ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಬಿಎಂಡಬ್ಲ್ಯೂ ಇಂಡಿಯಾ ಕಂಪನಿಯು ಹೊಸ ಎಕ್ಸ್6 ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲೂ ಎಕ್ಸ್6 ಎಸ್‌ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.95 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಹೊಸ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯು ಎಕ್ಸ್‌ಲೈನ್ ಮತ್ತು ಎಂ ಸ್ಪೋರ್ಟ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಮೂರನೇ ತಲೆಮಾರಿನ ಬಿಎಂಡಬ್ಲ್ಯೂ ಎಕ್ಸ್6 ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ಒಂದು ವರ್ಷದ ಹಿಂದೆ ಬಿಡುಗಡೆಗೊಳಿಸಿದ್ದರು. ಭಾರತಕ್ಕೆ ಎಕ್ಸ್6 ಎಸ್‍ಯುವಿಯನ್ನು ಸಿಬಿಯು ಮೂಲಕ ತರಲಾಗುತ್ತದೆ. ಭಾರತದಲ್ಲಿ ಈ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಬಿಎಂಡಬ್ಲ್ಯು ಗ್ರೂಪ್ ಇಂಡಿಯಾದ ಅಧ್ಯಕ್ಷರಾದ ಅರ್ಲಿಂಡೋ ಟೀಕ್ಸೀರಾ ಅವರು ಈ ಎಸ್‍ಯುವಿಯ ಬಗ್ಗೆ ಮಾತನಾಡಿ, ಈ ಮೂರನೇ ತಲೆಮಾರಿನ ಬಿಎಂಡಬ್ಲ್ಯು ಎಕ್ಸ್ 6 ಆಧುನಿಕ ಫೀಚರ್ ಗಳನ್ನು ಹೊಂದಿಕೊಂಡಿದೆ. ಈ ಹೊಸ ಎಸ್‍ಯುವಿಯು ಗ್ರಾಹಕರಿಗೆ ವಿಭಿನ್ನವಾದ ಚಾಲನಾ ಅನುಭವವನ್ನು ನೀಡುತ್ತದೆ ಎಂದು ಹೇಳಿದರು.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಹೊಸ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯ ವಿತರಣೆಯನ್ನು ಕೂಡ ಶೀಘ್ರದಲ್ಲೇ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ. ಮೂರನೇ ತಲೆಮಾರಿನ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯನ್ನು ಹಿಂದಿನ ಮಾದರಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

2020ರ ಬಿಎಂಡಬ್ಲ್ಯು ಎಕ್ಸ್6 ಎಸ್‍ಯುವಿಯು ಆಲ್ಪೈನ್ ವೈಟ್, ಕಾರ್ಬನ್ ಬ್ಲ್ಯಾಕ್, ಮಿನರಲ್ ವೈಟ್, ಫ್ಲಮೆಂಕೊ ರೆಡ್, ಸೋಫಿಸ್ಟೊ ಗ್ರೇ, ಬ್ಲ್ಯಾಕ್ ಸಫೈರ್, ಆರ್ಕ್ಟಿಕ್ ಗ್ರೇ ಮತ್ತು ಮ್ಯಾನ್‌ಹ್ಯಾಟನ್ ಮೆಟಾಲಿಕ್ ಎಂಬ ಒಟ್ಟು ಎಂಟು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಹೊಸ ಬಿಎಂಡಬ್ಲ್ಯೂ ಎಕ್ಸ್6 ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ ಹೆಡ್ ಲ್ಯಾಂಪ್ ಗಳನ್ನು ಹೊಂದಿದೆ. ಈ ಬಿಎಂಡಬ್ಲ್ಯೂ ಎಕ್ಸ್6 ನವೀಕರಿಸಿದ ಟೈಲ್ ಲೈಟ್ ಗಳು ಮತ್ತು ಡ್ಯುಯಲ್ ಎಕ್ಸಾಸ್ಟ್ ಅನ್ನು ಅಳವಡಿಸಿದ್ದಾರೆ. ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಬಿಎಂಡಬ್ಲ್ಯೂ ಎಕ್ಸ್6 ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಇದು ಕೂಪ್ ಎಸ್‍ಯುವಿಯು ಅದರೂ ಸಿಲೂಯೆಟ್ ಅನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಈ ಹೊಸ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯ ಇಂಟಿರಿಯರ್ ನಲ್ಲಿ ಮಸಾಜ್ ಫಂಕ್ಷನ್‌ನೊಂದಿಗೆ ಪವರ್-ಚಾಲಿತ ಸೀಟುಗಳು, ನಾಲ್ಕು ಮಾದರಿಯ ಕ್ಲೈಮೇಟ್ ಕಂಟ್ರೋಲ್ ಮತ್ತು ಪನೋರಮಿಕ್ ಸನ್‌ರೂಫ್ ಅನ್ನು ಹೊಂದಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಇದರೊಂದಿಗೆ ಇಂಟಿರಿಯರ್ ನಲ್ಲಿ ವಿಲ್ಕಿನ್ಸ್‌ನ ಪ್ರೀಮಿಯಂ ಆಡಿಯೊ ಸಿಸ್ಟಂ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ರ್ಯಾಂಡ್ ನ ಇತ್ತೀಚಿನ ಕನೆಕ್ಟಿವಿಟಿ ತಂತ್ರಜ್ಞಾನವಿರುವ ದೊಡ್ಡ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಸಹ ಹೊಂದಿದೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಹೊಸ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿಯಲ್ಲಿ 3.0-ಲೀಟರ್ ಆರು-ಸಿಲಿಂಡರ್ ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 340 ಬಿಹೆಚ್‍ಪಿ ಪವರ್ ಮತ್ತು 450 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಈ ಎಂಜಿನ್ ನೊಂದಿಗೆ 8-ಸ್ಪೀಡಿನ ಸ್ಟೆಪ್ಟ್ರಾನಿಕ್ ಸ್ಪೋರ್ಟ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಜಿಎಲ್ಇ ಕೂಪೆ ಮತ್ತು ಆಡಿ ಕ್ಯೂ8 ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ

Most Read Articles

Kannada
English summary
2020 BMW X6 Launched In India: Prices Start At Rs 95 Lakh. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X