ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಸಾರ್ವಜನಿಕ ಸಾರಿಗೆ ವಲಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಒತ್ತು ನೀಡುತ್ತಿದ್ದು, ಮಹೀಂದ್ರಾ ಸಂಸ್ಥೆಯು ಈ ನಿಟ್ಟಿನಲ್ಲಿ ಇತರೆ ಆಟೋ ಉತ್ಪಾದನಾ ಸಂಸ್ಥೆಗಳಿಂತಲೂ ಒಂದು ಹೆಜ್ಜೆ ಮುಂದಿಟ್ಟಿದೆ. ಜನಪ್ರಿಯ ಆ್ಯಪ್ ಆಧಾರಿತ ಕ್ಯಾಬ್ ಸೇವೆ ಒದಗಿಸುವ ಉಬರ್ ಜೊತೆಗೂಡಿಗೂಡಿರುವ ಮಹೀಂದ್ರಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸಿದ್ದು, ಮಾಲಿನ್ಯ ಮುಕ್ತ ನಗರಗಳನ್ನಾಗಿಸಲು ಬೃಹತ್ ಯೋಜನೆಯೊಂದಕ್ಕೆ ಹಸಿರುವ ನಿಶಾನೆ ತೋರಿದೆ.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಹೌದು, ಮಹೀಂದ್ರಾ ಸಂಸ್ಥೆಯು ಕ್ಯಾಬ್ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಉಬರ್ ಜೊತೆಗೂಡಿ ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು, ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವ ಉದ್ದೇಶದಿಂದ ಕ್ಯಾಬ್ ಸೇವೆಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿವೆ. ಮೊದಲ ಹಂತವಾಗಿ ಉಬರ್ ಸಂಸ್ಥೆಗೆ 50 ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸಿರುವ ಮಹೀಂದ್ರಾ ಸಂಸ್ಥೆಯು ಕ್ಯಾಬ್ ಸೇವೆಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಳಕೆಯತ್ತ ದಿಟ್ಟ ಹೆಜ್ಜೆಯಿಟ್ಟಿದೆ.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

2017ರಲ್ಲಿ ಮಹೀಂದ್ರಾ ಮತ್ತು ಉಬರ್ ಸಂಸ್ಥೆಯ ನಡುವೆ ಆಗಿರುವ ಹೊಸ ಒಪ್ಪಂದದ ಪ್ರಕಾರ, ಕ್ಯಾಬ್ ಸೇವೆಗಳಿಗಾಗಿ 50 ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಾಗಿದ್ದು, ಹೈದ್ರಾಬಾದ್‌ನಲ್ಲಿ ನಿನ್ನೆಯಷ್ಟೇ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಸೇವೆಗೆ ಚಾಲನೆ ನೀಡಲಾಯ್ತು.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಎಲೆಕ್ಟ್ರಿಕ್ ಕಾರುಗಳನ್ನು ಒದಗಿಸುವ ಯೋಜನೆಯ ಮೊದಲ ಹಂತವಾಗಿ 50 ಕಾರುಗಳಿಗೆ ಮಾತ್ರವೇ ಚಾಲನೆ ನೀಡಿರುವ ಮಹೀಂದ್ರಾ ಮತ್ತು ಉಬರ್ ಸಂಸ್ಥೆಯು ಮುಂದಿನ ಕೆಲವೇ ದಿನಗಳಲ್ಲಿ ದೇಶದ ಇತರೆ ನಗರಗಳಲ್ಲೂ ಎಲೆಕ್ಟ್ರಿಕ್ ಕಾರುಗಳ ಕ್ಯಾಬ್ ಸೇವೆಗೆ ಚಾಲನೆ ನೀಡಲಿದ್ದು, ಹೊಸ ಯೋಜನೆಯ ಭಾಗವಾಗಿ 1 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಇನ್ನು ಮಹೀಂದ್ರಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಇ2ಒ ಮತ್ತು ಇ-ವೆರಿಟೊ ಕಾರುಗಳಿಂತೂ ಅತ್ಯುತ್ತಮ ದರ್ಜೆಯ ಎಲೆಕ್ಟ್ರಿಕ್ ಆವೃತ್ತಿಗಳನ್ನು ಬಿಡುಗಡೆಗೊಳಿಸುತ್ತಿರುವ ಮಹೀಂದ್ರಾ ಸಂಸ್ಥೆಯು ಮುಂದಿನ ಕೆಲವೇ ದಿನಗಳಲ್ಲಿ ಕೆಯುವಿ100 ಮತ್ತು ಎಕ್ಸ್‌ಯುವಿ 300 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಮಹೀಂದ್ರಾ ಸಂಸ್ಥೆಯು ಇದೇ ವರ್ಷ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಕೆಯುವಿ100 ಎಲೆಕ್ಟ್ರಿಕ್ ವರ್ಷನ್ ಪರಿಚಯಿಸುವ ಯೋಜನೆಯಲ್ಲಿದ್ದು. ತದನಂತರ ಸ್ಯಾಂಗ್‌ಯ್ಯಾಂಗ್ ಜೊತೆಗೂಡಿ ನಿರ್ಮಾಣ ಮಾಡಲಾಗಿರುವ ವಿನೂತನ ಕಂಪ್ಯಾಕ್ಟ್ ಎಸ್‌ಯುವಿ ಎಲೆಕ್ಟ್ರಿಕ್ ಮಾದರಿಯನ್ನು ಹೊರತರುವ ಯೋಜನೆಯಲ್ಲಿದೆ.

