ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ದೇಶಾದ್ಯಂತ ಸದ್ಯ ಅತಿ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಗ್ರಾಹಕರು ಎದುರು ನೋಡುತ್ತಿದ್ದು, ಆಟೋ ಉತ್ಪಾದನಾ ಸಂಸ್ಥೆಗಳು ಸಹ ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಹಲವು ಹೊಸ ಯೋಜನೆಗಳನ್ನು ರೂಪಿಸುತ್ತಿವೆ. ಹೀಗಾಗಿ ಮಾರುಕಟ್ಟೆಯಲ್ಲಿ ಗ್ರಾಹಕರ ನೀರಿಕ್ಷೆಗೆ ತಕ್ಕಂತೆ ಕೈಗೆಟುಕುವ ಬೆಲೆಗಳಲ್ಲಿ ಖರೀದಿಗೆ ಲಭ್ಯವಾಗಲಿರುವ ಕೆಲವು ಪ್ರಮುಖ ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಭಾರತದಲ್ಲಿ ಸದ್ಯ ಮಹೀಂದ್ರಾ ಸಂಸ್ಥೆ ಮಾತ್ರ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುತಿ ಸುಜುಕಿ, ಹ್ಯುಂಡೈ, ನಿಸ್ಸಾನ್, ಎಂಜಿ ಮೋಟಾರ್ ಸಂಸ್ಥೆಗಳು ಸಹ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಲಿವೆ. ಇವುಗಳಲ್ಲಿ ಕೆಲವು ದುಬಾರಿ ಬೆಲೆಯೊಂದಿಗೆ ಉತ್ತಮ ಮೈಲೇಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯ ಹೊಂದಲಿದ್ದು, ಇನ್ನು ಕೆಲವು ಕಾರು ಮಾದರಿಗಳು ಕೈಗೆಟುಕುವ ಬೆಲೆಗಳೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯಬಲ್ಲವು.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದಲ್ಲಿ ಈಗಾಗಲೇ ಮುಂಚೂಣಿ ಸಾಧಿಸಿರುವ ದೇಶದ ಏಕೈಕ ಸಂಸ್ಥೆಯಾದ ಮಹೀಂದ್ರಾ ಸದ್ಯದಲ್ಲೇ ಮತ್ತಷ್ಟು ವಿನೂತನ ಎಲೆಕ್ಟ್ರಿಕ್ ಕಾರುಗಳನ್ನು ಹೊರತರುವ ಯೋಜನೆಯಲ್ಲಿದ್ದು, ದಕ್ಷಿಣ ಕೊರಿಯಾದ ಆಟೋ ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಒಂದನ್ನು ಸಿದ್ದಗೊಳಿಸಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಮಹೀಂದ್ರಾ ಮತ್ತು ಸ್ಯಾಂಗ್‌ಯಾಂಗ್ ಸಂಸ್ಥೆಯು ಸದ್ಯ ಹೊಸ ಕಾರಿನ ಹೆಸರನ್ನು ಬಹಿರಂಗ ಮಾಡಿಲ್ಲವಾದರೂ ಹೊಸ ಕಾರಿಗೆ ಎಸ್201 ಎನ್ನುವ ಕೋಡ್‍‌ನೆಮ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಕಳೆದ ತಿಂಗಳು ಬಿಡುಗಡೆಯಾದ ಎಕ್ಸ್‌ಯುವಿ300 ಹೆಸರನ್ನೇ ಹೊಸ ಎಲೆಕ್ಟ್ರಿಕ್ ಕಾರಿಗೂ ಮುಂದುವರಿಸುವ ಸಾಧ್ಯತೆಗಳಿವೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಎಸ್201 ಹೆಸರಿನ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಮಾಹಿತಿಯನ್ನು ಹಂಚಿಕೊಂಡಿರುವ ಮಹೀಂದ್ರಾ ಸಂಸ್ಥೆಯು ಎಲ್ಲಾ ವರ್ಗದವರನ್ನು ಸೆಳೆಯಬಹುದಾದ ಬೆಲೆಗಳ ಮೂಲಕ ಪ್ರತಿ ಚಾರ್ಜ್‌ಗೆ 350ಕಿ.ಮಿ ಮತ್ತು400 ಕಿ.ಮಿ ಮೈಲೇಜ್ ಸಾಮರ್ಥ್ಯದ ಬ್ಯಾಟರಿ ಒದಗಿಸುವ ಬಗ್ಗೆ ಸುಳಿವು ನೀಡಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಹೀಗಾಗಿ ಹೊಸ ಎಸ್201 ಎಲೆಕ್ಟ್ರಿಕ್ ಕಾರಿನ ಬೆಲೆಯು ರೂ. 14 ಲಕ್ಷದಿಂದ ರೂ.18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿಗೆ ಇದು ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಹ್ಯುಂಡೈ ಕೊನಾ

ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಈಗಾಗಲೇ ಮಾಹಿತಿ ಬಿಚ್ಚಿಟ್ಟಿದ್ದು, ಮೊದಲ ಹಂತವಾಗಿ ಕೊನಾ ಇವಿ ಕಾರು ಭಾರತೀಯ ರಸ್ತೆಗಳಲ್ಲಿ ಭಾರೀ ಜನಪ್ರಿಯತೆ ಸಾಧಿಸುವ ನಿರೀಕ್ಷೆಯಲ್ಲಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೊನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

