ಬಹಿರಂಗವಾಯ್ತು ಬಿಎಸ್-6 ಹೋಂಡಾ ಸಿಟಿ ಕಾರಿನ ಮಾಹಿತಿ
ಹೋಂಡಾ ಕಂಪನಿಯು ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಹೋಂಡಾ ಕಂಪನಿಯು 2020ರ ಹೋಂಡಾ ಸಿಟಿ ಕಾರನ್ನು ಇದೇ ತಿಂಗಳು 16ರಂದು ಭಾರತದಲ್ಲಿ ಅನಾವರಣಗೊಳಿಸಲಿದೆ.

ಈ ಹೋಂಡಾ ಸಿಟಿ ಕಾರಿನ ಬುಕ್ಕಿಂಗ್ ಕೂಡ ಅದೇ ದಿನ ಪ್ರಾರಂಭವಾಗುವ ಸಾಧ್ಯತೆಗಳಿದೆ. ಹೊಸ ಸಿಟಿ ಕಾರಿನ ಪ್ರಮುಖ ಮಾಹಿತಿಗಳು ಆನ್‍ಲೈನ್‍ನಲ್ಲಿ ಸೋರಿಕೆಯಾಗಿವೆ. ಸೋರಿಕೆಯಾದ ಮಾಹಿತಿಗಳ ಪ್ರಕಾರ ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,784 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಹೊಸ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ.

ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

2020ರ ಹೋಂಡಾ ಸಿಟಿ ಶಾರ್ಪರ್ ಹೆಡ್‍ಲ್ಯಾಂಪ್‍ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯುನಿಟ್‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍ಲೈನ್ ಮತ್ತು ದೊಡ್ಡ ಒಆರ್‍ವಿಎಂಗಳಿವೆ.

ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿಡ್‍ಗಳಿವೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍ರೆಸ್ಟ್, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಹೊಸ ಟಚ್‍ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.

ಹೊಸ ಸಿಟಿ ಕಾರು 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 119 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಜೊತೆಗೆ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್‍ಗಳೊಂದಿಗೆ 5 ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಹೊಂದಿರುತ್ತದೆ.

ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications