ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ತನ್ನ ಎಂಟ್ರಿ ಲೆವೆಲ್ ರೆಡಿ ಗೋ ಫೇಸ್‍‍ಲಿಫ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಇದೀಗ ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಬಿಡುಗಡೆಗೂ ಮುನ್ನ ಡೀಲರ್ ಬಳಿ ಕಾಣಿಸಿಕೊಂಡಿದೆ.

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ಬಿಡುಗಡೆಗೊಳಿಸಿದ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಟೀಸರ್ ಚಿತ್ರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಡೀಲರ್ ಬಳಿ ಕಾಣಿಸಿಕೊಂಡ ಚಿತ್ರದಲ್ಲಿ ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ವಿನ್ಯಾಸವು ಸ್ಪಷ್ಟವಾಗಿ ಬಹಿರಂಗವಾಗಿದೆ. ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಸ್ಲೀಮರ್ ಹೆಡ್ ಲ್ಯಾಂಪ್ ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರು ಡೀಲರ್ ಬಳಿ ಕಾಣಿಸಿಕೊಂಡ ಚಿತ್ರವನ್ನು ಝ್ಹಿಗ್ ವ್ಹೀಲ್ಸ್ ಬಹಿರಂಗಪಡಿಸಿದೆ.

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಈ ಕಾರಿನ ಮುಂಭಾಗದಲ್ಲಿ ಕ್ರೋಮ್ ಸರೌಂಡ್ ನೊಂದಿಗೆ ದಟ್ಸನ್ ಲೋಗೊವನ್ನು ಅಳವಡಿಸಿದ್ದಾರೆ. ಹೊಸ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನಲ್ಲಿ ದೊಡ್ಡ ಎಲ್ ಆಕಾರದ ಡಿಆರ್‌ಎಲ್‌ಗಳು ಹೊಂದಿದೆ. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನಲ್ಲಿ ನವೀಕರಿಸಿದ ಅಲಾಯ್ ವ್ಹೀಲ್ ಅನ್ನು ಅಳವಡಿಸಿದ್ದಾರೆ.

MOST READ: ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ರೆಡಿ ಗೋ ಫೇಸ್‍ಲಿಫ್ಟ್ ಕಾರನ್ನು ಇತ್ತೀಚೆಗೆ ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿತ್ತು. ಈ ಹೊಸ ಕಾರಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೌಂಟಡ್ ಕಂಟ್ರೋಲ್ ಗಳೊಂದಿಗೆ ಹೊಸ ಸ್ಟೀಟಿಯರಿಂಗ್ ವ್ಹೀಕ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋವನ್ನು ಕನೆಕ್ಟಿವಿಟಿ ಹೊಂದಿರುವ ಎಂಟು ಇಂಚಿನ ಟಚ್ ಸ್ಕ್ರೀನ್ ಇನ್ಫೋಟೇಮೆಂಟ್ ಡಿಸ್ ಪ್ಲೇ ಅನ್ನು ಹೊಂದಿದೆ.

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಜಾರಿಗೆ ಬಂದ ಕ್ರ್ಯಾಶ್ ಟೆಸ್ಟ್ ನಿಯಮವನ್ನು ಅನುಸರಿಸಲು ಈ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಈ ರೆಡಿ ಗೋ ಕಾರು ಹೊಸ ಬಿ‍ಎಸ್-6 ಮಾಲಿನ್ಯ ನಿಯಮವನ್ನು ಅನುಸರಿಸಲು ಇದು 800ಸಿಸಿ ಮತ್ತು 1.0 ಲೀಟರ್ ಎಂಜಿನ್ ಅನ್ನು ನವೀಕರಿಸಲಾಗಿದೆ.

MOST READ: ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್‍ಯುವಿ

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ದಟ್ಸನ್ ರೆಡಿ ಗೋ ಕಾರು 0.8-ಲೀಟರ್ ಅಂದರೆ 799 ಸಿಸಿ ಅಥವಾ 1.0 ಲೀಟರ್ ಪೆಟ್ರೋಲ್ ಎಂಜಿನ್‍‍ಗಳನ್ನು ಹೊಂದಿದೆ. 799ಸಿಸಿ ಎಂಜಿನ್ 54 ಬಿಹೆಚ್‌ಪಿ ಹಾಗೂ 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.0 ಲೀಟರ್ ಎಂಜಿನ್ 68 ಬಿಹೆಚ್‌ಪಿ ಹಾಗೂ 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಎರಡೂ ಎಂಜಿನ್‌ಗಳಲ್ಲಿ ಸ್ಟಾಂಡರ್ಡ್ 5 ಸ್ಪೀಡ್ ಗೇರ್‌ಬಾಕ್ಸ್‌ಗೆ ಅಳವಡಿಸಲಾಗಿದೆ. 1.0ಲೀಟರ್ ಎಂಜಿನ್ ಹೆಚ್ಚುವರಿಯಾಗಿ ಸ್ಮಾರ್ಟ್ ಡ್ರೈವ್ ಆಟೋ ಟ್ರಾನ್ಸ್ ಮಿಷನ್ ಹೊಂದಿರಲಿದೆ. ದಟ್ಸನ್ ರೆಡಿ ಗೋ ಅತ್ಯುತ್ತಮವಾದ ಫ್ಯೂಯಲ್ ಎಫಿಶಿಯನ್ಸಿ ಅಂಕಿಅಂಶಗಳನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ಎಂಜಿನ್ ಅನ್ನು ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕವು ಹಳೆಯ ಮಾದರಿಯ ರೀತಿಯಲ್ಲೇ ಪವರ್ ಅನ್ನು ಉತ್ಪಾದಿಸಬಹುದು. ಹೊಸ ರೆಡಿ ಗೋ ಫೇಸ್‍‍ಲಿಫ್ಟ್ ಏರ್‍‍ಬ್ಯಾಗ್, ಇ‍‍ಬಿ‍‍ಡಿ ಹೊಂದಿರುವ ಎ‍‍ಬಿ‍ಎಸ್, ರೇರ್ ಪಾರ್ಕಿಂಗ್ ಅಸಿಸ್ಟ್ ಸೆನ್ಸಾರ್, ಹೈ ಸ್ಪೀಡ್ ವಾರ್ನಿಂಗ್, ಚಾಲಕ ಹಾಗೂ ಸಹ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ರಿಮ್ಯಾಂಡರ್‍‍ಗಳನ್ನು ಹೊಂದಿರಲಿದೆ.

ಡೀಲರ್ ಬಳಿ ಕಾಣಿಸಿಕೊಂಡ ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್

ದಟ್ಸನ್ ಕಂಪನಿಯು ರೆಡಿ ಗೋ ಫೇಸ್‍‍ಲಿಫ್ಟ್ ಕಾರನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ರೆನಾಲ್ಟ್ ಕ್ವಿಡ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Tuesday, May 26, 2020, 21:21 [IST]
English summary
Datsun Redi-GO Facelift Arrives At Dealerships Ahead Of Its Launch. Read In Kannada.
Read more on ದಟ್ಸನ್ datsun
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+