ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಹೋಂಡಾ ಸಿಟಿ ಕಾರು ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ರೂಪಾಂತರಗಳಲ್ಲಿ ಲಭ್ಯವಾಗಿರಲಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಭಾರತದಲ್ಲಿ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಮುಂದುವರಿಸಿರುವುದರಿಂದ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯು ಮತ್ತಷ್ಟು ತಡವಾಗಿದೆ. ಆದರೆ ಈ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಯಲಿ ಈ ತಿಂಗಳು ಬಿಡುಗಡೆಗೊಳಿಸುವ ಸಾದ್ಯತೆಗಳಿದೆ. ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,784 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. 2020ರ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವೆರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಮಾರುಕಟ್ಟೆಯಲ್ಲಿರುವ 1.5-ಲೀಟರ್ ಎಸ್‌ಒಹೆಚ್‌ಸಿ ಎಂಜಿನ್‌ಗಿಂತಲೂ ಇದು ಹೆಚ್ಚು ಪವರ್ ಬ್ಯಾಂಡ್ ಹೊಂದಿರಲಿದೆ. ಹೊಸ ಸಿಟಿ ಕಾರಿನಲ್ಲಿ ಡ್ಯುಯಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್ 15 ಬಿ) ನೀಡಲಾಗುತದೆ. ಈ ಹೊಸ ಎಂಜಿನ್ 119 ಬಿಎಚ್‌ಪಿ ಮತ್ತು ಸುಮಾರು 155 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಇನ್ನು ಸಿಟಿ ಝಡ್ಎಕ್ಸ್ ನಲ್ಲಿ ಹೋಂಡಾ ಲೇನ್ ವಾಚ್ ಕ್ಯಾಮೆರಾ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದನ್ನು ಎಡ ಭಾಗದ ರೇರ್ ವ್ಯೂ ಮಿರರ್‍ ನಲ್ಲಿ ಈ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

2020ರ ಹೋಂಡಾ ಸಿಟಿ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ. ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಟಾಪ್ ವೆರಿಯೆಂಟ್ ಆಗಿರುವ ಹೋಂಡಾ ಸಿಟಿ ಝಡ್ಎಕ್ಸ್ ನಲ್ಲಿ ಹೂಸ ಫೀಚರ್ಸ್‍ಗಳನ್ನು ಅಳವಡಿಸಿದೆ. ಸಿಟಿ ಝಡ್ಎಕ್ಸ್ ವೆರಿಯೆಂಟ್‍ನಲ್ಲಿ ಎಲ್ಇಡಿ ಹೆಡ್‍ ಲೈಟ್, ಎಲ್ಇಡಿ ಟೇಲ್ ಲ್ಯಾಂಪ್, ಆರು ಏರ್‌ಬ್ಯಾಗ್‌ಗಳು, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ನಂತಹ ಹಲವಾರು ಉನ್ನತ ಫೀಚರ್ ಗಳನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ 2020ರ ಹೋಂಡಾ ಸಿಟಿ ಕಾರು

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. 2020ರ ಹೋಂಡಾ ಸಿಟಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಹೋಂಡಾ honda
English summary
5th-gen Honda City to be available in VX and ZX trims. Read In Kannada.
Story first published: Saturday, June 13, 2020, 19:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more