ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಹೊಸ ವಾಹನಗಳ ಮಾರಾಟ ಪ್ರಮಾಣವು ಕಳೆದ ಕೆಲ ತಿಂಗಳಿನಿಂದ ತೀವ್ರ ಕುಸಿತ ಕಾಣುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ನಷ್ಟದ ಸುಳಿಗೆ ಸಿಲುಕಿವೆ. ಇಲ್ಲದೇ ಕಾರು ಮಾರಾಟವನ್ನೇ ನಂಬಿಕೊಂಡಿರುವ ಅಧಿಕೃತ ಡೀಲರ್ಸ್‌ಗಳು ಕದ ಮುಚ್ಚುವ ಅತಂತ್ರ ಸ್ಥಿತಿಯಲ್ಲಿದ್ದು, ಡೀಲರ್ಸ್ ಮಟ್ಟದಲ್ಲೇ ಬರೋಬ್ಬರಿ 2 ಲಕ್ಷ ಉದ್ಯೋಗಗಳು ಕಡಿತಗೊಂಡಿವೆ ಎನ್ನಲಾಗಿದೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಕಳೆದ 18 ವರ್ಷಗಳಲ್ಲೇ ಮೊದಲ ಬಾರಿಗೆ ಭಾರತೀಯ ಆಟೋ ಉದ್ಯಮ ಭಾರೀ ಹಿನ್ನಡೆ ಅನುಭವಿಸಿದ್ದು, ಬಹುತೇಕ ಆಟೋ ಉದ್ಯಮ ಸಂಸ್ಥೆಗಳು ಕನಿಷ್ಠ ಮಟ್ಟದ ಹೊಸ ವಾಹನಗಳ ಮಾರಾಟಕ್ಕೆ ಪರದಾಡುತ್ತಿವೆ. 2019ರ ಆರಂಭದಿಂದ ಹೊಸ ವಾಹನಗಳ ಮಾರಾಟದಲ್ಲಿ ಗರಿಷ್ಠ ಇಳಿಕೆ ದಾಖಲಾಗುತ್ತಿದ್ದು, ಇದುವರೆಗೂ ಆಟೋ ಉದ್ಯಮವು ಚೇತರಿಕೆ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಟೋ ಉದ್ಯಮವನ್ನೇ ನಂಬಿಕೊಂಡಿದ್ದ ಬೀಡಿಭಾಗಗಳ ತಯಾರಿಕಾ ಸಂಸ್ಥೆಗಳು ಮತ್ತು ಅಧಿಕೃತ ಮಾರಾಟ ಮಳಿಗೆಗಳು ಸಂಕಷ್ಟದಲ್ಲಿವೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಹೊಸ ವಾಹನಗಳ ಮಾರಾಟದಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಸದ್ಯ ಆರ್ಥಿಕವಾಗಿ ಹೊರೆಯಾಗಿರುವ ಸ್ಟಾಕ್ ಕ್ಲಿಯೆರೆನ್ಸ್‌ಗಾಗಿ ಹರಸಾಹಸ ಪಡುತ್ತಿದ್ದು, ಹೊಸ ಉತ್ಪಾದನಾ ಪ್ರಕ್ರಿಯೆಯು ಕೂಡಾ ಕುಂಟುತ್ತಾ ಸಾಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟದಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಹ್ಯುಂಡೈ, ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ಕಾರುಗಳ ಉತ್ಪಾದನ್ನು ತಾತ್ಕಾಲಿಕವಾಗಿ ಬಂದ್ ಮಾಡಿವೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

