ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಸಿಟಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಹೊಸ ಹೋಂಡಾ ಸಿಟಿ ಕಾರು ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ.

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಐದನೇ ತಲೆಮಾರಿನ ಸಿಟಿ ಕಾರು ಸ್ಥಳೀಯ ಡೀಲರ್ ಬಳಿ ತಲುಪಿರುವ ಚಿತ್ರಗಳನ್ನು ಆಟೋಕಾರ್ ಇಂಡಿಯಾ ಬಹಿರಂಗಪಡಿಸಿದೆ. ಇತ್ತೀಚೆಗೆ ಹೋಂಡಾ ಕಂಪನಿಯು ಈ ಹೊಸ ಸಿಟಿ ಕಾರಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಜಪಾನ್ ಮೂಲದ ಹೋಂಡಾ ಕಂಪನಿಯು ಉತ್ತದ ಪ್ರದೇಶದ ನೋಯ್ಡಾದಲ್ಲಿರುವ ತನ್ನ ಸ್ಥಾವರದಲ್ಲಿಈ ಹೊಸ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದೆ. ಈ ಸಿಟಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳು ಬಿಡುಗಡೆಗೊಳಿಸಲು ಕಂಪನಿ ನಿರ್ಧರಿಸಿದೆ.

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಈ ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. 2020ರ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

MOST READ: ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

2020ರ ಹೋಂಡಾ ಸಿಟಿ ಕಾರಿನಲ್ಲಿ 1.5 ಎಲ್ ಐ-ವಿಟಿಇಸಿ ಡಿಒಹೆಚ್‌ಸಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 600 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಪವರ್ ಮತ್ತು 4,300 ಆರ್‌ಪಿಎಂನಲ್ಲಿ 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಇದರಲ್ಲಿ ಮ್ಯಾನುವಲ್ ಆವೃತಿಯು ಪ್ರತಿ ಲೀಟರ್‌ಗೆ 17.8 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು ಆಟೋಮ್ಯಾಟಿಕ್ ಆವೃತಿಯು ಪ್ರತಿ ಲೀಟರ್‌ಗೆ 18.4 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಇನ್ನು 2020ರ ಹೋಂಡಾ ಸಿಟಿ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 24.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ. ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಆರು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ಹಿಲ್-ಸ್ಟಾರ್ಟ್ ಅಸಿಸ್ಟ್, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಹೋಂಡಾದ ಲೇನ್‌ವಾಚ್ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, June 30, 2020, 19:11 [IST]
English summary
2020 Honda City Arrives At Dealerships Ahead Of Launch Next Month. Read In Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+