ಇವಿ ವಾಹನಗಳಿಗೆ ಬೇಡಿಕೆ ಹೆಚ್ಚಳ- ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಚಾಲಿತ ವಾಹನಗಳಿಂದ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆಯಾಗುತ್ತಿದ್ದು, ಮಾಲಿನ್ಯ ತಗ್ಗಿಸಲು ನಿಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ನಿಯಮ ಜಾರಿಗೆ ತರುತ್ತಿವೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಸದ್ಯ ಮಾರುಕಟ್ಟೆಯಲ್ಲಿ ವಿನೂತನ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳೇ ಹೆಚ್ಚಿನ ಮಟ್ಟದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟವನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಇದೀಗ ಭಾರೀ ಬದಲಾವಣೆಗೆ ಕಾರಣವಾಗಿದ್ದರೂ ನೀರಿಕ್ಷಿತ ಮಟ್ಟದಲ್ಲಿ ಇವಿ ವಾಹನಗಳಿಗೆ ಬೇಡಿಕೆ ಹರಿದುಬರುತ್ತಿಲ್ಲ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೂ ಮುಂದಾದರೂ ಇವಿ ವಾಹನಗಳ ಬ್ಯಾಟರಿ ರೇಂಜ್ ಮತ್ತು ಸಾರ್ವಜನಿಕ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯು ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಹೊಸ ಯೋಜನೆಗೆ ಹಸಿರು ನಿಶಾನೆ ತೋರಿದೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಎಲೆಕ್ಟ್ರಿಕ್ ವಾಹನಗಳ ಖರೀದಿಸುವ ಗ್ರಾಹಕರಿಗೆ ಸೂಕ್ತ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಕರ್ನಾಟಕ ಸರ್ಕಾರವು ನಮ್ಮ ಬೆಂಗಳೂರಿನಲ್ಲಿ ಬರೋಬ್ಬರಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಕಳೆದ ವರ್ಷವೇ ಆಯ್ದ ಪ್ರದೇಶಗಳಲ್ಲಿ ಕೆಲವೇ ಕೆಲವು ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದ್ದ ಕರ್ನಾಟಕ ಸರ್ಕಾರವು ಈ ಬಾರಿ ಒಟ್ಟು 112 ಸಾರ್ವಜನಿಕ ಚಾರ್ಜಿಂಗ್ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಿದ್ದು, ಖಾಸಗಿ ಕಂಪನಿಗಳ ಸಹಭಾಗಿತ್ವದ ನಿರ್ವಹಣೆಯೊಂದಿಗೆ ಬೆಸ್ಕಾಂ ಕಂಪನಿಯು ವಿದ್ಯುತ್ ಪೂರೈಕೆ ಮಾಡಲಿದೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ನಗರದ ಆಯಕಟ್ಟಿನ ಪ್ರದೇಶಗಳಾದ ಬೆಸ್ಕಾಂ ಆವರಣ, ಬಿಡಿಎ ಕಾಂಪ್ಲೆಕ್ಸ್, ಸಿಟಿ ಸಿವಿಕ್ ವಾರ್ಡ್ ಆಫೀಸ್, ಆರ್‌ಟಿಓ ಕಚೇರಿ, ಕೆಎಸ್‌ಆರ್‌ಟಿಸಿ ಟರ್ಮಿನಲ್‌‌ ಆವರಣದಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಅಳವಡಿಸಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಆಧಾರದ 12 ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು 100 ಎಸಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗಿದೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಎಸಿ ಚಾರ್ಜಿಂಗ್ ನಿಲ್ದಾಣಗಳಲ್ಲಿ ಪ್ರತಿ ಯುನಿಟ್‌ಗೆ ರೂ.7.30 ಪೈಸೆ ನಿಗದಿ ಮಾಡಿದ್ದಲ್ಲಿ ಡಿಸಿ ಚಾರ್ಜ್ ಪ್ರತಿ ಯೂನಿಟ್‌ಗೆ ರೂ.7.42 ಪೈಸೆ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಮಾಡಿದ್ದಲ್ಲಿ ಪ್ರತಿ ಯೂನಿಟ್‌ಗೆ ರೂ.7.99 ಪೈಸೆ ನಿಗದಿ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಇನ್ನು ಭಾರತವು ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳು 2030ಕ್ಕೆ ಶೇ.100ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ಹೊಂದಿದ್ದು, ಭವಿಷ್ಯದ ಗುರಿಗಾಗಿ ಈಗಿನಿಂದಲೇ ಹಲವಾರು ಕಠಿಣ ಕ್ರಮಗಳ ಮೂಲಕ ಹಂತ-ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ತಗ್ಗಿಸುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಖರೀದಿದಾರರನ್ನು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್-2 ಯೋಜನೆ ಅಡಿ ಈಗಾಗಲೇ ಕೇಂದ್ರ ಸರ್ಕಾರ ಮೂರು ವರ್ಷಗಳ ಅವಧಿಗಾಗಿ(2019-21) ರೂ. 10 ಸಾವಿರ ಕೋಟಿ ವಿನಿಯೊಗಿಸುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್

ಇದರಿಂದ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯು ಮತ್ತೊಂದು ಹಂತದ ಬೆಳವಣಿಗೆ ಕಾರಣವಾಗಲಿದ್ದು, ಫೇಮ್2 ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾಡುವ ಕಂಪನಿಗಳಿಗೆ ಮಾತ್ರವಲ್ಲ ಎಲೆಕ್ಟಿಕ್ ವಾಹನ ಖರೀದಿಸುವ ವಾಹನ ಸವಾರರಿಗೂ ಗರಿಷ್ಠ ಸಬ್ಸಡಿ, ಜಿಎಸ್‌ಟಿ ವಿನಾಯ್ತಿ, ತೆರಿಗೆ ವಿನಾಯ್ತಿ ನೀಡಲಾಗುತ್ತಿದೆ.

Most Read Articles

Kannada
English summary
112 EV Charging Stations Set Up In Bengaluru. Read in Kannada.
Story first published: Thursday, July 23, 2020, 14:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X