39.2 ಕೆವಿ ಬ್ಯಾಟರಿ ಪ್ರೇರಿಕ ಕೊನಾ ಕಾರುಗಳು ಪೂರ್ಣಪ್ರಮಾಣದಲ್ಲಿ ಚಾರ್ಜಿಂಗ್‌ಗೊಳ್ಳಲು 6 ತಾಸು 10 ನಿಮಿಷ ಸಮಯ ತೆಗೆದುಕೊಳ್ಳವುದಲ್ಲದೇ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್‌ ಮಾಡಬಹುದು. ಹಾಗೆಯೇ 64 ಕೆವಿ ಬ್ಯಾಟರಿ ಪ್ರೇರಿತ ಕೊನಾ ಕಾರುಗಳು ಸಹ ಪೂರ್ಣಪ್ರಮಾಣದ ಚಾರ್ಜಿಂಗ್‌ಗಾಗಿ 9 ತಾಸು 40 ನಿಮಿಷ ಸಮಯ ತೆಗೆದುಕೊಂಡರೇ, ಕೆವಲ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್ ಮಾಡಬಹುದು.

MOST READ: ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಸದ್ಯಕ್ಕೆ ಹೊಸ ಕೊನಾ ಕಾರುಗಳನ್ನು ಸಿಕೆಡಿ ಮೂಲಕ ಆಮದು ಮಾಡಿಕೊಂಡು ಚೆನ್ನೈನಲ್ಲಿ ಕಾರು ಉತ್ಪಾದನಾ ಘಟಕದಲ್ಲಿ ಬಿಡಿಭಾಗಗಳ ಜೋಡಣೆ ನಡೆಯಲಿದ್ದು, ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಎಂಜಿ ಮೋಟಾರ್ ಇಜೆಡ್ಎಸ್

ದೇಶದ ಆಟೋಮೊಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಭಾರೀ ಬದಲಾವಣೆ ಕಂಡುಬರುತ್ತಿದ್ದು, ಹೊಸ ಹೊಸ ಕಾರು ಉತ್ಪಾದನಾ ಸಂಸ್ಥೆಗಳು ಭಾರತದಲ್ಲಿ ತಮ್ಮ ಜನಪ್ರಿಯ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿವೆ. ಇವುಗಳಲ್ಲಿ ಎಂಜಿ (ಮೊರಿಸ್ ಗ್ಯಾರೆಜ್) ಮೋಟಾರ್ ಕೂಡಾ ಒಂದು.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಯುರೋಪ್ ಮಾರುಕಟ್ಟೆಯಲ್ಲಿ 1924ರಿಂದಲೇ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆ ನಷ್ಟದ ಸುಳಿಯಲ್ಲಿದ್ದ ಬ್ರಿಟಿಷ್ ಆಟೋ ಉತ್ಪಾದನಾ ಸಂಸ್ಥೆಯನ್ನು ಚೀನಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಎಸ್‌ಎಐಸಿ( SAIC) ಸಂಸ್ಥೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಭಾರತದಲ್ಲಿ ಮೊದಲ ಬಾರಿಗೆ ತನ್ನ ಕಾರು ಉತ್ಪನ್ನಗಳನ್ನು ಮಾರಾಟಕ್ಕೆ ಸಿದ್ದವಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು 2019ರ 2ನೇ ತ್ರೈಮಾಸಿಕ ಅವಧಿಗೆ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಈಗಾಗಲೇ ಹೊಸ ಯೋಜನೆ ರೂಪಿಸಿದ್ದು, 2020ರ ಆರಂಭದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಇಜೆಡ್ಎಸ್ ಬಿಡುಗಡೆ ಮಾಡಲಿದೆ.

ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್- ಭಾರೀ ಸದ್ದು ಮಾಡಲಿವೆ ಈ ಮೂರು ಎಲೆಕ್ಟ್ರಿಕ್ ಕಾರುಗಳು..!

ಇಜೆಡ್ಎಸ್ ಕಾರು ಈಗಾಗಲೇ ಚೀನಿ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಎರಡು ಮಾದರಿಯ ಮೈಲೇಜ್ ರೇಂಜ್‌ ಪ್ರೇರಣೆಯ ಬ್ಯಾಟರಿ ಸೌಲಭ್ಯಗಳನ್ನು ಹೊಂದಿದೆ. ಹೀಗಾಗಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರತಿ ಚಾರ್ಜ್‌ಗೆ 300ಕಿ.ಮಿ ಮತ್ತು ಹೈ ಎಂಡ್ ಮಾದರಿಯ ಪ್ರತಿ ಚಾರ್ಜ್‌ಗೆ 420 ಕಿ.ಮಿ ಮೈಲೇಜ್ ಹೊಂದಿದ್ದು, ಮೈಲೇಜ್ ಆಧಾರದ ಮೇಲೆ ಕಾರಿನ ಬೆಲೆಯು ರೂ.18 ಲಕ್ಷದಿಂದ ರೂ.25 ಲಕ್ಷ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Upcoming Electric SUV Cars In India: Mahindra S210, Hyundai Kona, MG EZS- Expected Price, Features. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X