2020ರ ಆಟೋ ಎಕ್ಸ್‌ಪೋ ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್
ಫೋಕ್ಸ್‌ವ್ಯಾಗನ್ ಸಂಸ್ಥೆಯು ಅಂತಾರಾಷ್ಛ್ರೀಯ ಮಟ್ಟದಲ್ಲಿ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದ್ದರೂ ಕೂಡಾ ಭಾರತದಲ್ಲಿ ಮಾತ್ರ ತೀವ್ರ ಪೈಪೋಟಿ ಎದುರಿಸುತ್ತಿದೆ. ಹೀಗಾಗಿ ತನ್ನ ಕಾರು ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ವಿನೂತನ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಯೋಜನೆ ರೂಪಿಸಿದೆ.

ಫೋಕ್ಸ್‌ವ್ಯಾಗನ್ ಸಂಸ್ಥೆಯು ಸದ್ಯ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, 'ಇಂಡಿಯಾ 2.0 ಪ್ರೋಜೆಕ್ಟ್' ಎನ್ನುವ ಬೃಹತ್ ಯೋಜನೆ ಒಂದನ್ನು ಸಿದ್ದಪಡಿಸಿದೆ. ಇದರ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಗೆ ವಹಿಸಿಕೊಟ್ಟಿದ್ದು, ಮುಂಬರುವ ಫೋಕ್ಸ್‌ವ್ಯಾಗನ್ ಸಂಸ್ಥೆಯ ಪ್ರತಿಯೊಂದು ಕಾರು ಮಾದರಿಯು ಸಹ ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಮಾಹಿತಿಗಳ ಪ್ರಕಾರ, ಫೋಕ್ಸ್‌ವ್ಯಾಗನ್ ಸಂಸ್ಥೆಯು ಸ್ಕೋಡಾ ಜೊತೆಗೂಡಿ ಭಾರತದಲ್ಲಿ ವಿವಿಧ ಮಾದರಿಯ ಐದು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಇವುಗಳಲ್ಲಿ ಕೆಲವು ಕಾರುಗಳು ಭಾರತದಲ್ಲೇ ಉತ್ಪಾದನೆಯಾಗಲಿದ್ದಲ್ಲಿ ಇನ್ನು ಕೆಲವು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

ಇವುಗಳಲ್ಲಿ ಟಿ-ರಾಕ್ ಎನ್ನುಮ ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ಭಾಗಿ ನಂತರ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಂಡು ಈ ಕಾರನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಕೇಂದ್ರ ಸರ್ಕಾರವು ಕಳೆದ ವರ್ಷ ಆಮದು ನೀತಿಯಲ್ಲಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದು, ಭಾರತದಲ್ಲಿ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳು ಪ್ರತಿ ವರ್ಷ 2,500 ವಾಹನಗಳನ್ನು ವಿದೇಶಿ ಮಾರುಕಟ್ಟೆಗಳಿಂದ ಯಾವುದೇ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳಬಹುದು ಎಂದಿದೆ. ಹೀಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತ್ಯತ್ತಮ ಬೇಡಿಕೆ ಹೊಂದಿರುವ ಟಿ-ರಾಕ್ ಕಾರನ್ನು ಭಾರತದಲ್ಲೂ ಬಿಡುಗಡೆ ಮಾಡಲಾಗುತ್ತಿದೆ.