2019ರ ಅವಧಿಯಲ್ಲಿ ಭಾರತೀಯ ಆಟೋ ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಜಾರಿಗೆ ತರಲಾಗಿದ್ದು, ಇದು ಕೆಲವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇದರಿಂದ ಮಾರಾಟವಾಗದೇ ಉಳಿದ ಸ್ಟಾಕ್ ಇದೀಗ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಹೊರೆಯಾಗಿ ಪರಿಣಮಿಸಿದ್ದು, ಬಹುತೇಕ ಆಟೋ ಸಂಸ್ಥೆಗಳು ತಮ್ಮ ಹೊಸ ವಾಹನಗಳ ಉತ್ಪಾದನೆಯನ್ನ ತಾತ್ಕಾಲಿಕವಾಗಿ ಬಂದ್ ಮಾಡಿ ಸ್ಟಾಕ್ ಕರಗಿಸಲು ಪ್ರಯತ್ನದಲ್ಲಿವೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ದೇಶಿಯ ಮಾರುಕಟ್ಟೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು 2019ರ ಆರಂಭದಿಂದಲೇ ಹೊಸ ವಾಹನಗಳ ಮಾರಾಟದಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಮೇ, ಜೂನ್ ಮತ್ತು ಜುಲೈ ಅವಧಿಯಲ್ಲಿ ಅತಿ ಹೆಚ್ಚು ಹಿನ್ನಡೆಯಾಗಿದೆ. ಮಾಹಿತಿಗಳ ಪ್ರಕಾರ, ಶೇ. 20.5 ರಷ್ಟು ಹೊಸ ಪ್ಯಾಸೆಂಜರ್ ವಾಹನಗಳ ಮಾರಾಟ ಪ್ರಮಾಣವು ಕುಸಿತ ಕಂಡಿದ್ದು, 2001ರಿಂದ ಇದು ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಮಾರಾಟ ಕುಸಿತ ದಾಖಲಾಗಿದೆ. ಹೀಗಾಗಿ ಸ್ಟಾಕ್ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದ್ದು, ಬೀಡಿಭಾಗಗಳನ್ನು ಪೂರೈಕೆ ಮಾಡುವ ಸಾವಿರಾರು ಸಂಸ್ಥೆಗಳಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವಂತಾಗಿದೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

2018ರ ಮೇ ಅವಧಿಯಲ್ಲಿ ದೇಶಾದ್ಯಂತ 3,01,238 ಹೊಸ ಪ್ಯಾಸೆಂಜರ್ ವಾಹನಗಳು ಮಾರಾಟವಾಗಿದ್ದರೆ ಅದೇ 2019ರ ಮೇ ಅವಧಿಯಲ್ಲಿ 2,39,347 ಹೊಸ ಪ್ಯಾಸೆಂಜರ್ ವಾಹನಗಳು ಮಾತ್ರವೇ ಮಾರಾಟವಾಗುವ ಮೂಲಕ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಮತ್ತು ಹೊಸ ವಾಹನಗಳ ಖರೀದಿ ಮೇಲೆ ಜಾರಿ ಮಾಡಲಾದ ಕೆಲವು ಹೊಸ ನಿಯಮಗಳಿಂದಾಗಿ ವಾಹನಗಳ ಖರೀದಿ ಪ್ರಕಿಯೆಗೆ ಪ್ರತಿಕೂಲಕರ ವಾತಾವರಣ ನಿರ್ಮಾಣವಾಗಿದ್ದರಿಂದ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ನಿಗದಿತ ಮಟ್ಟದ ಗುರಿ ಮುಟ್ಟಲು ಸಾಧ್ಯವಾಗದೇ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಮಾರಾಟವಾಗದೇ ಉಳಿದಿರುವ ಸ್ಟಾಕ್ ಪ್ರಮಾಣವನ್ನು ಕರಗಿಸಲು ಕೆಲವು ಕಠಿಣ ನಿರ್ಣಯಗಳನ್ನು ತಗೆದುಕೊಳ್ಳುತ್ತಿವೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಮಾಹಿತಿಗಳ ಪ್ರಕಾರ, ಸುಮಾರು ರೂ.35 ಸಾವಿರ ಕೋಟಿ ಮೌಲ್ಯದ ಹೊಸ ಕಾರುಗಳು ಮತ್ತು 15 ಸಾವಿರ ಕೋಟಿ ಮೌಲ್ಯದ ಹೊಸ ಬೈಕ್‌ಗಳ ಸ್ಟಾಕ್ ಪ್ರಮಾಣವು ಮಾರಾಟವಾಗದೆ ಆರ್ಥಿಕವಾಗಿ ಹೊರೆಯಾಗಿ ಪರಿಣಮಿಸಿದ್ದು, ಸ್ಟಾಕ್ ಪ್ರಮಾಣವನ್ನು ತೆರೆವುಗೊಳಿಸಲು ಭಾರೀ ಪ್ರಮಾಣದ ಆಫರ್‌ಗಳನ್ನು ನೀಡಿ ಗ್ರಾಹಕರನ್ನು ಸೆಳೆಯಲಾಗುತ್ತಿದೆ.

