು ಈ ಕಾರಿನಲ್ಲಿ ಅಳವಡಿಸಲಾಗಿದೆ.
MOST READ: ಕಾರು ಅಪ್ಪಚ್ಚಿಯಾದರೂ ಬದುಕುಳಿದ ಕಾರು ಚಾಲಕ
ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳಾದ ಎಲ್ಇಡಿ ಹೆಡ್ಲೈಟ್, ಕಾರ್ನರಿಂಗ್ ಲೈಟ್, ಇನ್ಕ್ಯಾಂಡಿಸೆಂಟ್ ಲೈಟ್, ಇಂಡಿಕೇಟರ್ ಲೈಟ್, ವೆಂಟಿಲೇಟೆಡ್ ಸೀಟಿಂಗ್, ಇನ್ಫೋಟೈನ್ಮೆಂಟ್ ಸಿಸ್ಟಂ, 360 ಡಿಗ್ರಿ ಕ್ಯಾಮರಾ, ಡ್ಯುಯಲ್ ಎಲೆಕ್ಟ್ರಿಕ್ ಸನ್ರೂಫ್ ಸೇರಿದಂತೆ ಹಲವಾರು ಸೌಲಭ್ಯಗಳಿವೆ.
MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್
ಹಾಗೆಯೇ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ 7 ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಹಿಲ್ ಅಸಿಸ್ಟ್, ತ್ರಿ ಜೋನ್ ಆಟೋ ಕ್ಲೈಮೆಟ್ ಕಂಟ್ರೊಲ್, ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಫ್ರಂಟ್ ಅಂಡ್ ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿ ಹಲವು ಸೆಫ್ಟಿ ಫೀಚರ್ಸ್ಗಳಿದ್ದು, ಭಾರತದಲ್ಲಿ ಬೆಲೆ ಕಡಿತಗೊಳಿಸುವುದಕ್ಕಾಗಿ ಕೆಲವು ಹೈ ಎಂಡ್ ಫೀಚರ್ಸ್ಗಳನ್ನು ಕೈಬಿಡಲಾಗಿದೆ.
ಒಟ್ಟಿನಲ್ಲಿ ಹೊಸ ಟೊಯೊಟಾ ವೆಲ್ಫೈರ್ ಲಗ್ಷುರಿಯ ಎಂಪಿವಿಯ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸದ್ಯ ಮಾರುಕಟ್ಟೆರುವ ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್ಗೆ ಪೈಪೋಟಿ ನೀಡಲಿರುವ ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರವೇ ರೂ.75 ಲಕ್ಷದಿಂದ ರೂ.80 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
Source: Team BHP