Just In
Don't Miss!
- Finance
ಪ್ರತಿ ಲೀಟರ್ ಪೆಟ್ರೋಲ್- ಡೀಸೆಲ್ ಗೆ ನೀವು ನೀಡುವ ಬೆಲೆಯಲ್ಲಿ 48% ಕೇಂದ್ರದ ಸುಂಕ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Sports
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ನೀಡಿದ ಪ್ರದರ್ಶನ ಅಸಾಮಾನ್ಯ: ಮೈಕಲ್ ವಾನ್
- Movies
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇವಿ ವಾಹನಗಳಿಗೆ ಬೇಡಿಕೆ ಹೆಚ್ಚಳ- ನಮ್ಮ ಬೆಂಗಳೂರಿನಲ್ಲಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಗ್ರೀನ್ ಸಿಗ್ನಲ್
ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಚಾಲಿತ ವಾಹನಗಳಿಂದ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆಯಾಗುತ್ತಿದ್ದು, ಮಾಲಿನ್ಯ ತಗ್ಗಿಸಲು ನಿಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ನಿಯಮ ಜಾರಿಗೆ ತರುತ್ತಿವೆ.

ಸದ್ಯ ಮಾರುಕಟ್ಟೆಯಲ್ಲಿ ವಿನೂತನ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳೇ ಹೆಚ್ಚಿನ ಮಟ್ಟದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟವನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಇದೀಗ ಭಾರೀ ಬದಲಾವಣೆಗೆ ಕಾರಣವಾಗಿದ್ದರೂ ನೀರಿಕ್ಷಿತ ಮಟ್ಟದಲ್ಲಿ ಇವಿ ವಾಹನಗಳಿಗೆ ಬೇಡಿಕೆ ಹರಿದುಬರುತ್ತಿಲ್ಲ.

ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೂ ಮುಂದಾದರೂ ಇವಿ ವಾಹನಗಳ ಬ್ಯಾಟರಿ ರೇಂಜ್ ಮತ್ತು ಸಾರ್ವಜನಿಕ ಚಾರ್ಜಿಂಗ್ ಸ್ಟೆಷನ್ಗಳ ಕೊರತೆಯು ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಹೊಸ ಯೋಜನೆಗೆ ಹಸಿರು ನಿಶಾನೆ ತೋರಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಸುವ ಗ್ರಾಹಕರಿಗೆ ಸೂಕ್ತ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಕರ್ನಾಟಕ ಸರ್ಕಾರವು ನಮ್ಮ ಬೆಂಗಳೂರಿನಲ್ಲಿ ಬರೋಬ್ಬರಿ 112 ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ಕಳೆದ ವರ್ಷವೇ ಆಯ್ದ ಪ್ರದೇಶಗಳಲ್ಲಿ ಕೆಲವೇ ಕೆಲವು ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದ್ದ ಕರ್ನಾಟಕ ಸರ್ಕಾರವು ಈ ಬಾರಿ ಒಟ್ಟು 112 ಸಾರ್ವಜನಿಕ ಚಾರ್ಜಿಂಗ್ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಿದ್ದು, ಖಾಸಗಿ ಕಂಪನಿಗಳ ಸಹಭಾಗಿತ್ವದ ನಿರ್ವಹಣೆಯೊಂದಿಗೆ ಬೆಸ್ಕಾಂ ಕಂಪನಿಯು ವಿದ್ಯುತ್ ಪೂರೈಕೆ ಮಾಡಲಿದೆ.

ನಗರದ ಆಯಕಟ್ಟಿನ ಪ್ರದೇಶಗಳಾದ ಬೆಸ್ಕಾಂ ಆವರಣ, ಬಿಡಿಎ ಕಾಂಪ್ಲೆಕ್ಸ್, ಸಿಟಿ ಸಿವಿಕ್ ವಾರ್ಡ್ ಆಫೀಸ್, ಆರ್ಟಿಓ ಕಚೇರಿ, ಕೆಎಸ್ಆರ್ಟಿಸಿ ಟರ್ಮಿನಲ್ ಆವರಣದಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಅಳವಡಿಸಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಆಧಾರದ 12 ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು 100 ಎಸಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗಿದೆ.

ಎಸಿ ಚಾರ್ಜಿಂಗ್ ನಿಲ್ದಾಣಗಳಲ್ಲಿ ಪ್ರತಿ ಯುನಿಟ್ಗೆ ರೂ.7.30 ಪೈಸೆ ನಿಗದಿ ಮಾಡಿದ್ದಲ್ಲಿ ಡಿಸಿ ಚಾರ್ಜ್ ಪ್ರತಿ ಯೂನಿಟ್ಗೆ ರೂ.7.42 ಪೈಸೆ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಮಾಡಿದ್ದಲ್ಲಿ ಪ್ರತಿ ಯೂನಿಟ್ಗೆ ರೂ.7.99 ಪೈಸೆ ನಿಗದಿ ಮಾಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇನ್ನು ಭಾರತವು ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳು 2030ಕ್ಕೆ ಶೇ.100ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ರಸ್ತೆಗಿಳಿಸುವ ಯೋಜನೆ ಹೊಂದಿದ್ದು, ಭವಿಷ್ಯದ ಗುರಿಗಾಗಿ ಈಗಿನಿಂದಲೇ ಹಲವಾರು ಕಠಿಣ ಕ್ರಮಗಳ ಮೂಲಕ ಹಂತ-ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ತಗ್ಗಿಸುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಖರೀದಿದಾರರನ್ನು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್-2 ಯೋಜನೆ ಅಡಿ ಈಗಾಗಲೇ ಕೇಂದ್ರ ಸರ್ಕಾರ ಮೂರು ವರ್ಷಗಳ ಅವಧಿಗಾಗಿ(2019-21) ರೂ. 10 ಸಾವಿರ ಕೋಟಿ ವಿನಿಯೊಗಿಸುತ್ತಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇದರಿಂದ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯು ಮತ್ತೊಂದು ಹಂತದ ಬೆಳವಣಿಗೆ ಕಾರಣವಾಗಲಿದ್ದು, ಫೇಮ್2 ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾಡುವ ಕಂಪನಿಗಳಿಗೆ ಮಾತ್ರವಲ್ಲ ಎಲೆಕ್ಟಿಕ್ ವಾಹನ ಖರೀದಿಸುವ ವಾಹನ ಸವಾರರಿಗೂ ಗರಿಷ್ಠ ಸಬ್ಸಡಿ, ಜಿಎಸ್ಟಿ ವಿನಾಯ್ತಿ, ತೆರಿಗೆ ವಿನಾಯ್ತಿ ನೀಡಲಾಗುತ್ತಿದೆ.