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಸದ್ಯ ಮಾರುಕಟ್ಟೆಯಲ್ಲಿ ಲೋಕಸಭಾ ಚುನಾವಣೆ ನಂತರ ಹೊಸ ವಾಹನಗಳ ಮಾರಾಟ ಪ್ರಕ್ರಿಯೆಯಲ್ಲಿ ಚೇತರಿಕೆ ಕಂಡುಬರುತ್ತಿದ್ದರೂ ಸಹ ಸ್ಟಾಕ್ ಪ್ರಮಾಣ ಮಾತ್ರ ಹಾಗೆಯೇ ಇದೆ. ಈ ನಿಟ್ಟಿನಲ್ಲಿ ಬಹುತೇಕ ಕಾರು ಸಂಸ್ಥೆಗಳು ವಿವಿಧ ಮಾದರಿಯ ಆಫರ್ ನೀಡುವ ಮೂಲಕ ಮಾರಾಟದ ಸಂಖ್ಯೆಗಳನ್ನು ಹೆಚ್ಚಿಸುವತ್ತ ಗಮನಹರಿಸಿದ್ದು, ದ್ವಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆಗಳು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.

MOST READ: ಕಾರ್ ರೀಪೆರಿಗೆ 3 ಲಕ್ಷ ಕೇಳಿದ್ದ ಡೀಲರ್ಸ್ ಅಸಲಿಯತ್ತು ಬಯಲಾಗಿದ್ದು ಲೋಕಲ್ ಗ್ಯಾರೇಜ್‌ನಲ್ಲಿ..!

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಹೀಗಾಗಿಯೇ ಸದ್ಯಕ್ಕೆ ಹೊಸ ಕಾರು ಮತ್ತು ಬೈಕ್‌ಗಳ ಉತ್ಪಾದನೆಯನ್ನು ತಾತ್ಕಲಿಕವಾಗಿ ಬಂದ್ ಮಾಡಲು ನಿರ್ಧರಿಸಿರುವ ಆಟೋ ಉತ್ಪಾದನಾ ಸಂಸ್ಥೆಗಳು ಈ ಹಿಂದಿನಂತೆಯೇ ಕಠಿಣ ಕ್ರಮ ಕೈಗೊಂಡಿದ್ದು, ಮಾರುಕಟ್ಟೆಯ ಚೇತರಿಕೆ ನಂತರವಷ್ಟೇ ಮತ್ತೆ ಉತ್ಪಾದನೆಯನ್ನು ಶುರು ಮಾಡಲಿವೆ. ತದನಂತರವಷ್ಟೇ ಆಟೋ ಉದ್ಯಮವು ಸಹಜ ಸ್ಥಿತಿಯತ್ತ ಮರಳಲಿದ್ದು, ಹೊಸ ಮಾರಾಟ ಸುಧಾರಿಸಿಕೊಳ್ಳಲು ಮುಂದಿನ ಎರಡರಿಂದ ಮೂರು ತಿಂಗಳ ಕಾಲ ಸಮಯಾವಕಾಶ ಬೇಕು ಎನ್ನಲಾಗುತ್ತಿದೆ.

MOST READ: ಎಕ್ಸ್‌ಪ್ರೆಸ್‌ವೇಗಳಲ್ಲಿ ಎದುರಾಗುವ ಅಪಾಯಕಾರಿ ಸಂಗತಿಗಳಿವು..!

ಹೊಸ ಕಾರು ಮಾರಾಟದಲ್ಲಿ ಕುಸಿತ- ಬಹುತೇಕ ಡೀಲರ್ಸ್‌ಗಳು ಬಣಬಣ..!

ಇದರೊಂದಿಗೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನ ಮಾರಾಟ ನಿಷೇಧವಾಗಿ ಬಿಎಸ್-6 ನಿಯಮವು ಜಾರಿಗೆ ಬರಲಿದ್ದು, ಈ ಹಿನ್ನೆಲೆಯಲ್ಲೂ ಕೂಡಾ ಬಹುತೇಕ ಗ್ರಾಹಕರು ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ವಾಹನಗಳನ್ನು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಬಿಎಸ್-6 ವಾಹನ ಖರೀದಿಯ ಯೋಜನೆಯಲ್ಲಿರುವುದರಿಂದ ವಾಹನ ಉತ್ಪಾದನಾ ಸಂಸ್ಥೆಗಳು ಸಹ ಎಚ್ಚರಿಕೆಯ ಹೆಜ್ಜೆಯೊಂದಿಗೆ ಸ್ಟಾಕ್ ಪ್ರಮಾಣವನ್ನು ಮುಂದುವರಿಸುತ್ತಿವೆ.

Most Read Articles

Kannada
English summary
Around two lakh jobs have been cut across automobile dealerships in India in the last three months as vehicle retailers take the last resort of cutting manpower to tide over the impact of the unprecedented sales slump, according to industry body FADA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more