ಹೀಗಾಗಿ ಭಾರತದಲ್ಲಿ ಕಾರು ಉತ್ಪಾದನಾ ಘಟಕ ಹೊಂದಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕೆಲವು ವಾಹನ ಮಾದರಿಗಳನ್ನು ಭಾರತದಲ್ಲೂ ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ಫೋರ್ಕ್ಸ್‌ವ್ಯಾಗನ್ ಕೂಡಾ ಟಿ-ರಾಕ್ ಕಾರನ್ನು ಆಮದು ಮಾಡಿಕೊಂಡು ಬಿಡುಗಡೆಗೊಳಿಸುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಮತ್ತು ಕಿಯಾ ಸೆಲ್ಟೊಸ್ ಕಾರಿಗೆ ಸರಿಸಮನಾದ ವೀಲ್ಹ್‌ಬೆಸ್ ಮತ್ತು ಉದ್ದಳತೆಯನ್ನು ಹೊಂದಿರುವ ಟಿ-ರಾಕ್ ಕಾರು 2.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.
MOST READ: ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಆದ್ರೆ ಟಿ-ರಾಕ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಒದಗಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು, 2015ರಲ್ಲಿ ನಡೆದ ಡೀಸೆಲ್ ಎಂಜಿನ್ ಹಗರಣವು ಫೋಕ್ಸ್‌ವ್ಯಾಗನ್ ಸಂಸ್ಥೆಗೆ ಭಾರೀ ಪ್ರಮಾಣದ ಹೊಡೆತ ನೀಡಿತ್ತು. ಹೀಗಾಗಿ ಡೀಸೆಲ್ ಎಂಜಿನ್ ಬಗ್ಗೆ ಹೆಚ್ಚು ಗಮನಹರಿಸದ ಫೋರ್ಕ್ಸ್‌ವ್ಯಾಗನ್ ಸಂಸ್ಥೆಯು ಪೆಟ್ರೋಲ್ ಎಂಜಿನ್ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.
MOST READ: ಮಾಲಿನ್ಯ ತಡೆಗೆ ಹೊಸ ಉಪಕರಣ ಅಭಿವೃದ್ಧಿಪಡಿಸಿದ ಐಐಟಿ ಎಂಜಿನಿಯರ್

ಹೀಗಾಗಿ ಭಾರತದಲ್ಲಿ ಟಿ-ರಾಕ್ ಕಾರು ಪೆಟ್ರೋಲ್ ಎಂಜಿನ್‌ನೊಂದಿಗೆ ಅತ್ಯುತ್ತಮ ಡ್ರೈವ್ ಟೆಕ್ನಾಲಜಿ ಹೊಂದಿರಲಿದ್ದು, 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 4x4 ಡ್ರೈವ್ ಟ್ರೈನ್ ಸೇರಿದಂತೆ ಹಲವಾರು ಪ್ರೀಮಿಯಂ ಫಿಚರ್ಸ್‌ಗಳನ್ನು ಹೊಂದಿರಲಿದೆ.
MOST READ: ಈ ತಪ್ಪುಗಳನ್ನು ಮಾಡಿದರೆ ಲೈಸೆನ್ಸ್ ಕಳೆದುಕೊಳ್ಳಬೇಕಾಗುತ್ತೆ..!

ಇದರಿಂದ ಹೊಸ ಕಾರಿನ ಬೆಲೆಗಳು ಕೂಡಾ ತುಸು ದುಬಾರಿ ಎನ್ನಿಸಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.17 ಲಕ್ಷ ಬೆಲೆ ಪಡೆದುಕೊಳ್ಳಬಹುದು ಅಂದಾಜಿಸಲಾಗಿದೆ.

ಇನ್ನು ಭಾರತದಲ್ಲಿ ಸ್ಕೋಡಾ ಸಂಸ್ಥೆಗೆ ತನ್ನ ಹೊಸ ಕಾರು ಮಾದರಿಗಳ ಅಭಿವೃದ್ಧಿ ಯೋಜನೆಯ ಜವಾಬ್ದಾರಿ ವಹಿಸಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಕಡಿಮೆ ಬೆಲೆಯಲ್ಲಿ ಕಾರುಗಳನ್ನು ತಯಾರಿಸಿ ಭಾರೀ ಪ್ರಮಾಣದ ಆದಾಯ ಗಳಿಕೆಯ ತವಕದಲ್ಲಿದ್ದು, ಜಂಟಿಯಾಗಿ ಕಾರು ಉತ್ಪಾದನೆಗಾಗಿ ತೆರೆಯಲಾಗಿರುವ MQB ಎನ್ನುವ ಪ್ಲ್ಯಾಟ್‌ಫಾರ್ಮ್ ಮಾದರಿಯು ಕಾರುಗಳ ನಿರ್ಮಾಣ ವೆಚ್ಚವನ್ನು ತಗ್ಗಿಸಲು ಸಾಕಷ್ಟು ಸಹಕಾರಿಯಾಗಲಿದೆ.


Click it and Unblock the Notifications








