ಟೊಯೊಟಾ ನಿರ್ಮಾಣದ ಮಾರುತಿ ಸುಜುಕಿ ಬ್ರೆಝಾ ಬಿಡುಗಡೆಗೆ ಸಜ್ಜು..!

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ತಂತ್ರ ರೂಪಿಸಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳನ್ನು ಉತ್ಪಾದನೆ ಮಾಡುತ್ತಿದ್ದು, ಮಾರುತಿ ಸುಜುಕಿ ನಿರ್ಮಾಣದ ಜನಪ್ರಿಯ ಬಲೆನೊ ಮತ್ತು ಬ್ರೆಝಾ ಕಾರುಗಳು ಟೊಯೊಟಾ ಬ್ಯಾಡ್ಜ್‌ನೊಂದಿಗೆ ಮರುಬಿಡುಗಡೆಗಾಗಿ ಸಜ್ಜಾಗುತ್ತಿವೆ.

ಟೊಯೊಟಾ ನಿರ್ಮಾಣದ ಮಾರುತಿ ಸುಜುಕಿ ಬ್ರೆಝಾ ಬಿಡುಗಡೆಗೆ ಸಜ್ಜು..!

2017ರ ಆರಂಭದಲ್ಲೇ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್ ಜಂಟಿಯಾಗಿ ಕಾರು ಉತ್ಪಾದಿಸುವ ಬಗ್ಗೆ ಮಾತುಕತೆ ನಡೆಸಿದ್ದವು. ಆದ್ರೆ ಕಾರಣಾಂತರಗಳಿಂದ ಹೊಸ ಯೋಜನೆ ಬಗ್ಗೆ ತಟಸ್ಥವಾಗಿದ್ದ ಎರಡು ಸಂಸ್ಥೆಗಳು ಇದೀಗ ಮಹತ್ವದ ನಿರ್ಣಯಕ್ಕೆ ಬಂದಿದ್ದು, ಸಾಮಾನ್ಯ ಮಾದರಿಯ ಬಲೆನೊ ಮತ್ತು ಬ್ರೆಝಾ ಜೊತೆಗೆ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೂ ಒಪ್ಪಂದ ಮಾಡಿಕೊಳ್ಳಲಾಗಿದೆ.

ಹೀಗಾಗಿ ಮಾರುತಿ ಸುಜುಕಿ ಡೀಲರ್ಸ್‌ಗಳಲ್ಲಿ ಟೊಯೊಟಾ ಉತ್ಪನ್ನಗಳನ್ನು ಮತ್ತು ಟೊಯೊಟಾ ಡೀಲರ್ಸ್‌ಗಳಲ್ಲಿ ಮಾರುತಿ ಸುಜುಕಿ ಕಾರು ಉತ್ಪನ್ನಗಳನ್ನು ಖರೀದಿ ಮಾಡಬಹುದಾಗಿದ್ದು, 2020-21 ರ ಅವಧಿಯಲ್ಲಿ ಬಲೆನೊ ಮತ್ತು ಬ್ರೆಝಾ ಕಾರುಗಳು ಟೊಯೊಟಾ ಬ್ಯಾಡ್ಜ್‌ನೊಂದಿಗೆ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಮತ್ತಷ್ಟು ವಿಸ್ತರಣೆಯಾಗಲಿದೆ ಬಿಡದಿ ಟೊಯೊಟಾ ಘಟಕ..!
ಸದ್ಯ ಭಾರತದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳನ್ನ ಹೊಂದಿರುವ ಸುಜುಕಿ ಸಂಸ್ಥೆಯು ಹರಿಯಾಣದಲ್ಲಿ ಎರಡು ಮತ್ತು ಗುಜರಾತ್‌ನಲ್ಲಿ ಒಂದು ಉತ್ಪಾದನಾ ಘಟಕವನ್ನ ಹೊಂದಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಯಾವುದೇ ಉತ್ಪಾದನಾ ಘಟಕ ಇಲ್ಲದಿರುವುದು ಸುಜುಕಿ ಸಂಸ್ಥೆಗೆ ಕಾರುಗಳ ಸರಬರಾಜು ಒಂದು ಸವಾಲಿನ ವಿಚಾರವೇ ಸರಿ.

ಟೊಯೊಟಾ ನಿರ್ಮಾಣದ ಮಾರುತಿ ಸುಜುಕಿ ಬ್ರೆಝಾ ಬಿಡುಗಡೆಗೆ ಸಜ್ಜು..!

ಹೀಗಿರುವಾಗ ಬೆಂಗಳೂರು ಬಳಿಯಿರುವ ಬಿಡದಿಯಲ್ಲಿ ನೆಲೆಗೊಂಡಿರುವ ಟೊಯೊಟಾ ಸಂಸ್ಥೆಯ ಕಾರು ಉತ್ಪಾದನಾ ಘಟಕದಿಂದ ಸುಜುಕಿ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳಾದ ವಿಟಾರಾ ಬ್ರೆಝಾ ಮತ್ತು ಬಲೆನೊ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿನ ಡೀಲರ್ಸ್‌ಗಳಿಗೆ ಸರಬರಾಜು ಮಾಡಲು ನಿರ್ಧರಿಸಿದೆ.

7 ಸಾವಿರ ಕೋಟಿ ಹೂಡಿಕೆ
ಸದ್ಯ ಮಾರುಕಟ್ಟೆಯಲ್ಲಿ ಅತಿಹೆಚ್ಚು ಮಾರಾಟವಾಗುತ್ತಿರುವ ಬಲೆನೊ ಮತ್ತು ಬ್ರೆಝಾ ಕಾರುಗಳನ್ನು ಉತ್ಪಾದನೆ ಮಾಡಲು ಸಾಕಷ್ಟು ಸ್ಥಳಾವಕಾಶ ಬೇಕಿದ್ದು, ಇದಕ್ಕಾಗಿ ಟೊಯೊಟಾ ಘಟಕವನ್ನು ವಿಸ್ತರಣೆ ಮಾಡಲು ಸುಜುಕಿ ಸಂಸ್ಥೆಯು 1 ಬಿಲಿಯನ್ ಯುಎಸ್‌ ಡಾಲರ್( ಸುಮಾರು 7 ಸಾವಿರ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಿದೆ.

ಜೊತೆಗೆ ಸುಜುಕಿ ಕಾರುಗಳನ್ನು ಉತ್ಪಾದನೆ ಮಾಡಲು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಲಿರುವ ಟೊಯೊಟಾ ಸಂಸ್ಥೆಯು ಸುಜುಕಿ ಸಂಸ್ಥೆಯ ಉದ್ಯೋಗಿಗಳ ಜೊತೆಗೂಡಿ ಕಾರ್ಯನಿರ್ವಹಣೆ ಮಾಡಲಿದೆ.

ಒಟ್ಟಿನಲ್ಲಿ ಕಾರು ಉತ್ಪಾದಕ ದಿಗ್ಗಜರು ಇದೀಗ ಒಂದಾಗಿದ್ದು, ಹೊಸ ಉತ್ಪನ್ನಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದು ಮಾಡಲಿವೆ. ಜೊತೆಗೆ ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

Most Read Articles

Kannada
Read more on ಟೊಯೊಟಾ toyota
English summary
Toyota To Launch Re-badged Maruti Vitara Brezza in 2020-21. Read in Kannda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X