MOST READ: ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಮಹೀಂದ್ರಾ ಮತ್ತು ಸ್ಯಾಂಗ್‌ಯಾಂಗ್ ಸಂಸ್ಥೆಯು ಸದ್ಯ ಹೊಸ ಕಾರಿನ ಹೆಸರನ್ನು ಬಹಿರಂಗ ಮಾಡಿಲ್ಲವಾದರೂ ಹೊಸ ಕಾರಿಗೆ ಎಸ್201 ಎನ್ನುವ ಕೋಡ್‍‌ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಕಳೆದ ಫೆಬ್ರುವರಿ 14 ರಂದು ಬಿಡುಗಡೆಯಾದ ಎಕ್ಸ್‌ಯುವಿ300 ಹೆಸರನ್ನೇ ಹೊಸ ಎಲೆಕ್ಟ್ರಿಕ್ ಕಾರಿಗೂ ಮುಂದುವರಿಸುವ ಸಾಧ್ಯತೆಗಳಿವೆ.

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಕಡಿಮೆ ದರದಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಸುಳಿವು ನೀಡಿರುವ ಮಹೀಂದ್ರಾ ಎಕ್ಸ್‌ಯುವಿ 300 ಎಲೆಕ್ಟ್ರಿಕ್ ಕಾರಿನ ತಾಂತ್ರಿಕ ಮಾಹಿತಿಯನ್ನು ಹಂಚಿಕೊಂಡಿದ್ದು, 450 ಕಿ.ಮೀಟರ್‌ನಿಂದ 500 ಕಿ.ಮಿ ಮೈಲೇಜ್ ಸಾಮರ್ಥ್ಯದ ಬ್ಯಾಟರಿ ಒದಗಿಸುವುದಾಗಿ ಭರವಸೆ ನೀಡಿದೆ.

MOST READ: ಹೆಲ್ಮೆಟ್‌ಗೂ ಬಂತೂ ವೈಪರ್, ಐಡಿಯಾ ಸೂಪರ್ರೋ ಸೂಪರ್..!

ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಇದಕ್ಕಾಗಿಯೇ ದಕ್ಷಿಣ ಕೊರಿಯಾದ ಎಲ್‌ಜಿ ಕೆಮಿಕಲ್ಸ್ ಸಂಸ್ಥೆಯೊಂದಿಗೆ ಕೈಜೋಡಿಸಿರುವ ಮಹೀಂದ್ರಾ ಸಂಸ್ಥೆಯು ಸ್ಮಾರ್ಟ್ ಲೀಥಿಯಂ-ಅಯಾನ್ ಬ್ಯಾಟರಿ ಉತ್ಪಾದನೆಗಾಗಿ ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದು, ಮಹೀಂದ್ರಾ ಸಂಸ್ಥೆಯ ಎಲೆಕ್ಟ್ರಿಕ್ ಕಾರುಗಳಿಗಾಗಿ ಎಲ್‌ಜಿ ಕೆಮೆಕಲ್ಸ್‌ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿಗಳನ್ನು ನಿರ್ಮಾಣ ಮಾಡಲಿದೆ.

Most Read Articles

Kannada
English summary
Uber Deploys Mahindra Electric Cars As Taxis In Hyderabad; Other Major Cities To Be Covered Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X