ದೀಪಾವಳಿ ವಿಶೇಷ: ಫೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್
ದಸರಾ ನಂತರ ದೀಪಾವಳಿ ಸಂಭ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದ್ದು, ಕಾರು ಮಾರಾಟ ಸಂಸ್ಥೆಗಳು ಸಹ ಇದೇ ಸಂದರ್ಭದಲ್ಲಿ ಗರಿಷ್ಠ ಪ್ರಮಾಣದ ಗ್ರಾಹಕರನ್ನು ಸೆಳೆಯುವ ಉದ್ದೇಶದೊಂದಿಗೆ ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿವೆ.

ಜನಪ್ರಿಯ ಕಾರು ಮಾರಾಟ ಸಂಸ್ಥೆಗಳಲ್ಲಿ ಒಂದಾಗಿರುವ ಫೋಕ್ಸ್‌ವ್ಯಾಗನ್ ಕೂಡಾ ತನ್ನ ಜನಪ್ರಿಯ ಕಾರು ಮಾದರಿಗಳಾದ ಪೊಲೊ, ಆ್ಯಮಿಯೊ ಮತ್ತು ವೆಂಟೊ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.80 ಲಕ್ಷದ ತನಕ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ದೀಪಾವಳಿ ವಿಶೇಷತೆಗಾಗಿ ಫೋಕ್ಸ್‌ಫೆಸ್ಟ್' ಹಮ್ಮಿಕೊಂಡಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಭರ್ಜರಿ ಡಿಸ್ಕೌಂಟ್ ಜೊತೆಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ.

ಫೋಕ್ಸ್‌ವ್ಯಾಗನ್ ಸಂಸ್ಥೆಯು ಹಮ್ಮಿಕೊಂಡಿರುವ ಫೋಕ್ಸ್‌ಫೆಸ್ಟ್ ಕಾರು ಮಾರಾಟ ಉತ್ಸವವು ಸೆಪ್ಟೆಂಬರ್ 29ರಿಂದಲೇ ಆರಂಭವಾಗಿದ್ದು, ಅಕ್ಟೋಬರ್ 31ರ ತನಕ ಡಿಸ್ಕೌಂಟ್ ಬೆಲೆಗಳಲ್ಲಿ ಕಾರು ಖರೀದಿಗೆ ಲಭ್ಯವಿರುತ್ತದೆ. ಹಾಗಾದ್ರೆ ಯಾವ ಕಾರಿನ ಮೇಲೆ ಎಷ್ಟು ಡಿಸ್ಕೌಂಟ್ ಎನ್ನುವ ಮಾಹಿತಿ ಇಲ್ಲಿ ತಿಳಿಯಿರಿ..

ಪೊಲೊ(1.11 ಲಕ್ಷ)
ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಉತ್ತಮ ಬೇಡಿಕೆ ಹೊಂದಿರುವ ಪೊಲೊ ಕಾರಿನ ಮೇಲೆ ಫೋಕ್ಸ್‌ವ್ಯಾಗನ್ ಸಂಸ್ಥೆಯು 1.11 ಲಕ್ಷ ಡಿಸ್ಕೌಂಟ್ ನೀಡುತ್ತಿದ್ದು, ಡೀಸೆಲ್ ವೆರಿಯೆಂಟ್ ಖರೀದಿಯ ಮೇಲೆ ಹೆಚ್ಚುವರಿಯಾಗಿ 5 ವರ್ಷಗಳ ಕಾಲ ವಾರಂಟಿ ಸೌಲಭ್ಯವನ್ನು ಘೋಷಿಸಿದೆ.

ಪೊಲೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.44 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್‌ನೊಂದಿಗೆ ಫೈವ್ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಹಾಗೆಯೇ ಪರ್ಫಾಮೆನ್ಸ್ ಪ್ರಿಯರಿಗಾಗಿ ಪೊಲೊ ಜಿಟಿಯಲ್ಲಿ 1.2-ಲೀಟರ್ ಪೆಟ್ರೋಲ್ ಟರ್ಬೋ ಎಂಜಿನ್ ಕೂಡಾ ಖರೀದಿಗೆ ಲಭ್ಯವಿದ್ದು, 1.5-ಲೀಟರ್ ಡೀಸೆಲ್ ಎಂಜಿನ್ ಖರೀದಿಗೆ ಲಭ್ಯವಿದೆ.

ಆ್ಯಮಿಯೊ( 1.47 ಲಕ್ಷ)
ಸೆಡಾನ್ ಕಾರು ಮಾದರಿಯಾದ ಆ್ಯಮಿಯೊ ಖರೀದಿ ಮೇಲೆ ಫೋಕ್ಸ್‌ವ್ಯಾಗನ್ ಸಂಸ್ಥೆಯು ರೂ.1.47 ಲಕ್ಷದ ತನಕ ಗರಿಷ್ಠ ಡಿಸ್ಕೌಂಟ್ ನೀಡುತ್ತಿದ್ದು, ಡೀಸೆಲ್ ವೆರಿಯೆಂಟ್ ಖರೀದಿಯ ಮೇಲೆ ಹೆಚ್ಚುವರಿಯಾಗಿ 5 ವರ್ಷಗಳ ಕಾಲ ವಾರಂಟಿ ಸೌಲಭ್ಯ ಸಿಗಲಿದೆ.

ಕಂಪ್ಯಾಕ್ಟ್ ಸೆಡಾನ್ ಮಾದರಿಯಾಗಿರುವ ಆ್ಯಮಿಯೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.5.29 ಲಕ್ಷ ಬೆಲೆ ಹೊಂದಿದ್ದು, 1.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

ವೆಂಟೊ(ರೂ.1.80 ಲಕ್ಷ)
ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಲ್ಲಿ ಒಂದಾಗಿರುವ ವೆಂಟೊ ಕಾರಿನ ಮೇಲೆ ಫೋಕ್ಸ್‌ವ್ಯಾಗನ್ ಸಂಸ್ಥೆಯು ರೂ.1.80 ಲಕ್ಷ ಡಿಸ್ಕೌಂಟ್ ನೀಡುತ್ತಿದ್ದು, ಡೀಸೆಲ್ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 5 ವರ್ಷಗಳ ಕಾಲ ವಾರಂಟಿ ಸೌಲಭ್ಯ ಲಭ್ಯವಿದೆ.

ವೆಂಟೊ ಕೂಡಾ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.8.76 ಲಕ್ಷ ಆರಂಭಿಕ ಬೆಲೆಯೊಂದಿಗೆ ಮೂರು ಎಂಜಿನ್ ಆಯ್ಕೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.6-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

ಇದರೊಂದಿಗೆ ಫೋಕ್ಸ್‌ವ್ಯಾಗನ್ ಸಂಸ್ಥೆಯು ಪ್ರತಿ ಕಾರು ಮಾದರಿ ಮೇಲೂ ಫಾರ್ ಎವರ್ ಕೇರ್ ಪ್ಯಾಕೇಜ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತಿದ್ದು, ಪೆಟ್ರೋಲ್ ಮಾದರಿಗಿಂತಲೂ ಡೀಸೆಲ್ ಕಾರುಗಳನ್ನು ಖರೀದಿಸುವ ಗ್ರಾಹಕರಿಗೆ ವಿಸ್ತರಿತ ವಾರಂಟಿ, ನಾಲ್ಕು ವರ್ಷಗಳ ಉಚಿತ ರೋಡ್ ಸೈಡ್ ಅಸ್ಟಿಸ್ಟ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








