Just In
- 4 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 5 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 7 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯುಂಡೈ ವೆನ್ಯೂ ಕಾರಿನಲ್ಲಿ 1.0-ಲೀಟರ್ ಟರ್ಬೋ ಮಾದರಿಗೆ ಭರ್ಜರಿ ಬೇಡಿಕೆ
2019 ಮೇ ಅವಧಿಯಲ್ಲಿ ಬಿಡುಗಡೆಗೊಂಡಿದ್ದ ಹ್ಯುಂಡೈ ಕಂಪನಿಯ ಹೊಸ ವೆನ್ಯೂ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಬಿಡುಗಡೆಯಾದ ಕೆಲವೇ ತಿಂಗಳ ಅವಧಿಯಲ್ಲಿ 1 ಲಕ್ಷಕ್ಕೂ ಅಧಿಕ ಕಾರು ಮಾರಾಟ ದಾಖಲೆ ಕಂಡಿದ್ದು, ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ಟರ್ಬೋ ಎಂಜಿನ್ ಮಾದರಿಗೆ ಅತಿ ಹೆಚ್ಚು ಗ್ರಾಹಕರು ಬೇಡಿಕೆ ಸಲ್ಲಿಸಿದ್ದಾರೆ.
ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವೆನ್ಯೂ ಮಾದರಿಯಲ್ಲಿ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಮತ್ತು ತಾಂತ್ರಿಕವಾಗಿ ಬಲಿಷ್ಠ ಕಾರು ಮಾದರಿಯಾಗಿದೆ. ಹೀಗಾಗಿ ಸಾಕಷ್ಟು ಗ್ರಾಹಕರು ಬೆಲೆ ದುಬಾರಿಯಾಗಿದ್ದರೂ ಸಹ ಟಾಪ್ ಎಂಡ್ ಮಾದರಿಯ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹ್ಯುಂಡೈ ಕಂಪನಿಗೂ ಇದು ಭಾರೀ ಪ್ರಮಾಣದ ಲಾಭ ತಂದುಕೊಟ್ಟಿದೆ.
ವೆನ್ಯೂ ಕಾರು ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 5 ವೆರಿಯೆಂಟ್ಗಳಲ್ಲಿ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.11.50 ಲಕ್ಷ ಬೆಲೆ ಪಡೆದುಕೊಂಡಿದೆ.
ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್, ಎಸ್ಎಕ್ಸ್(0) ಮತ್ತು ಎಸ್ಎಕ್ಸ್ ಪ್ಲಸ್ ವೆರಿಯೆಂಟ್ಗಳಲ್ಲಿ ಹೊಸ ವೆನ್ಯೂ ಕಾರು ಖರೀದಿಗೆ ಲಭ್ಯವಿದೆ.
ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಬಿಎಸ್-4 ಎಂಜಿನ್ ಹೊಂದಿದ್ದ ವೆನ್ಯೂ ಕಾರು ಇದೀಗ ಹೊಸ ಎಮಿಷನ್ ನಿಯಮದಂತೆ ಬಿಎಸ್-6 ಎಂಜಿನ್ ಆಯ್ಕೆ ಹೊಂದಿದ್ದು, 1.2-ಲೀಟರ್ ಕಪ್ಪಾ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಜೋಡಣೆ ಮಾಡಲಾಗಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಬಿಎಸ್-4 ಎಂಜಿನ್ ಆಯ್ಕೆಯಲ್ಲಿ 1.2-ಲೀಟರ್ ಪೆಟ್ರೋಲ್, 1.4-ಲೀಟರ್ ಡೀಸೆಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದ ವೆನ್ಯೂ ಕಾರಿನಲ್ಲಿ ಬಿಎಸ್-6 ಎಮಿಷನ್ ಕಡ್ಡಾಯ ನಂತರ 1.4-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸದಾಗಿ ಅಭಿವೃದ್ದಿಪಡಿಸಲಾಗಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಯ್ತು.
ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಪವರ್ಪುಲ್ ಎಂಜಿನ್ ಆಯ್ಕೆ ಹೊಂದಿರುವ ವೆನ್ಯೂ ಕಾರಿನಲ್ಲಿ 1.0-ಲೀಟರ್ ಟರ್ಬೋ ಮಾದರಿಯು ಅತಿ ಹೆಚ್ಚು ಬೇಡಿಕೆಯ ವೆರಿಯೆಂಟ್ ಆಗಿ ಹೊರಹೊಮ್ಮಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 118-ಬಿಎಚ್ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..
ಇನ್ನುಳಿದ 1.2-ಲೀಟರ್ ಕಪ್ಪಾ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 82-ಬಿಎಚ್ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 99-ಬಿಎಚ್ಪಿ, 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಇನ್ನುಳಿದಂತೆ ತಾಂತ್ರಿಕವಾಗಿ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿರುವ ವೆನ್ಯೂ ಕಾರು 33 ಫೀಚರ್ಸ್ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಸಹ ಹೊಂದಿದ್ದು, ಹೊಸ ಕಾರಿಗೆ ಗರಿಷ್ಠ ಭದ್ರತೆಯನ್ನು ದೊರೆಯಲಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.