ಸ್ಪಾಟ್ ಟೆಸ್ಟ್‌ನಲ್ಲಿ ಕಂಡು ಬಂದ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ
ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟಿ-ರಾಕ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯನ್ನು ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸುವ ಮೊದಲು ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿದೆ.

ಫೋಕ್ಸ್‌ವ್ಯಾಗನ್‍ನ ಹೊಸ ಟಿ-ರಾಕ್ ಮಾದರಿಯು ಮಧ್ಯಮ ಗಾತ್ರದ ಎಸ್‍ಯುವಿ ಸೆಗ್‍ಮೆಂಟ್‍ನಲ್ಲಿರಲಿದೆ. ಈ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ಸ್ಕೋಡಾ ಕರೋಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡಲಿದೆ.

ಜರ್ಮನಿ ಮೂಲದ ಫೋಕ್ಸ್‌ವ್ಯಾಗನ್ ಕಂಪನಿಯಿಂದ ಎಸ್‍ಯುವಿಯನ್ನು ಆರಂಭದಲ್ಲಿ ಸಿಬಿಯು(ಕಂಪ್ಲೀಟ್ ಬಿಲ್ಟ್ ಯುನಿಟ್) ಮಾರ್ಗದ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುವುದು.

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರವನ್ನು ಟೀಮ್-ಬಿಹೆಚ್‍ಪಿ ಬಹಿರಂಗಪಡಿಸಿದೆ. ಈ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೊದಲು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಈ ಎಸ್‍ಯುವಿಯ ವಿನ್ಯಾಸದ ಕೆಲವು ಅಂಶಗಳು ಬಹಿರಂಗವಾಗಿವೆ.

ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದ ಎಸ್‍ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ಈ ಎಸ್‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍ಟೇಕ್ ಅನ್ನು ಹೊಂದಿದೆ.

ಮುಂಭಾಗದಲ್ಲಿ ಎಲ್‍ಇಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್ ಲೈಟ್‍ಗಳನ್ನು ಹೊಂದಿದೆ.

ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍ಗಳನ್ನು ಹೊಂದಿದೆ. ಎಸ್‍ಯುವಿ ಸೈಡ್ ವ್ಹೀಲ್‍ಗಳನ್ನು ಹೊಂದಿದೆ. ಫೋಕ್ಸ್ ವ್ಯಾಗನ್ ಟಿ-ರಾಕ್ ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರದಲ್ಲಿ ಇಂಟಿರಿಯರ್‍ನ ಮಾಹಿತಿಗಳು ಬಹಿರಂಗವಾಗಿಲ್ಲ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಆದರೆ ಅಂತರರಾಷ್ಟ್ರೀಯ ಸ್ಪೆಕ್ ಹಲವಾರು ಫೀಚರ್ಸ್‍ಗಳನ್ನು ಹೊಂದಿದೆ. ಅದರಲ್ಲಿರುವ ಹೆಚ್ಚಿನ ಫೀಚರ್ಸ್‍ಗಳನ್ನು ಭಾರತದಲ್ಲಿ ಬಿಡುಗಡೆಯಾಗುವ ಮಾದರಿಯಲ್ಲಿ ಅಳವಡಿಸುವ ಸಾಧ್ಯತೆಗಳಿವೆ. ಫೋಕ್ಸ್‌ವ್ಯಾಗನ್ ಟಿ-ರಾಕ್ ಇಂಟಿರಿಯರ್‍ನಲ್ಲಿ 11.3 ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗುತ್ತದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಈ ಎಸ್‍ಯುವಿ 8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇದರೊಂದಿಗೆ ಆಲ್-ಬ್ಲ್ಯಾಕ್ ಡ್ಯಾಶ್‍ಬೋರ್ಡ್ ಮತ್ತು ಕ್ಯಾಬಿನ್ ಅನ್ನು ಹೊಂದಿದೆ. ಈ ಎಸ್‍ಯುವಿ ಸೀಟುಗಳ ಮೇಲೆ ಕಾಂಟ್ರಾಸ್ಟ್ ಸ್ಟಿಚಿಂಗ್ ಮತ್ತು ಸೆಂಟ್ರಲ್ ಕನ್ಸೋಲ್ ಮತ್ತು ಡೋರ್ ಪ್ಯಾನೆಲ್‍ಗಳನ್ನು ಹೊಂದಿದೆ.
MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಭಾರತದಲ್ಲಿ ಬಿಡುಗಡೆಯಾಗಲಿರುವ ಫೋಕ್ಸ್‌ವ್ಯಾಗನ್ ಟಿ-ರಾಕ್ ಮಾದರಿಯು 1.5 ಲೀಟರ್ ಟರ್ಬೋಚಾರ್ಜ್ಡ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗುವುದು.

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯು ಹೊಸ ಇಂಡಿಯಾ 2.0 ಯೋಜನೆಯ ಭಾಗವಾಗಿದೆ. ಕಂಪನಿಯು ಈ ಯೋಜನೆಯಲ್ಲಿ ಹಲವಾರು ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಅದರಲ್ಲಿ ಟಿ-ರಾಕ್ ಮೊದಲನೇಯದಾಗಿದೆ. ಈ ಯೋಜನೆಯಲ್ಲಿ ಸ್ಕೋಡಾ ಕಂಪನಿಯ ಕಾರುಗಳು ಕೂಡ ಸೇರಿವೆ.


Click it and Unblock the Notifications








